ಮೇ ೧೫ ರಿಂದ ಭದ್ರಾ ನಾಲೆಗಳಿಗೆ ನೀರು ಬಂದ್
ಶಿವಮೊಗ್ಗ : ಬೇಸಿಗೆ ಬೆಳೆಗಳಿಗಾಗಿ ಭದ್ರಾ ಅಚ್ಚುಕಟ್ಟು ನಾಲೆಗಳಲ್ಲಿ ಹರಿಸಲಾಗುತ್ತಿರುವ ನೀರನ್ನು ಮೇ ೧೫ ಕ್ಕೆ ನಿಲ್ಲಿಸಲಾಗುವುದು. ಹಾಗೂ ನೀರಿನ ಅವಶ್ಯಕತೆಗನುಸಾರವಾಗಿ ಮೇ ೨೦ ರವರೆಗೆ ಹೆಚ್ಚುವರಿಯಾಗಿ ನೀರು ಹರಿಸಲಾಗುವುದು ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ತೀರ್ಮಾನಿಸಿತು.ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಪವಿತ್ರಾ ರಾಮಯ್ಯ ಇವರ ಅಧ್ಯಕ್ಷತೆಯಲ್ಲಿ ಇಂದು ಮಲವಗೊಪ್ಪದ ಕಚೇರಿಯಲ್ಲಿ ನಡೆದ ೮೦ ನೇ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಅಧ್ಯಕ್ಷತೆ ವಹಿಸಿದ್ದ ಕಾಡಾ …