ಶಿವಮೊಗ್ಗ

ಕಾವೇರಿ ಜಲಾನಯನ ಪ್ರದೇಶದಲ್ಲಿ ತಗ್ಗಿದ ವರುಣಾ

ಕೆ.ಆರ್.ಎಸ್ ಡ್ಯಾಂನ ಒಳವಹರಿವು ಬಾರಿ ಇಳಿಕೆ.
17,455 ಕ್ಯೂಸೆಕ್ ಗೆ ಇಳಿದ ಡ್ಯಾಂನ ಒಳಹರಿವು.
ನಿನ್ನೆ 32 ಸಾವಿರ ಇದ್ದ ಒಳಹರಿವು.

ಭಾರೀ ಗಾಳಿ, ಮಳೆ ಸಾಧ್ಯತೆ : ಕೊಡಗು, ಕರಾವಳಿಗೆ ಎಲ್ಲೋ ಅಲರ್ಟ್…!

ಕರಾವಳಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದಲೂ ಎಡೆಬಿಡದೆ ಸುರಿಯುತ್ತಿರುವ ಮಳೆ ರಾಯ ಮತ್ತೆ ಆರ್ಭಟಿಸುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಉಡುಪಿ, ದಕ್ಷಿಣ ಕನ್ನಡ ಮಾತ್ರವಲ್ಲದೇ ಕೊಡಗು ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗಲಿದ್ದು, ನಾಳೆ ಭಾರೀ ಗಾಳಿ ಬೀಸಲಿದೆ. ಅಲ್ಲದೇ ಜುಲೈ 13ರಿಂದ ಮತ್ತೆ ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಾಯಿಗೆ ಬಟ್ಟೆ ತುರುಕಿ ನೀರಾವರಿ ಇಲಾಖೆ ಇಂಜಿನಿಯರ್ ಪತ್ನಿಯ ಕೊಲೆ

ಶಿವಮೊಗ್ಗ: ನೀರಾವರಿ‌ ಇಲಾಖೆಯ ಇಂಜಿನಿಯರ್ ಪತ್ನಿಯನ್ನು ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ವಿಜಯನಗರದಲ್ಲಿ ಬೆಳಕಿಗೆ ಬಂದಿದೆ. ವಿಜಯನಗರದ ಕಮಲಮ್ಮ(57) ಕೊಲೆಯಾದ ಮಹಿಳೆ. ಪತಿ ಮಲ್ಲಿಕಾರ್ಜುನ ಗೋವಾಕ್ಕೆ ತೆರಳಿದ್ದರು.  ಕಮಲಮ್ಮ ಮನೆಯಲ್ಲಿ ಒಬ್ಬರೆ ಇರುವುದನ್ನು ಗಮನಿಸಿದ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ.   ಕಮಲಮ್ಮ ಅವರ ಪತಿ ಚಿತ್ರದುರ್ಗದಲ್ಲಿ ನೀರಾವರಿ ಇಲಾಖೆಯಲ್ಲಿ ಇಂಜಿನಿಯರ್ ಆಗಿದ್ದು, ಪುತ್ರ ಬೆಂಗಳೂರಿನಲ್ಲಿ ಎಂಬಿಬಿಎಸ್ ಓದುತ್ತಿದ್ದಾನೆ. ಕಮ್ಮಲಮ್ಮ ಒಬ್ಬರೇ ಮನೆಯಲ್ಲಿ ಇದ್ದರು. ರಾತ್ರಿ ಪತಿ ಮತ್ತು ಪುತ್ರ ಇಬ್ಬರೂ …

ಬಾಯಿಗೆ ಬಟ್ಟೆ ತುರುಕಿ ನೀರಾವರಿ ಇಲಾಖೆ ಇಂಜಿನಿಯರ್ ಪತ್ನಿಯ ಕೊಲೆ Read More »

ಶಿವಮೊಗ್ಗ ನಗರ ಸಂಚಾರಿ ಸುವ್ಯವಸ್ಥೆಗೆ ವ್ಯಾಪಕ ಕ್ರಮ ಜಾರಿ

ಶಿವಮೊಗ್ಗ: ನಗರದಲ್ಲಿ ಕರ್ಕಶ ಶಬ್ದವನ್ನುಂಟು ಮಾಡುವ ಹಾರ್ನ್ಗಳನ್ನು ಅಳವಡಿಸಿರುವ ವಾಹನಗಳ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಿ, ಒಟ್ಟು ೩೯ ವಾಹನಗಳನ್ನು ವಶಕ್ಕೆ ಪಡೆದು, ವಾಹನ ಚಾಲಕರು / ಮಾಲೀಕರ ವಿರುದ್ಧ ಐಎಂವಿ ಕಾಯ್ದೆಯಡಿಯಲ್ಲಿ ೩೯ ಪ್ರಕರಣಗಳನ್ನು ದಾಖಲಿಸಲಾಗಿರುತ್ತದೆ.

ಕಟುಕರ ರೀತಿ ಮಾತನಾಡುವುದು ಸರಿಯಲ್ಲ: ಸಚಿವ ವೆಂಕಟೇಶ್​ಗೆ ಆರಗ ಜ್ಞಾನೇಂದ್ರ ತಿರುಗೇಟು

ಶಿವಮೊಗ್ಗ: ಪಶು ಸಂಗೋಪನ ಇಲಾಖೆ ಸಚಿವ ವೆಂಕಟೇಶ್ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಗೃಹ ಸಚಿವ ಮತ್ತು ತೀರ್ಥಹಳ್ಳಿ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ, ಗೋವು ಕಡಿಯುವುದರಲ್ಲಿ ಸಾರ್ಥಕತೆ ಇಲ್ಲ. ಬದಲಿಗೆ ಗೋವು ಸಾಕುವುದರಲ್ಲಿ ಸಾರ್ಥಕತೆ ಇದೆ ಎಂದು ಹೇಳಿದ್ದಾರೆ.

ಬಾರ್ ಕ್ಯಾಷಿಯರ್​​ ಮರ್ಡರ್​ ಕೇಸ್ : ಆರೋಪಿಯ ಕಾಲಿಗೆ ಗುಂಡಿಕ್ಕಿ ಬಂಧಿಸಿದ ಪೊಲೀಸರು

ಶಿವಮೊಗ್ಗ: ಬಾರ್ ಕ್ಯಾಷಿಯರ್ ಮರ್ಡರ್ ಕೇಸ್ಗೆ ಸಂಬಂಧಿಸಿದಂತೆ ಕೊಲೆ ಆರೋಪಿ ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆಗೆ ಯತ್ನಿಸಿದ್ದು, ಕಾಲಿಗೆ ಫೈರಿಂಗ್ ಮಾಡಿ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಮೇ ೧೫ ರಿಂದ ಭದ್ರಾ ನಾಲೆಗಳಿಗೆ ನೀರು ಬಂದ್

ಶಿವಮೊಗ್ಗ : ಬೇಸಿಗೆ ಬೆಳೆಗಳಿಗಾಗಿ ಭದ್ರಾ ಅಚ್ಚುಕಟ್ಟು ನಾಲೆಗಳಲ್ಲಿ ಹರಿಸಲಾಗುತ್ತಿರುವ ನೀರನ್ನು ಮೇ ೧೫ ಕ್ಕೆ ನಿಲ್ಲಿಸಲಾಗುವುದು. ಹಾಗೂ ನೀರಿನ ಅವಶ್ಯಕತೆಗನುಸಾರವಾಗಿ ಮೇ ೨೦ ರವರೆಗೆ ಹೆಚ್ಚುವರಿಯಾಗಿ ನೀರು ಹರಿಸಲಾಗುವುದು ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ತೀರ್ಮಾನಿಸಿತು.ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಪವಿತ್ರಾ ರಾಮಯ್ಯ ಇವರ ಅಧ್ಯಕ್ಷತೆಯಲ್ಲಿ ಇಂದು ಮಲವಗೊಪ್ಪದ ಕಚೇರಿಯಲ್ಲಿ ನಡೆದ ೮೦ ನೇ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಅಧ್ಯಕ್ಷತೆ ವಹಿಸಿದ್ದ ಕಾಡಾ …

ಮೇ ೧೫ ರಿಂದ ಭದ್ರಾ ನಾಲೆಗಳಿಗೆ ನೀರು ಬಂದ್ Read More »

ಜನರು ತಮ್ಮ ಹಕ್ಕುಗಳನ್ನು ಕೇಳುವಾಗ ಗಟ್ಟಿಯಾಗಿ ಕೇಳಬೇಕು

ಶಿವಮೊಗ್ಗ: ಪೂಜ್ಯ ಶ್ರೀಗಳು ರಾಜ್ಯಾದ್ಯಂತ ಸಂಚರಿಸಿ ಭೋವಿ ಸಮಾಜವನ್ನು ಸಂಘಟಿಸುವ ಪ್ರಯತ್ನ ಮಾಡಿದ್ದಾರೆ. ಜೊತೆಗೆ ಸಮಾಜದ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಹಕ್ಕುಗಳ ಬಗೆಗೆ ಗಟ್ಟಿ ಧ್ವನಿ ಎತ್ತಿದ್ದಾರೆ. ಸಮಾಜದ ತಳ ಸಮುದಾಯಗಳ ಜನರು ತಮ್ಮ ಹಕ್ಕುಗಳನ್ನು ಕೇಳುವಾಗ ಗಟ್ಟಿಯಾಗಿ ಕೇಳಬೇಕು, ಆಗ ಮಾತ್ರ ನ್ಯಾಯ ಸಿಗುತ್ತದೆ. ಈ ಕೆಲಸವನ್ನು ಶ್ರೀಗಳು ಮಾಡುತ್ತಿದ್ದಾರೆ. ಅವರಿಗೆ ನನ್ನ ಧನ್ಯವಾದಗಳು. ನಮ್ಮದು ವೃತ್ತಿ ಆಧಾರಿತ ಜಾತಿ ವ್ಯವಸ್ಥೆ. ಕಲ್ಲಿನ ಕೆಲಸ ಮಾಡುವುದರಿಂದ ಭೋವಿ ಸಮಾಜವನ್ನು ಸ್ಥಳೀಯ ಭಾಷೆಯಲ್ಲಿ ವಡ್ಡರು ಎಂದು …

ಜನರು ತಮ್ಮ ಹಕ್ಕುಗಳನ್ನು ಕೇಳುವಾಗ ಗಟ್ಟಿಯಾಗಿ ಕೇಳಬೇಕು Read More »

ಗೌರವಿಸುವುದು, ಪ್ರೋತ್ಸಾಹಿಸುವುದು ಇವೆಲ್ಲ ಮಾನವೀಕ ಮೌಲ್ಯಗಳು

ಸೊರಬ: ಅಭಿನಂದಿಸುವುದು, ಗೌರವಿಸುವುದು, ಪ್ರೋತ್ಸಾಹಿಸುವುದು ಇವೆಲ್ಲ ಮಾನವೀಕ ಮೌಲ್ಯಗಳು. ಹಣದ ಮೌಲ್ಯಕ್ಕಿಂತ ಇಂತಹ ಮೌಲ್ಯಗಳು ಮನುಷ್ಯತ್ವವನ್ನು ಬೆಳೆಸುವ ಜೊತೆಗೆ ಪರಸ್ಪರ ಪ್ರೀತಿ ವಿಶ್ವಾಸವನ್ನು ಗಟ್ಟಿಗೊಳಿಸುತ್ತವೆ ಎಂದು ಸಾಗರ ಶಾಸಕ ಹಾಲಪ್ಪ ತಿಳಿಸಿದರು. ತಾಲ್ಲೂಕು ಚಂದ್ರಗುತ್ತಿ ಹೋಬಳಿ ಅಬಸಿ ಗ್ರಾಮದಲ್ಲಿ ಜೋಷಿಫೌಂಡೇಶನ್ ಮತ್ತು ನಮ್ ಸಮಾಚಾರ ಪಾಕ್ಷಿಕ ಪತ್ರಿಕೆ ಏರ್ಪಡಿಸಿದ್ದ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಮತ್ತು ಅಬಸಿ ಗ್ರಾಮದ ಆದರ್ಶ, ಅಭಿಮಾನಿ, ಸ್ವಾಭಿಮಾನಿ, ಸಾಧಕರಿಗೆ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ …

ಗೌರವಿಸುವುದು, ಪ್ರೋತ್ಸಾಹಿಸುವುದು ಇವೆಲ್ಲ ಮಾನವೀಕ ಮೌಲ್ಯಗಳು Read More »

ಸ್ಥಿತಪ್ರಜ್ಞೆ ಹಾಗೂ ಸಮಯಪ್ರಜ್ಞೆ ಬಹಳ ಮುಖ್ಯ

ಶಿವಮೊಗ್ಗ, : ಸರ್ಕಾರಿ ನೌಕರರಲ್ಲಿ ಸ್ಥಿತಪ್ರಜ್ಞೆ ಹಾಗೂ ಸಮಯಪ್ರಜ್ಞೆ ಬಹಳ ಮುಖ್ಯ. ದಕ್ಷತೆಯಿಂದ ನಿಗದಿತ ಸಮಯದೊಳಗೆ ಜನರಿಗೆ ಕೆಲಸ ಮಾಡಿಕೊಡಬೇಕು. ಪಟ್ಟಭದ್ರಹಿತಾಸಕ್ತಿಗಳು ಅಲ್ಲೋಲಕಲ್ಲೋಲ ಮಾಡಲು ಪ್ರಯತ್ನಿಸುತ್ತಾರೆ. ಅದರೆ ದಕ್ಷತೆ, ಪ್ರಾಮಾಣಿಕತೆ, ಕಾರ್ಯಕ್ಷಮತೆಯಿಂದ ಅವರಿಗೆ ಉತ್ತರ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಶಿವಮೊಗ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ಸರ್ವೋತ್ತಮ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಜವಾಬ್ದಾರಿ ಅರಿತು ಹುದ್ದೆಗೆ ನ್ಯಾಯ ಒದಗಿಸಿ:ದೇಶದಲ್ಲಿ ಅತ್ಯಂತ ದಕ್ಷ …

ಸ್ಥಿತಪ್ರಜ್ಞೆ ಹಾಗೂ ಸಮಯಪ್ರಜ್ಞೆ ಬಹಳ ಮುಖ್ಯ Read More »

Translate »
Scroll to Top