ಸಿನಿಮಾ

ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ಕೊಲೆ? ನಟ ದರ್ಶನ್ಅರೆಸ್ಟ್?

ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದಾರೆ. ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎನ್ನಲಾಗಿದೆ.ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದಾರೆ. ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎನ್ನಲಾಗಿದೆ. ಈ ಪ್ರಕರಣ ಸದ್ಯ ಸೆನ್ಸೇಷನ್ ಸೃಷ್ಟಿ ಮಾಡಿದೆ. ಮೈಸೂರಿನ ಫರ್ಮ್ವಹೌಸ್ನಲ್ಲಿ ನಟ ದರ್ಶನ್ ಅರೆಸ್ಟ್ ಆಗಿದ್ದಾರೆ ಎಂದು ತಿಳಿದು ಬಂದಿದೆ.

ರಾಮೋಜಿ ಫಿಲ್ಮ್​ ಸಿಟಿ ಸ್ಥಾಪಕ ರಾಮೋಜಿ ರಾವ್ ನಿಧನ; ಸಂತಾಪ ಕೋರಿದ ಚಿತ್ರರಂಗ

ರಾಮೋಜಿ ಫಿಲ್ಮ್ ಸಿಟಿ ಸಿದ್ದ ರಾಮೋಜಿ ರಾವ್ ಅವರು ಇಂದು (ಜೂನ್ ೮) ನಿಧನ ಹೊಂದಿದ್ದಾರೆ. ಅವರಿಗೆ ೮೭ ರ್ಷಿ ವಯಸ್ಸಾಗಿತ್ತು. ಹಲವು ರ್ಷಿಗಳಿಂದ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇದಕ್ಕಾಗಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಅವರ ನಿಧನ ವರ್ತೆಹ ಅನೇಕರಿಗೆ ದುಃಖ ತಂದಿದೆ. ಟಾಲಿವುಡ್ನ ಅನೇಕ ಸೆಲೆಬ್ರಿಟಿಗಳು ಇವರ ಸಾವಿಗೆ ಸಂತಾಪ ಸೂಚಿಸಿದ್ದಾರೆ.

ವಿಚ್ಛೇದನ ಪಡೆದ ಚಂದನ್​ ಶೆಟ್ಟಿ-ನಿವೇದಿತಾ ಗೌಡ? ದಂಪತಿ ಬಗ್ಗೆ ಶಾಕಿಂಗ್​ ಸುದ್ದಿ

ಬೆಂಗಳೂರು: ಕನ್ನಡ ಗಾಯಕ ಚಂದನ್ ಶೆಟ್ಟಿ ಮತ್ತು ನಟಿ ನಿವೇದಿತಾ ಗೌಡ ಅವರ ಸಂಸಾರದಲ್ಲಿ ಬಿರುಕು ಮೂಡಿದೆ ಎಂದು ಮೂಲಗಳು ತಿಳಿಸಿವೆ. ಹಾಗಾಗಿ ಅವರು ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಇಂದೇ (ಜೂನ್ ೭) ಅವರು ಡಿವೋರ್ಸ್ ಪಡೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳುವುದು ಬಾಕಿ ಇದೆ.

ಮುಖೇಶ್ ಅಂಬಾನಿಯ ಕಿರಿಯ ಪುತ್ರನ ಪ್ರೀ ವೆಡ್ಡಿಂಗ್‌ ‍ಪಾರ್ಟಿಯಲ್ಲಿ ರಾಮೇಶ್ವರಂ ಕೆಫೆ ಫುಡ್​

ಬೆಂಗಳೂರು: ರಾಮೇಶ್ವರಂ ಕೆಫೆ ಶುರುವಾದ ಕೆಲವೇ ರ್ಷೆಗಳಲ್ಲಿ ಭಾರತದಾದ್ಯಂತ ಬ್ರಾಂಚ್ಗಳನ್ನ ತೆರೆದು ಜನರ ಮನೆ ಮಾತಾಗಿದೆ. ರಿಲಾಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿಯ ಕಿರಿಯ ಪುತ್ರ ಅನಂತ್ ಅಂಬಾನಿಯ ಎರಡನೇ ಪ್ರೀ ವೆಡ್ಡಿಂಗ್ ಪರ್ಟಿಂ ಅದ್ಧೂರಿಯಾಗಿ ನಡೆದಿದ್ದು, ವಿಶೇಷ ಅಂದರೆ ಈ ಕರ್ಯ್ಕ್ರಮಕ್ಕೆ ಬೆಂಗಳೂರಿನ ರಾಮೇಶ್ವರಂ ಕೆಫೆ ಆಹಾರ ಪೂರೈಸಿದೆ. ಈ ಕುರಿತು ಸಂತಸವನ್ನು ರಾಮೇಶ್ವರಂ ಕೆಫೆ ಮಾಲೀಕ ರಾಘವೇಂದ್ರ ರಾವ್ ಸಾಮಾಜಿಕ ಮಾಧ್ಯಮದ ಮೂಲಕ ಹಂಚಿಕೊಂಡಿದ್ದಾರೆ.

ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ ಸುನಿಧಿ ರಂಗ ಪ್ರವೇಶ

ಬೆಂಗಳೂರು: ಹಾವೀರ ಲಲಿತಾಕಲಾ ಅಕಾಡೆಮಿಯ ಗುರು ವಿದುಷಿ ತನುಜಾ ಜೈನ್ ಅವರು ತಮ್ಮ ಶಿಷ್ಯೆ 15ರ ಹರೆಯದ ಕುಮಾರಿ ಸುನಿಧಿ ಮಂಜುನಾಥ್ ರಂಗ ಪ್ರವೇಶ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆಯಿತು.

ಇಳಯರಾಜ ನೊಟೀಸ್​ಗೆ ಪ್ರತಿಕ್ರಿಯಿಸಿದ ‘ಮಂಜ್ಞುಮೆಲ್ ಬಾಯ್ಸ್’ ಸಿನಿಮಾ ನಿರ್ಮಾಪಕ

ಮಲಯಾಳಂ ಸಿನಿಮಾ ‘ಮಂಜ್ಞುಮೆಲ್ ಬಾಯ್ಸ್’ಸೂಪರ್ ಡೂಪರ್ ಹಿಟ್ ಆಗಿದೆ. ‘ಮಂಜ್ಞುಮೆಲ್ ಬಾಯ್ಸ್’ ಸಿನಿಮಾ ನೈಜ ಘಟನೆಗಳನ್ನು ಆಧರಿಸಿದ ಸಿನಿಮಾ ಆಗಿದ್ದು, ಕಮಲ್ ಹಾಸನ್ ನಟನೆಯ ತಮಿಳಿನ ‘ಗುಣ’ ಸಿನಿಮಾದ ಕನೆಕ್ಷನ್ ಈ ಸಿನಿಮಾಕ್ಕಿದೆ. ‘ಗುಣ’ ಸಿನಿಮಾದ ಚಿತ್ರೀಕರಣ ನಡೆದಿದ್ದ ಗುಹೆಗೆ ಹೋದಾಗ ನಡೆದ ಅವಘಡ ಹಾಗೂ ಆ ಅನಿರೀಕ್ಷಿತ ಅವಘಡದಿಂದ ಒಂದು ಸ್ನೇಹಿತರ ತಂಡ ಹೇಗೆ ಹೊರಗೆ ಬರುತ್ತದೆ ಎಂಬುದೇ ಈ ಸಿನಿಮಾದ ಕತೆ. ಸಿನಿಮಾದಲ್ಲಿ ತಮಿಳಿನ ಗುಣ ಸಿನಿಮಾದ ಸೂಪರ್ ಹಿಟ್ ಹಾಡು ‘ಕಣ್ಮನಿ’ಯನ್ನು ಅದ್ಭುತವಾಗಿ ಬಳಸಿಕೊಳ್ಳಲಾಗಿದೆ. ಸಿನಿಮಾದ ಹೈಲೆಟ್ ಆ ಹಾಡು. ಆದರೆ ‘ಗುಣ’ ಸಿನಿಮಾದ ಸಂಗೀತ ನರ್ದೇತಶಕ ಇಳಯರಾಜ ತಮ್ಮ ಹಾಡನ್ನು ಅನುಮತಿ ಇಲ್ಲದೇ ಬಳಸಿರುವುದಕ್ಕೆ ‘ಮಂಜ್ಞುಮೆಲ್ ಬಾಯ್ಸ್’ ಸಿನಿಮಾದ ನಿರ್ಮಾಪಕರಿಗೆ ನೊಟೀಸ್ ನೀಡಿದ್ದರು. ಇದೀಗ ನರ್ಮಾನಪಕರು ಇಳಯರಾಜ ಅವರ ನೊಟೀಸ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಮೈಸೂರು: ಪತಿಯಿಂದಲೇ ಕಾಂಗ್ರೆಸ್ ನಾಯಕಿಯ ಹತ್ಯೆ!

ಮೈಸೂರು: ಮೈಸೂರು ಜಿಲ್ಲೆಯ ಬನ್ನೂರಿನ ತುರಗನೂರಿನಲ್ಲಿ ಕಾಂಗ್ರೆಸ್ ನಾಯಕಿಯೊಬ್ಬರನ್ನು ಪತಿಯೇ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ.

ಮಾನವ ಪ್ರಾಣಿ ಸಂಘರ್ಷ ತಗ್ಗಿಸಿದ ನೀರಿನ ತೊಟ್ಟಿಗಳು: ಸಂದೀಪ್ ಸೂರ್ಯವಂಶಿ

ಬಳ್ಳಾರಿ: ಈ ವರ್ಷ ಸುದೀರ್ಘ ಬೇಸಿಗೆಯ ಅವಧಿಯಲ್ಲಿ ಸಂಡೂರು ತಾಲೂಕಿನ ಎರಡೂ ವಲಯಗಳಲ್ಲಿ ನೀರಿನ ಕೊರತೆ ನೀಗಿಸಲು ಅರಣ್ಯ ಇಲಾಖೆಯು ಇಡೀ ತಾಲೂಕಿನ ಎಲ್ಲಾ ಕಾಡುಗಳ ಆಯಕಟ್ಟಿನ ಸ್ಥಳಗಳಲ್ಲಿ ವಿಶಾಲವಾದ ನೀರು ತೊಟ್ಟಿಗಳನ್ನು ನಿರ್ಮಿಸಿ ಕಾಲಕಾಲಕ್ಕೆ ನೀರು ತುಂಬಿಸಿದ್ದರಿಂದ ಮೊದಲ ಬಾರಿಗೆ ತಾಲೂಕಿನಲ್ಲಿ ಮಾನವ ಮತ್ತು ವನ್ಯ ಪ್ರಾಣಿಗಳ ನಡುವಿನ ಸಂಘರ್ಷವನ್ನು ತಪ್ಪಿಸಲಾಗಿದೆ ಎಂದು ಬಳ್ಳಾರಿ ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಸೂರ್ಯವಂಶಿ ಅವರು ತಿಳಿಸಿದ್ದಾರೆ.

ಹಿರಿಯ ನಟ, ನಿರ್ದೇಶಕ ದ್ವಾರಕೀಶ್ ವಿಧಿವಶ

ಕನ್ನಡ ಚಿತ್ರರಂಗದ ಹಿರಿಯ ನಟ,ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ಇಂದು ಬೆಳಿಗ್ಗೆ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ದ್ವಾರಕೀಶ್ (ಬಂಗ್ಲೆ ಶಾಮಾರಾವ್ ದ್ವಾರಕಾನಾಥ), ಒಬ್ಬ ಕನ್ನಡದ ನಟ, ನಿರ್ದೇಶಕ ಮತ್ತು ನಿರ್ಮಾಪಕ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸದಸ್ಯರು ಆಗಿದ್ದರು.

Translate »
Scroll to Top