ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ
ಹಾಸನ; ಕಾಫಿ ಬೆಳೆಗಾರರ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಶಾಶ್ವತ ಪರಿಹಾರ ಕಲ್ಪಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು ಹಾಸನದಲ್ಲಿಂದು ನಡೆದ ಜಿಲ್ಲಾ ಕಾಫಿ ಬೆಳೆಗಾರರ ಅನಧಿಕೃತ ಸಾಗುವಳಿಯನ್ನು ಸಾಗುವಳಿಯನ್ನು ಅಧಿಕೃತ ಗೊಳಿಸುವ ಕುರಿತ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಹಿಂದೆ ಆಡಳಿತ ನಡೆಸಿದ ಕಾಂಗ್ರೆಸ್, ಜನತಾದಳ ಸರ್ಕಾರಗಳು ಕಾಫಿ ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಯಾವುದೇ ಪ್ರಾಮಾಣಿಕ ಪ್ರಯತ್ನ ಮಾಡಲಿಲ್ಲ. ನಮ್ಮ ಸರ್ಕಾರದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಕಂದಾಯ …