ಮುಖ್ಯಮಂತ್ರಿ ಆಗಬೇಕಾದರೆ 2500 ಕೋಟಿ ಹಣ ನೀಡಬೇಕು
ಹುಬ್ಬಳ್ಳಿ : ಬಿಜೆಪಿಯಲ್ಲಿ ಯಾರಾದರೂ ಮುಖ್ಯಮಂತ್ರಿ ಆಗಬೇಕಾದರೆ 2500 ಕೋಟಿ ಹಣ ನೀಡಬೇಕು ಎಂದು ಹಿರಿಯ ರಾಜಕಾರಣಿ, ಕೇಂದ್ರದ ಮಾಜಿ ಸಚಿವರು, ಹಾಲಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯದ ಜನತೆಗೆ ತಿಳಿಸಿದ್ದಾರೆ. ಇಡೀ ದೇಶವೇ ತಲ್ಲಣಗೊಳ್ಳುವ ಈ ಸುದ್ದಿಯನ್ನು ಮಾಧ್ಯಮಗಳು ಪ್ರಸಾರ ಮಾಡಿದ್ದು, ದೊಡ್ಡ ಮಟ್ಟದ ಚರ್ಚೆಯಾಗುತ್ತಿದೆ. ಇನ್ನು ಮಂತ್ರಿ ಸ್ಥಾನಕ್ಕೆ 50 ರಿಂದ 100 ಕೋಟಿ ಹಣ ನೀಡಬೇಕು ಎಂದು ಕೇಳಿರುವ ಬಗ್ಗೆಯೂ ಅವರು ಪ್ರಸ್ತಾಪಿಸಿದ್ದಾರೆ. ಈ ವಿಚಾರವಾಗಿ ಎಸಿಬಿ ತನಿಖೆಯಾಗಬೇಕು ಎಂದು ನಾನು …