ಅಂಕಣಗಳು

ಹಂಪಿಯಲ್ಲಿ ಸುರಿದ ಮಳೆಗೆ ಉರುಳಿದ ಬಾಳೆ

ವಿಜಯನಗರ: ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ಘಟನೆ
ನಿನ್ನೆ ರಾತ್ರಿ ಸುರಿದ ಗಾಳಿ, ಮಳೆಗೆ ಸಾವಿರಾರು ಬಾಳೆಗಿಡಗಳು ನೆಲಕ್ಕುರುಳಿವೆ

ಮಾರ್ಚ್ 25 ರಿಂದ ಏಪ್ರಿಲ್ 26ರವರೆಗೂ ನಡೆದ ಎಸ್.ಎಲ್.ಎಲ್‌.ಸಿ ಪರೀಕ್ಷಾ ಫಲಿತಾಂಶ

ಬೆಂಗಳೂರು: ಒಟ್ಟು 4.36.138 ವಿದ್ಯಾರ್ಥಿಗಳಲ್ಲಿ (ಗಂಡು) 2.87.416 ಮಂದಿ ಉತ್ತೀರ್ಣರಾಗಿದ್ದಾರೆ. (ಶೇಕಡಾ 65.90%) ಒಟ್ಟು 4.23.829 ವಿದ್ಯಾರ್ಥಿನಿಯರಲ್ಲಿ 3.41.778 ಮಂದಿ ಉತ್ತೀರ್ಣರಾಗಿದ್ದಾರೆ.

ಉತ್ತರ ಕನ್ನಡ: ಸಿದ್ದಾಪುರ ತಾಲ್ಲೂಕಿನಲ್ಲಿ ಮಂಗನ ಕಾಯಿಲೆಗೆ ಮತ್ತೋರ್ವಬಾಲಕಿ ಸಾವು

ಸಿದ್ದಾಪುರ: ಮಲೆನಾಡಿಗರನ್ನು ಕಂಗೆಡಿಸಿರುವ ಮಂಗನ ಕಾಯಿಲೆಗೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್-ಕೆಎಫ್ಡಿ) ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಐದು ರ್ಷಿದ ಬಾಲಕಿ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾಳೆ.

ಮಂಡ್ಯದಲ್ಲಿ ನಿಂತಿಲ್ಲ ಭ್ರೂಣಲಿಂಗ ಪತ್ತೆ, ಹತ್ಯೆ: ಆರೋಗ್ಯ ಇಲಾಖೆ ಕ್ವಾಟರ್ಸ್​​ನಲ್ಲೇ ಕೃತ್ಯ

ಮಂಡ್ಯ: ಪಾಂಡವಪುರ ಆರೋಗ್ಯ ಇಲಾಖೆ ಕ್ವಾಟರ್ಸ್ ನಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ನಡೆಯುತ್ತಿರುವ ವಿಚಾರ ತಿಳಿದ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಮೋಹನ್, ತಾಲೂಕು ಆರೋಗ್ಯ ಅಧಿಕಾರಿ ಡಾ.ಅರವಿಂದ್ ಮತ್ತು ಪೊಲೀಸರು ಜಂಟಿಯಾಗಿ ದಾಳಿ ನಡೆಸಿದ್ದಾರೆ. ದಾಳಿ ವೇಳೆ ರ್ಭೂಪಾತಕ್ಕೆ ಬಂದಿದ್ದ ಮೈಸೂರು ಮೂಲದ ಮಹಿಳೆಯನ್ನು ರಕ್ಷಣೆ ಮಾಡಲಾಗಿದೆ. ದಾಳಿ ವೇಳೆ ರ್ಭಲಪಾತ ಮಾಡುವ ಯಂತ್ರೋಪಕರಣಗಳು ಜಪ್ತಿ ಮಾಡಿದ್ದಾರೆ. ಕೃತ್ಯದಲ್ಲಿ ಭಾಗಿಯಾಗಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ತಾಪಮಾನ ಹೆಚ್ಚಳ: ರಾಜ್ಯದ ೬ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಏರುತ್ತಲೇ ಇದ್ದು, ಉತ್ತರ ರ್ನಾ ಟಕದ ಆರು ಜಿಲ್ಲೆಗಳಿಗೆ ಮುಂದಿನ ಐದು ದಿನ ರೆಡ್ ಅರ್ಟ್ಿ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

‘ಕೋವಿಶೀಲ್ಡ್‌’ ಹಾಕಿಸಿಕೊಂಡಿರುವವರು ಫ್ರಿಜ್‌ ನೀರು, ಐಸ್‌ಕ್ರೀಮ್‌, ತಂಪು ಪಾನೀಯ ಕುಡಿಯಬಾರದು: ಆರೋಗ್ಯ ಇಲಾಖೆ ಸ್ಪಷ್ಟನೆ

ಬೆಂಗಳೂರು: ಕೋವಿಡ್ ಸಂರ್ಭವದಲ್ಲಿ ಕೋವಿಶೀಲ್ಡ್ ಹಾಕಿಸಿಕೊಂಡಿರುವವರು ಫ್ರಿಜ್ ನೀರು, ಐಸ್ಕ್ರೀಮ್ ಮತ್ತು ತಂಪು ಪಾನೀಯಗಳನ್ನು ಕುಡಿಯಬಾರದು ಎಂದು ಆರೋಗ್ಯ ಇಲಾಖೆ ತಿಳಿಸಿದೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ನವದೆಹಲಿ: ೫ ಶಾಲೆಗಳಿಗೆ ಬಾಂಬ್ ಬೆದರಿಕೆ, ಸ್ಥಳಕ್ಕೆ ದೌಡಾಯಿಸಿದ ಬಾಂಬ್ ನಿಷ್ಕ್ರಿಯ ದಳ

ನವದೆಹಲಿ: ದೆಹಲಿಯ ೫ ಶಾಲೆಗಳು ಹಾಗೂ ಪಶ್ಚಿಮ ಬಂಗಾಳದ ರಾಜಭವನಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಭೇಟಿ, ಪರಿಶೀಲನೆ ನಡೆಸುತ್ತಿದೆ.

ಮಾನವ ಜೀವಿತಾವಧಿ ಹೆಚ್ಚಳ – ಹಿರಿಯ ನಾಗರಿಕರ ಆರೋಗ್ಯ ರಕ್ಷಣೆ ದೊಡ್ಡ ಸವಾಲು – ಹೃದ್ರೋಗ ತಜ್ಞ ಡಾ. ದೇವಿ ಶೆಟ್ಟಿ

ಬೆಂಗಳೂರು: ಹಿರಿಯ ನಾಗರಿಕರ ಸಮಗ್ರ ಶ್ರೇಯೋಭಿವೃದ್ಧಿ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ಐಟಿ ದಿಗ್ಗಜ ಸೇನಾಪತಿ ಕ್ರಿಸ್ ಗೋಪಾಲ ಕೃಷ್ಣನ್, ಖ್ಯಾತ ಹೃದ್ರೋಗ ತಜ್ಞ ಡಾ. ದೇವಿಶೆಟ್ಟಿ ನೇತೃತ್ವದ “ವಯೋ ವಿಕಾಸ್” ಸಂಘಟನೆ ಹಿರಿಯ ನಾಗರಿಕರ ಆರೋಗ್ಯ, ನಾಗರಿಕ ಹಕ್ಕುಗಳ ರಕ್ಷಣೆ ಕುರಿತು ಮಹತ್ವದ ಸಮಾಲೋಚನೆ ನಡೆಸಿತು.

ರಾಜ್ಯದಲ್ಲಿ ೨೮,೬೫೭ ಬಾಲ ಗರ್ಭಿಣಿಯರು, ೧೦ ಇಲಾಖೆಗಳಿಗೆ ಸಿಎಂ ಸಿದ್ದರಾಮಯ್ಯ ಚಾಟಿ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ದಾಖಲೆಯ ಪ್ರಮಾಣದಲ್ಲಿ ಏರಿಕೆ ಕಂಡಿದೆ. ತಾಯ್ತನದ ವಯಸ್ಸಿಗೂ ಮೊದಲೆ ರಾಜ್ಯದಲ್ಲಿ ಬಾಲ ರ್ಭಿ ಣಿಯರ ಸಂಖ್ಯೆ ಏರಿಕೆ ಕಂಡಿರುವುದು ಆತಂಕಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ೨೮,೬೫೭ ಬಾಲ ರ್ಭಿ ಣಿಯರು ಕಂಡುಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸೇರಿದ್ದಂತೆ ಹತ್ತು ಇಲಾಖೆಗೆ ಚಾಟಿ ಬೀಸಿದ್ದಾರೆ.

ವಿಶ್ರೀಕೃವಿವಿ ಪ್ರಭಾರ ಕುಲಪತಿಯಾಗಿ ಪ್ರೊ. ತಿಪ್ಪೇರುದ್ರಪ್ಪ ಜೆ. ನೇಮಕ

ಬಳ್ಳಾರಿ: ಘನತೆವೆತ್ತ ರಾಜ್ಯಪಾಲರ ಸಚಿವಾಲಯದ ಅಧಿಸೂಚನೆ ಮೇರೆಗೆ, ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಯನ್ನಾಗಿ ಅನ್ವಯಿಕ ವಿಜ್ಞಾನ ನಿಕಾಯದ ಡೀನರಾದ ಪ್ರೊ. ತಿಪ್ಪೇರುದ್ರಪ್ಪ ಜೆ. ಅವರನ್ನು ನೇಮಕ ಮಾಡಲಾಗಿದೆ. ಪ್ರಭಾರ ಕುಲಪತಿಯಾಗಿದ್ದ ಪ್ರೊ. ವಿಜಯಕುಮಾರ ಬಿ. ಮಲಶೆಟ್ಟಿ ಅವರು ಅಧಿಕಾರವನ್ನು ಹಸ್ತಾಂತರ ಮಾಡಿದರು. ಪ್ರಭಾರ ಕುಲಪತಿಯಾಗಿದ್ದ ಪ್ರೊ. ವಿಜಯಕುಮಾರ ಬಿ. ಮಲಶೆಟ್ಟಿ ಯವರ ಅವಧಿ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರಭಾರ ಕುಲಪತಿಯಾಗಿ ಪ್ರೊ. ತಿಪ್ಪೇರುದ್ರಪ್ಪ ಜೆ. ಅವರು ಇಂದು ಅಧಿಕಾರ ಸ್ವೀಕರಿಸಿದರು.

Translate »
Scroll to Top