ಇತರೆ

ಪಾಕಿಸ್ತಾನಕ್ಕೆ ಪ್ರಧಾನಿ ಮೋದಿಯಂತಹ ನಾಯಕಬೇಕು: ಪಾಕಿಸ್ತಾನಿ ಉದ್ಯಮಿ

ಪ್ರಧಾನಿ ನರೇಂದ್ರ ಮೋದಿಯವರನ್ನು ಈ ಹಿಂದೆ ಪಾಕಿಸ್ತಾನದ ಸಂಸತ್ನಲ್ಲಿ ಹಾಡಿಹೊಗಳಲಾಗಿತ್ತು. ಇದೀಗ ಮೋದಿ ಅವರನ್ನು ಭಾರತವನ್ನು ಹೊಸ ಎತ್ತರಕ್ಕೆ ಕೊಂಡೊಯ್ದ ಪ್ರಬಲ ನಾಯಕ ಹಾಗೂ ಮೂರನೇ ಅವಧಿಗೆ ದೇಶದ ಪ್ರಧಾನಿಯಲಾಗಿದ್ದಾರೆ ಎಂದು ಪಾಕಿಸ್ತಾನಿ-ಅಮೆರಿಕನ್ ಉದ್ಯಮಿ ಸಾಜಿದ್ ತರಾರ್ ಹೇಳಿದ್ದಾರೆ. ಬಾಲ್ಟಿಮೋರ್ ಮೂಲದ ಪಾಕಿಸ್ತಾನಿ ಅಮೆರಿಕನ್ ಉದ್ಯಮಿ ಸಾಜಿದ್ ತರಾರ್ ಧಾನಿ ಮೋದಿ ಭಾರತಕ್ಕೆ ಮಾತ್ರವಲ್ಲ ಜಗತ್ತಿಗೆ ಒಳ್ಳೆಯದು ಪಾಕಿಸ್ತಾನಕ್ಕೂ ಅವರಂತಹ ನಾಯಕ ಸಿಗಲಿ ಎಂದು ಹೇಳಿದ್ದಾರೆ.

ಮುಂಬೈ ಇಂಡಿಯನ್ಸ್ ಎದುರು ಕೋಲ್ಕತ್ತಾ ನೈಟ್ ರೈಡರ್ಸ್‌ಗೆ ಗೆಲುವು

ಕೋಲ್ಕತ್ತಾ: ಇಲ್ಲಿನ ಈಡನ್ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ 2024ರ IPLನ 60ನೇ ಪಂದ್ಯದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಕೋಲ್ಕತ್ತಾ ನೈಟ್ ರೈಡರ್ಸ್ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿ ಅಧಿಕೃತವಾಗಿ ಪ್ಲೇಆಫ್ಗೆ ಎಂಟ್ರಿಕೊಟ್ಟಿದೆ. ಇದು ಕೆಕೆಆರ್ ತಂಡಕ್ಕೆ ಹಾಲಿ ಆವೃತ್ತಿಯಲ್ಲಿ ಆಡಿರುವ 12 ಪಂದ್ಯಗಳಲ್ಲಿ 9ನೇ ಗೆಲುವಾಗಿದೆ.

ಬೆಂಗಳೂರಿನಲ್ಲಿ ಕೆಎ​ಎಸ್ ಅಧಿಕಾರಿಯ ಪತ್ನಿ ಆತ್ಮಹತ್ಯೆ: ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಬೆಂಗಳೂರು: ಕೆಎಎಸ್ ಅಧಿಕಾರಿಯ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಸಂಜಯ್ನಗರದ ನಿವಾಸದಲ್ಲಿ ನಡೆದಿದೆ. ಚೈತ್ರಾಗೌಡ ಮೃತ ಮಹಿಳೆ. ವೃತ್ತಿಯಲ್ಲಿ ವಕೀಲರಾಗಿದ್ದರು. ಮನೆಯಲ್ಲಿ ಫ್ಯಾನ್ಗೆ ನೇಣುಬಿಗಿದ ಸ್ಥಿತಿಯಲ್ಲಿ ಶವಪತ್ತೆ ಆಗಿದೆ. ಸದ್ಯ ಘಟನಾ ಸ್ಥಳಕ್ಕೆ ಸಂಜಯ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮೃತ ದೇಹವನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಬೆಂಗಳೂರು: ತೃತೀಯ ಲಿಂಗಿಯನ್ನು ಕೊಂದ ಮಹಿಳೆ ಬಂಧನ

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದ ಹಿನ್ನೆಲೆಯಲ್ಲಿ ತೃತೀಯಲಿಂಗಿಯ ಕತ್ತು ಹಿಸುಕಿ ಕೊಂದ ೫೧ ರ್ಷೆದ ಮಹಿಳೆಯನ್ನು ಜೀವನ್ ಬೀಮಾ ನಗರ ಪೊಲೀಸರು ಬಂಧಿಸಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ಎದುರು ಗುಜರಾತ್ ಟೈಟನ್ಸ್‌ಗೆ 35 ರನ್‌ಗಳ ಗೆಲುವು

ಅಹಮದಾಬಾದ್: ಇಲ್ಲಿಯ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ 2024ರ ಐಪಿಎಲ್ 59ನೇ ಪಂದ್ಯದಲ್ಲಿ ಆತಿಥೇಯ ಗುಜರಾತ್ ಟೈಟನ್ಸ್ ತಂಡದ ಬ್ಯಾಟಿಂಗ್ ಅಬ್ಬರದ ಎದುರು ಚೆನ್ನೈ ಸೂಪರ್ ಕಿಂಗ್ಸ್ ತಂಡ 35 ರನ್ಗಳ ಸೋಲು ಅನುಭವಿಸಿದೆ.

ಕೊಡಗು: SSLC ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿ ತಲೆಕಡಿದು ಹತ್ಯೆ ಮಾಡಿದ್ದ ಆರೋಪಿ ಅರೆಸ್ಟ್

ಮಡಿಕೇರಿ: ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಸರ್ಲರಬ್ಬಿ ಗ್ರಾಮದಲ್ಲಿ ನಡೆದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಎಸ್ಎಲ್ಸಿ ಫಲಿತಾಂಶ ಹೊರ ಬಿದ್ದ ಮೇ ೦೯ರಂದು ಆರೋಪಿ ಬಾಲಕಿಯ ರುಂಡ ಕತ್ತರಿಸಿ ಎಸ್ಕೇಪ್ ಆಗಿದ್ದ. ಪೊಲೀಸರು ಹಲವು ತಂಡಗಳನ್ನು ಮಾಡಿ ಶೋಧ ಕರ್ಯ ನಡೆಸುತ್ತಿದ್ದರು. ಸದ್ಯ ಸೋಮವಾರಪೇಟೆ ತಾಲೂಕಿನ ಗ್ರಾಮವೊಂದರಲ್ಲಿ ಅಡಗಿದ್ದ ಆರೋಪಿ ಪ್ರಕಾಶ್ನನ್ನು ಸೋಮವಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಮಡಿಕೇರಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾಹಿತಿ ನೀಡಿದ್ದಾರೆ.

ವಾಕ್ಸಮರ ಅಂತ್ಯಗೊಳಿಸಿ ಸಂಧಾನಕ್ಕೆ ಮುಂದಾಗಿ: ರೂಪ-ರೋಹಿಣಿಗೆ ಸುಪ್ರೀಂಕೋರ್ಟ್ಸಲಹೆ

ಬೆಂಗಳೂರು: ಒಬ್ಬರು ಮತ್ತೊಬ್ಬರ ವಿರುದ್ಧ ಆರೋಪಗಳ ಮಾಡುವುದನ್ನು ಮುಂದುವರಿಸುವುದರ ಬದಲಾಗಿ ಸಂಧಾನ ಸಾಧ್ಯತೆಯತ್ತ ಗಮನಹರಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ಗೆ ಸುಪ್ರೀಂಕೋರ್ಟ್ ಮಂಗಳವಾರ ಸಲಹೆ ನೀಡಿದೆ.

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ, ಇಬ್ಬರನ್ನು ಹೊಡೆದು ಕೊಂದ ಜನ

ಮೇಘಾಲಯ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಜನರು ಹೊಡೆದು ಕೊಂದಿರುವ ಘಟನೆ ಮೇಘಾಲಯದ ಖಾಸಿ ಹಿಲ್ಸ್ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲಾ ಕೇಂದ್ರವಾಗಿರುವ ಮೈರಾಂಗ್ನ ನೊಂಗ್ತ್ಲಿವ್ ಗ್ರಾಮದಲ್ಲಿ ಶುಕ್ರವಾರ ಘಟನೆ ನಡೆದಿದೆ. ಪೊಲೀಸರ ಪ್ರಕಾರ ಬಾಲಕಿ ಮನೆಯಲ್ಲಿದ್ದಾಗ ಇಬ್ಬರೂ ಚಾಕುವಿನಿಂದ ಹಲ್ಲೆ ಮಾಡಿ ಅತ್ಯಾಚಾರಕ್ಕೆ ಪ್ರಯತ್ನಿಸಿದರು ಎಂದು ಆರೋಪಿಸಲಾಗಿದೆ.

ಹೇಮಂತ್‌ ರ‍್ಕರೆ ಸತ್ತಿದ್ದು ಕಸಬ್‌ನ ಬಂದೂಕಿನಿಂದಲ್ಲ, RSS ಲಿಂಕ್ ಇರೋ ಪೊಲೀಸ್ ನಿಂದ: ಕಾಂಗ್ರೆಸ್ ನಾಯಕ

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಕಾಂಗ್ರೆಸ್ನ ವಿಜಯ್ ವಾಡೆತ್ತಿವಾರ್ ಹೇಳಿಕೆಯಿಂದ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಉಂಟಾಗಿದೆ. ೨೦೦೮ರ ಮುಂಬೈ ದಾಳಿಯ ಸಂರ್ಭನದಲ್ಲಿ ರಾಜ್ಯ ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್) ಮಾಜಿ ಮುಖ್ಯಸ್ಥ ಐಪಿಎಸ್ ಹೇಮಂತ್ ರ್ಕಯರೆ ಅವರನ್ನು ಪಾಕಿಸ್ತಾನಿ ಭಯೋತ್ಪಾದಕ ಕಸಬ್ ಕೊಂದಿಲ್ಲ ಎಂದು ವಿಜಯ್ ವಾಡೆಟ್ಟಿವಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬಿಟ್‌ ಕಾಯಿನ್‌ ಹಗರಣ: ಡಿವೈಎಸ್‌ಪಿ ಶ್ರೀಧರ್ ಪೂಜಾರ್‌ಗೆ ಬಿಗ್ ರಿಲೀಫ್‌, ‘ಘೋಷಿತ ಆರೋಪಿ’ ಆದೇಶ ರದ್ದು

ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಆರೋಪಿಗಳನ್ನು ಅಕ್ರಮವಾಗಿ ತಮ್ಮ ವಶದಲ್ಲಿಟ್ಟುಕೊಂಡು ಹ್ಯಾಕಿಂಗ್, ಬಿಟ್ ಕಾಯಿನ್ಗಳ ರ್ಗಾ ವಣೆ ಮತ್ತು ಪಾಸ್ರ್ಡ್ ಬದಲಾವಣೆ ಮಾಡಿದ ಆರೋಪ ಎದುರಿಸುತ್ತಿರುವ ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀಧರ್ ಕೆ. ಪೂಜಾರ್ ವಿರುದ್ಧದ ಘೋಷಿತ ಆರೋಪಿ ಆದೇಶವನ್ನು ಹೈಕರ್ಟ್ರ ಗುರುವಾರ ರದ್ದುಪಡಿಸಿದೆ. ಅಲ್ಲದೇ, ಮೇ ೯ರಂದು ೮ ಗಂಟೆಗೆ ತನಿಖಾಧಿಕಾರಿಯ ಮುಂದೆ ಶ್ರೀಧರ್ ವಿಚಾರಣೆಗೆ ಹಾಜರಾಗಬೇಕು ಎಂದು ನರ್ದೇಠಶಿಸಿದೆ.

Translate »
Scroll to Top