ದಾವಣಗೆರೆ

ರಾಜ್ಯಕ್ಕೆ ಕೇಂದ್ರದ ಅನ್ಯಾಯ ವಿರೋಧಿಸುವುದು ತಪ್ಪೇ? – ಸಿಎಂ ಪ್ರಶ್ನೆ

ದಾವಣಗೆರೆ : ನವದೆಹಲಿಯಲ್ಲಿ ತೆರಿಗೆ ಹಂಚಿಕೆಯ ಬಗ್ಗೆ ರಾಜ್ಯದ ಪ್ರತಿಭಟನೆಯನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪವರು ಟೀಕಿಸಿರುವುದಕ್ಕೆ ಪ್ರತಿಕ್ರಯಿಸಿ, ರಾಜ್ಯಕ್ಕೆ ಕೇಂದ್ರದ ಅನ್ಯಾಯ ವಿರೋಧಿಸುವುದು ತಪ್ಪೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಜಾತಿ ವ್ಯವಸ್ಥೆ ಬೇರೂರಲು ವೈಚಾರಿಕ ಶಿಕ್ಷಣದ ಕೊರತೆ ಕಾರಣ : ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ : ಜಾತಿ ವ್ಯವಸ್ಥೆ ಬೇರೂರಲು ವೈಚಾರಿಕ ಶಿಕ್ಷಣದ ಕೊರತೆ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಪತ್ರಕರ್ತರು ವಿಶ್ವಾಸಾರ್ಹತೆ ಬೆಳೆಸಿಕೊಳ್ಳದಿದ್ದರೆ ವೃತ್ತಿಯ ವಿಶ್ವಾಸಾರ್ಹತೆ ಉಳಿಯುವುದಿಲ್ಲ: ಕೆ.ವಿ.ಪ್ರಭಾಕರ್

ದಾವಣಗೆರೆ : ಪತ್ರಕರ್ತರು ವಿಶ್ವಾಸಾರ್ಹತೆ ಬೆಳೆಸಿಕೊಳ್ಳದಿದ್ದರೆ ವೃತ್ತಿಯ ವಿಶ್ವಾಸಾರ್ಹತೆ ಉಳಿಯುವುದಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಆತಂಕ ವ್ಯಕ್ತಪಡಿಸಿದರು.

38 ನೇ ರಾಜ್ಯ ಸಮ್ಮೇಳನದ ಯಶಸ್ಸಿಗೆ ಶ್ರಮಿಸಿದ ಪದಾಧಿಕಾರಿಗಳಿಗೆ ಅಭಿನಂದಿಸಿದ ಕೆ.ವಿ.ಪ್ರಭಾಕರ್

ದಾವಣಗೆರೆ : ಅಚ್ಚುಮೊಳೆಯಿಂದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ವರೆಗೂ ಪತ್ರಿಕಾ ವೃತ್ತಿ ತಾಂತ್ರಿಕವಾಗಿ ಬಹಳ ಬದಲಾವಣೆ ಕಂಡಿದೆ. ಆದರೆ ಮೂಲ ಆಶಯ ಮತ್ತು ಬದ್ದತೆ ಮಾತ್ರ ಬದಲಾಗಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.

ಪಟ್ಟಭದ್ರರನ್ನು ಗುರುತಿಸಿ ಮಟ್ಟ ಹಾಕುವ ನಿಷ್ಠುರತೆಯನ್ನು ಪತ್ರಕರ್ತರು ಬೆಳೆಸಿಕೊಳ್ಳಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ : ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

38 ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾವಣಗೆರೆಯಲ್ಲಿ 38 ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿದರು.

ಗುತ್ತಿಗೆದಾರರ ಬಿಲ್ ಪಾಸು ಮಾಡಲು ತೊಂದರೆ: ದೂರು ನೀಡಿದರೆ ತನಿಖೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ನಗರೋತ್ಥಾನ ಯೋಜನೆಯಡಿ ಕಾಮಗಾರಿಯ ಬಿಲ್ ಪಾಸು ಮಾಡಲು ಅಧಿಕಾರಿಗಳು ಸತಾಯಿಸುತ್ತಿರುವ ಬಗ್ಗೆ ದೂರು ನೀಡಿದರೆ ತನಿಖೆ ಕೈಗೊಂಡು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಹೇಮ-ವೇಮ ಸದ್ಬೋಧನ ವಿದ್ಯಾಪೀಠದ ಕಾರ್ಯ ಶ್ಲಾಘನೀಯ

ದಾವಣಗೆರೆ : ಹೇಮ-ವೇಮ ಸದ್ಬೋಧನ ವಿದ್ಯಾಪೀಠಕ್ಕೆ ಒಂದು ದಶಕದ ಸಂಭ್ರಮ. 2012-13ರಲ್ಲಿ ಪ್ರಾರಂಭವಾದ ಉಚಿತ ವಿದ್ಯಾರ್ಥಿನಿಲಯವು 40 ಮಕ್ಕಳೊಂದಿಗೆ ಪುಟ್ಟ ಹೆಜ್ಜೆಯನಿಟ್ಟು ಪ್ರಸ್ತುತ ಸರಿಸುಮಾರು 2,000 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಈ ಸಂಸ್ಥೆಯಲ್ಲಿ ವಸತಿಯುತ ಶಿಕ್ಷಣ ಪಡೆಯುತ್ತಿದ್ದಾರೆ ಈ ವಿದ್ಯಾಪೀಠದ ಕಾರ್ಯ ಶ್ಲಾಘನೀಯ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ದನರೆಡ್ಡಿಯವರು ತಿಳಿಸಿದರು.

ಹೊಸಪೇಟೆಯಲ್ಲಿ ಡಿ.31ರಂದು 5 ಕೋಟಿ ರೂ. ಅರಣ್ಯ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ದಾವಣಗೆರೆ : ಅರಣ್ಯ ಭೂಮಿಗೆ ಸಂಬಂಧಿಸಿದ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಮತ್ತು ರೈತರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ಹೆಚ್ಚುವರಿ ಫಾರೆಸ್ಟ್ ಸೆಟಲ್ಮೆಂಟ್ ಅಧಿಕಾರಿ (ಎಸ್.ಎಫ್.ಓ.)ಗಳನ್ನು ನಿಯೋಜಿಸುವುದಾಗಿ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ನಮ್ಮ ಸಂವಿಧಾನ ನಮ್ಮ ಹೆಮ್ಮೆ

ಭಾರತದ ಪ್ರಜೆಗಳಾದ ನಾವು ಭಾರತವನ್ನು ಸಾರ್ವಭೌಮ, ಸಮಾಜವಾದಿ, ಜಾತ್ಯಾತೀತ, ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ರೂಪಿಸುವುದಕ್ಕಾಗಿ…’ ಹೀಗೆ ಆರಂಭಗೊಳ್ಳುವ ನಮ್ಮ ದೇಶದ ಸಂವಿಧಾನದ ಪೀಠಿಕೆ ಈ ದೇಶದ ಇಡೀ ಚಿತ್ರಣವನ್ನು ಸಂಕ್ಷಿಪ್ತವಾಗಿ ಕಟ್ಟಿಕೊಡುತ್ತದೆ. ಅಂದ ಹಾಗೆ ನವೆಂಬರ್ 26. ಇಂದಿಗೆ ಸರಿಯಾಗಿ 73 ವರ್ಷಗಳ ಹಿಂದೆ, ಅಂದರೆ ನವೆಂಬರ್‌ 26, 1949ರಂದು ಭಾರತಕ್ಕೊಂದು ಅಧಿಕೃತವಾದ ಸಂವಿಧಾನ ದೊರಕಿದ ದಿನ.

Translate »
Scroll to Top