ಮಂಡ್ಯ

ಬಿಜೆಪಿ ಮಾಡಿರುವ ದ್ರೋಹಕ್ಕೆ ಪಾಠ ಕಲಿಸಲು ಕಾಂಗ್ರೆಸ್ ಗೆ ಮತ ನೀಡಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಡ್ಯ, (ಮಳವಳ್ಳಿ) : ಕರ್ನಾಟಕಕ್ಕೆ ತೆರಿಗೆಯ ಆಗಿರುವ ಅನ್ಯಾಯದ ವಿರುದ್ಧ ಪ್ರತಿಭಟನೆ ಮಾಡಿದರೆ ಅವಮಾನ ಆಯಿತು ಎಂದು ಬಿಜೆಪಿಯವರು ಹೇಳುತ್ತಾರೆ. ಈ ದ್ರೋಹದ ವಿರುದ್ಧ ಅವರಿಗೆ ಪಾಠ ಕಲಿಸಬೇಕು ಎಂದರೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬೆಂಬಲ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಲೋಕಸಬಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನ : ಮುಖ್ಯ ಮಂತ್ರಿ ವಿಶ್ವಾಸ

ಮಂಡ್ಯ ( ಮಳವಳ್ಳಿ) : ಲೋಕಸಭೆ ಚುನಾವಣೆಗೆ ತಯಾರಿ ನಡೆಸುತ್ತಿದ್ದು ಈ ಬಾರಿ ಕನಿಷ್ಠ ಇಪ್ಪತ್ತು ಲೋಕಸಭಾ ಸ್ಥಾನಗಳನ್ನು ನಾವು ಗೆಲ್ಲಲಿದ್ದೇವೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ ವಿಚಾರ; ನಾನು ಯು ಟರ್ನ್ ಹೊಡೆಯುವ ಗಿರಾಕಿ ಅಲ್ಲ ಎಂದ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ವದಂತಿ, ಸುದ್ದಿಗಳನ್ನು ಸಾರಾಸಗಟಾಗಿ ತಳ್ಳಿ ಹಾಕಿದ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು; ನಾನು ಯು ಟರ್ನ್ ಹೊಡೆಯುವ ಗಿರಾಕಿ ಅಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಆರೋಗ್ಯ ಅಧಿಕಾರಿಗಳ ವಿರುದ್ಧ ಗರಂ ಆದ ಸಚಿವ ದಿನೇಶ್ ಗುಂಡೂರಾವ್

ಮಂಡ್ಯ : ಭ್ರೂಣ ಹತ್ಯೆ ಪ್ರಕರಣ ಹಿನ್ನೆಲೆ ಮಂಡ್ಯ ಬಳಿಯ ಆಲೆಮನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮಂಡ್ಯ ಆರೋಗ್ಯ ಅಧಿಕಾರಿಗಳ ವಿರುದ್ಧ ಗರಂ ಆದರು.

ನನ್ನ ಸರ್ಕಾರದ ತಪ್ಪುಗಳಿದ್ದರೆ ಮುಲಾಜಿಲ್ಲದೆ ಬರೆಯಿರಿ: ಸಿದ್ದರಾಮಯ್ಯ

ಮಂಡ್ಯ : ಕಾಗೆ ಚರ್ಚೆಗಳಿಂದ, ಮೌಡ್ಯ ಬಿತ್ತುವ ಕಾರ್ಯಕ್ರಮಗಳಿಂದ ಜನರಿಗೆ ಏನು ಪ್ರಯೋಜನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಕರ್ತರನ್ನು ಪ್ರಶ್ನಿಸಿದರು.

ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ. ರೈತರ ಹಿತ ಕಾಯುವುದು ಶತಸಿದ್ಧ: ಸಿದ್ದರಾಮಯ್ಯ ಅಭಯ

ಮಂಡ್ಯ : ನಾವು ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ. ಅಧಿಕಾರಕ್ಕಿಂತ ರೈತರ ಹಿತಾಸಕ್ತಿ ಕಾಪಾಡುವುದು ನಮಗೆ ಮುಖ್ಯ. ಎಂಥಾದ್ದೇ ಪರಿಸ್ಥಿತಿ ಬಂದರೂ ರೈತರ ಹಿತ ಕಾಯುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ ನೀಡಿದರು.

ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಸರಣಿ ಅಪಘಾತ : ಹೊತ್ತಿ ಉರಿದ ಕಾರು

ಮೈಸೂರು: ಶ್ರೀರಂಗಪಟ್ಟಣದಲ್ಲಿ ಹಾದು ಹೋಗಿರುವ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿ ಕಾರುಗಳು ನುಜ್ಜು ಗುಜ್ಜಾಗಿ ಕಾರೊಂದು ಹೊತ್ತಿ ಉರಿದ ಘಟನೆ ಇಂದು ಬೆಳಗ್ಗೆ ನಡೆದಿದೆ.

ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ವಿಫಲ : ಬಸವರಾಜ್ ಬೊಮ್ಮಾಯಿ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಬೆಂಗಳೂರು ಬಂದ್‍ಗೆ ಬಿಜೆಪಿ ಬೆಂಬಲ : ಸಿ.ಟಿ.ರವಿ

ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಇರುವಾಗ, ಮಂಡ್ಯದ ರೈತರ ಸಮಸ್ಯೆ ಅರ್ಥ ಮಾಡಿಕೊಳ್ಳದೆ, ಬೆಂಗಳೂರಿನ ಕುಡಿಯುವ ನೀರಿನ ಪರಿಸ್ಥಿತಿಯನ್ನೂ ಅರ್ಥ ಮಾಡದೆ ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸುತ್ತಿರುವುದು ಖಂಡನೀಯ. ಈ ಸಂಬಂಧ ಮಂಗಳವಾರ ನಡೆಯುವ ಬೆಂಗಳೂರು ಬಂದ್ಗೆ ಬಿಜೆಪಿ ಬೆಂಬಲ ಕೊಡಲಿದೆ ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಪ್ರಕಟಿಸಿದರು.

6ನೇ ಗ್ಯಾರಂಟಿಯಾಗಿ ಮದ್ಯಭಾಗ್ಯ; ಸರಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಟೀಕಾಪ್ರಹಾರ

ಮನೆಮನೆಗೂ ಮದ್ಯಭಾಗ್ಯ ನೀಡುವ ಮೂಲಕ ರಾಜ್ಯ ಕಾಂಗ್ರೆಸ್ ಸರಕಾರವು ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ಕರ್ನಾಟಕವನ್ನು ಕುಡುಕರ ತೋಟವನ್ನಾಗಿ ಮಾಡಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Translate »
Scroll to Top