ಮೈಸೂರು

ಪ್ರತಿಪಕ್ಷಗಳು ನೇಹಾ  ಪ್ರಕರಣವನ್ನು  ರಾಜಕೀಯಕ್ಕೆ  ಬಳಸುತ್ತಿದ್ದಾರೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಪ್ರತಿಪಕ್ಷಗಳು ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು. ನೇಹಾ ಕೊಲೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದ ಮುಖ್ಯಮಂತ್ರಿಗಳು, ಕೊಲೆಗಾರರನ್ನು ಕೂಡಲೇ ಬಂಧಿಸಲಾಗಿದೆ. ಇದು ಲವ್ ಜಿಹಾದ್ ಪ್ರಕರಣವಲ್ಲ. ರ್ಕಾ ರ ತನಿಖೆಯನ್ನು ಗಂಭೀರವಾಗಿ ಕೈಗೊಂಡಿದ್ದು. ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲು ಪ್ರಯತ್ನ ಮಾಡಲಾಗುವುದು ಎಂದರು.

ಮೋದಿ ಹುಟ್ಟಿಸಿದ ಭ್ರಮೆಗಳೆಲ್ಲಾ ಬೆತ್ತಲಾಗಿವೆ. ನೀವಿನ್ನೂ ಮೋದಿ ಭ್ರಮೆಯಲ್ಲಿದ್ಸೀರಾ: ಸಿ.ಎಂ.ಸಿದ್ದರಾಮಯ್ಯ ಪ್ರಶ್ನೆ

ಹುಣಸೂರು ಏ 13 : ಮೋದಿ ಹುಟ್ಟಿಸಿದ ಭ್ರಮೆಗಳೆಲ್ಲಾ ಬೆತ್ತಲಾಗಿವೆ. ನೀವಿನ್ನೂ ಮೋದಿ ಭ್ರಮೆಯಲ್ಲಿದ್ದೀರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕವಾಗಿ ಪ್ರಶ್ನಿಸಿದರು.
ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಜನಧ್ವನಿ-2 ಬೃಹತ್ ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತ್ತಾ ದೇಶದ ಜನತೆ ಹೇಗೆ ಭ್ರಮೆಗೆ ಒಳಗಾಗಿ ಮೋಸಹೋದರು ಎನ್ನುವುದನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು.

ದಿ ರಾಮೇಶ್ವರಂ ಕೆಫೆ ಬಾಂಬ್ ಆರೋಪಿಗಳ ಬಂಧನ ಎನ್.ಐ.ಎ ಹಾಗೂ ಕರ್ನಾಟಕ ಪೊಲೀಸ್ ಕಾರ್ಯ ಶ್ಲಾಘನೀಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ರಾಮೇಶ್ವರ ಕಾಫೆ ಬಾಂಬ್ ಸ್ಫೋಟದ ಪ್ರಮುಖ ಆರೋಪಿಗಳನ್ನು ಬಂಧಿಸಿರುವ ಎನ್.ಐ. ಎ ತಂಡ ಮತ್ತು ಕರ್ನಾಟಕ ಪೊಲೀಸ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಘಿಸಿದ್ದಾರೆ.
ಅವರು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಆರೋಪಿಗಳನ್ನು ಕೋಲ್ಕತ್ತಾದಿಂದ ಬೆಂಗಳೂರಿಗೆ ಕರೆ ತಂದ ನಂತರ ವಿಚಾರಣೆ ಮಾಡಿ ಹೆಚ್ಚಿನ ವಿವರ ಪಡೆಯಲಾಗುವುದು ಎಂದರು.

ನಮ್ಮ ಅಭ್ಯರ್ಥಿ ಎಂ.ಲಕ್ಷ್ಮಣ್ ಸಾಮಾನ್ಯ ಒಕ್ಕಲಿಗ ಕುಟುಂಬದಲ್ಲಿ ಜನಿಸಿ ಪ್ರಾಮಾಣಿಕ ಪರಿಶ್ರಮದಿಂದ ಮೇಲೆ ಬಂದ ಕಾರ್ಯಕರ್ತ: ಸಿ.ಎಂ.ಸಿದ್ದರಾಮಯ್ಯ

ಮೈಸೂರು : ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಜನರ ಧ್ವನಿ, ಸಂವಿಧಾನ ರಕ್ಷಣೆಯ ಧ್ವನಿ, ರಾಜ್ಯದ ಪರವಾದ ಧ್ವನಿ, ಸಾಮಾಜಿಕ ನ್ಯಾಯದ ಧ್ವನಿ, ಇವರು ನಮ್ಮ-ನಿಮ್ಮಲ್ಲರ ಧ್ವನಿಯಾಗಿ ಪಾರ್ಲಿಮೆಂಟಿಗೆ ಹೋಗ್ತಾರೆ. ಒಗ್ಗಟ್ಟಾಗಿ ಕೆಲಸ ಮಾಡಿ ಗೆಲ್ಲಿಸಿ ಕಳಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಬರಸಂಕಷ್ಟಕ್ಕೆ ಸ್ಪಂದಿಸದ ಬಿಜೆಪಿಯವರಿಗೆ ಜನರು ಮತ ನೀಡಬೇಕೆ : ಸಿಎಂ ಪ್ರಶ್ನೆ

ಮೈಸೂರು : ರಾಜ್ಯದ ಜನರಿಗೆ ಬರಸಂಕಷ್ಟದಲ್ಲಿ ಸಹಾಯಕ್ಕೆ ಬರದ ಕೇಂದ್ರ ಸಚಿವ ಅಮಿತ್ ಶಾ ಅವರು, ರಾಜ್ಯದ ಜನರ ಬಳಿ ಮತ ಕೇಳಲು ಯಾವ ನೈತಿಕ ಹಕ್ಕಿದೆ. ಇಂತಹ ಬಿಜೆಪಿಯವರಿಗೆ ಜನರು ಮತ ನೀಡಬೇಕೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ತಾವು 200 ಸ್ಥಾನ ಗೆಲ್ಲುವುದೂ ಕಷ್ಟ ಎನ್ನುವುದು ತಾನೇ ನಡೆಸಿದ ಆಂತರಿಕ ಸಮೀಕ್ಷೆಯಿಂದ BJP ಗೆ ಸ್ಪಷ್ಟವಾಗಿದೆ: ಸಿ.ಎಂ.ಸಿದ್ದರಾಮಯ್ಯ

ಮೈಸೂರು : ತಾವೇ ನಡೆಸಿರುವ ಆಂತರಿಕ ಸಮೀಕ್ಷೆಯಲ್ಲಿ ಬಿಜೆಪಿ ಕೇವಲ 200 ಲೋಕಸಭಾ ಸೀಟುಗಳನ್ನು ಗೆಲ್ಲುವುದೂ ಕಷ್ಟ ಎನ್ನುವುದು ಗೊತ್ತಾಗಿದೆ. ಹೀಗಾಗಿ ತಂತ್ರಗಾರಿಕೆ ಕಾರಣದಿಂದ 400 ಸೀಟು ಗೆಲ್ಲುವುದಾಗಿ ಹೇಳುತ್ತಿದೆ. ದೇಶದ ಜನರನ್ನು ನಿರಂತರವಾಗಿ ಮೂರ್ಖರನ್ನಾಗಿಸುತ್ತೇವೆ ಎಂದು ಹೊರಟವರೇ ಜನರ ಎದುರು ಮೂರ್ಖರಾಗುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.

ರಾಮೇಶ್ವರ ಕಫೆ ಸ್ಪೋಟ ಪ್ರಕರಣ : ಆರೋಪಿ ಪತ್ತೆಗೆ ತನಿಖೆ ಚುರುಕು: ಸಿಎಂ ಸಿದ್ದರಾಮಯ್ಯ

ಮೈಸೂರು: ಸ್ಫೋಟಕ ಇಟ್ಟು ಹೋಗಿದ್ದ ಆರೋಪಿಯ ಪತ್ತೆ ಹಚ್ಚುವ ಕಾರ್ಯ ಚುರುಕಾಗಿ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಂವಿಧಾನದ ರಕ್ಷಣೆ – ಜನರ ರಕ್ಷಣೆ : ಸಿ.ಎಂ.ಸಿದ್ದರಾಮಯ್ಯ

ಮೈಸೂರು : ಸಂವಿಧಾನ ರಕ್ಷಣೆ ಎಂದರೆ ಅದು ಜನರ ರಕ್ಷಣೆ ಮಾಡಿದಂತೆ. ಆದ್ದರಿಂದ ಸಂವಿಧಾನ ರಕ್ಷಣೆಗೆ ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ನ್ಯಾಯಯಾತ್ರೆಗೆ ತಡೆ: ಅಸ್ಸಾಂ ಸರ್ಕಾರದ ಕರ್ತವ್ಯ ಲೋಪ: ಸಿಎಂ ಸಿದ್ದರಾಮಯ್ಯ ತೀವ್ರ ಖಂಡನೆ

ಮೈಸೂರು : ಬಿಜೆಪಿಯವರು ನ್ಯಾಯ ಯಾತ್ರೆಗೆ ಉದ್ದೇಶಪೂರ್ವಕವಾಗಿಯೇ ಸಮಸ್ಯೆಗಳನ್ನು ಉಂಟುಮಾಡುತ್ತಿದ್ದಾರೆ. ಇದು ಸಂವಿಧಾನಬಾಹಿರವಾದ ಕ್ರಮ. ಒಬ್ಬ ಮುಖ್ಯಮಂತ್ರಿ ಸ್ಥಾನದಲ್ಲಿರುವವರು ಹೀಗೆಲ್ಲಾ ನಡೆದುಕೊಳ್ಳಬಾರದು. ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡಲು ಸಿಎಂ ಸೂಚನೆ

ಮೈಸೂರು : ಮೈಸೂರು ಹಾಗೂ ಸುತ್ತಮುತ್ತ ಸ್ಥಾಪಿಸಿರುವ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

Translate »
Scroll to Top