ರಾಜಕೀಯ

ಮುಡಾಹಗರಣ ತನಿಖೆಗೆ ಆಗ್ರಹಿಸಿ ಪಾದಯಾತ್ರೆಯಿಂದ ಹಿಂದಕ್ಕೆ ಸರಿಯುತ್ತಿದೆಯೇ ಜೆಡಿಎಸ್ ..?

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮುಡಾ ಹಾಗೂ ಮಹರ್ಷಿ ವಾಲ್ಮೀಕಿ ನಿಗಮದ ಹಗರಣಗಳನ್ನು ಮುಂದಿಟ್ಟುಕೊಂಡು ಬೆಂಗಳೂರು-ಮೈಸೂರು ಪಾದಯಾತ್ರೆಗೆ ಮುಂದಾಗಿದ್ದ ಬಿಜೆಪಿ ಮತ್ತು ಜೆಡಿಎಸ್ ನಡುವೆ ಅಪಸ್ವರ ಮೊಳಗುತ್ತಿದೆ. ಜೆಡಿಎಸ್ ಭದ್ರಕೋಟೆಯಲ್ಲಿ ಕಮಲ ಅರಳಿಸುವ ತಂತ್ರಗಾರಿಕೆಗೆ ಬ್ರೇಕ್ ಹಾಕುವ ಉದ್ದೇಶದಿಂದ ಪಾದಯಾತ್ರೆಯಿಂದ ಪಕ್ಷ ಹಿಂದೆ ಸರಿದಿದೆ ಎನ್ನಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ 40 ವರ್ಷಗಳ ಶುದ್ಧ ಹಸ್ತದ ಮುಖವಾಡ ಕಳಚಿದೆ

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಅಧಿಕಾರಿಗಳ ಮೇಲೆ ಎತ್ತಿ ಹಾಕುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಅವರ 40 ವರ್ಷಗಳ ಶುದ್ಧ ಹಸ್ತದ ಮುಖವಾಡ ಕಳಚಿ ಬಿದ್ದಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.

ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲು ಎ.ನಾರಾಯಣಸ್ವಾಮಿ ಆಗ್ರಹ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯವರು ಹಗರಣಗಳಿಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಕೇಂದ್ರದ ಮಾಜಿ ಸಚಿವ ಎ.ನಾರಾಯಣಸ್ವಾಮಿ ಅವರು ಆಗ್ರಹಿಸಿದರು.

ಲೋಕಸಭೆ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕಾರಣ ನಡೆದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : “ಯಾವ ಹೊಂದಾಣಿಕೆ ರಾಜಕಾರಣವೂ ನಡೆದಿಲ್ಲ. ಎಲ್ಲವೂ ಸುಳ್ಳು. ರಾಜ್ಯದಲ್ಲಿ ಎಲ್ಲಾ ಕಾರ್ಯಕರ್ತರು ಒಟ್ಟಾಗಿ ದುಡಿದಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ರಾಜಕೀಯವಾಗಿ ವಿಜೃಂಭಿಸುತ್ತಿರುವ ಕುಮಾರ ಸ್ವಾಮಿ: ಜೈಲು, ಬೇಲುಗಳ ತೊಳಲಾಟದಲ್ಲಿ ರೇವಣ್ಣ ಕುಟುಂಬ….!

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬದಲ್ಲಿ ಹಿಂದೆಂದೂ ಇಲ್ಲದಷ್ಟು ಸಂದಿಗ್ದತೆ ಎದುರಾಗಿದೆ. ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಎಚ್.ಡಿ. ಕುಮಾರ ಸ್ವಾಮಿ ಮತ್ತೊಮ್ಮೆ ಫೀನಿಕ್ಸ್ ನಂತೆ ಎದ್ದು ನಿಂತಿದ್ದಾರೆ. ಮತ್ತೋರ್ವ ಪುತ್ರ, ಮಾಜಿ ಸಚಿವ ಎಚ್.ಡಿ. ರೇವಣ್ಣ ಕುಟುಂಬ ರಾಜ್ಯದ ಇತಿಹಾಸದಲ್ಲಿ ಹಿಂದೆಂದೂ ಯಾವ ರಾಜಕಾರಣಿ ಕುಟುಂಬ ಕಂಡರಿಯದಷ್ಟು ಸಂಕಷ್ಟಕ್ಕೆ ಸಿಲುಕಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಸೇರಿ ನಾಲ್ವರಿಗೆ ಜುಲೈ ೪ ರವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ಚಿತ್ರರ್ದುಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ತೂಗುದೀಪ್ ಮತ್ತು ಗ್ಯಾಂಗ್ ಜೈಲು ಪಾಲಾಗಿದ್ದು, ನಾಲ್ವರು ಆರೋಪಿಗಳನ್ನು ೨೪ನೇ ಎಸಿಎಂಎಂ ಕರ್ಟ್ಾ ಶನಿವಾರ ಜುಲೈ ೪ ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಕರ್ನಾಟಕ, ಬಿಜೆಪಿಯ ಭದ್ರಕೋಟೆ ಎಂಬುದು ಸಾಬೀತು- ವಿಜಯೇಂದ್ರ ಅಭಿಪ್ರಾಯ

ಬೆಂಗಳೂರು: ದಕ್ಷಿಣ ಭಾರತದಲ್ಲಿ ಕರ್ನಾಟಕವು ಬಿಜೆಪಿಯ ಭದ್ರಕೋಟೆ ಎಂಬುದು ಮತ್ತೊಮ್ಮೆ ಲೋಕಸಭಾ ಚುನಾವಣೆಯಲ್ಲಿ ಸಾಬೀತಾಗಿದೆ. ಬಿಜೆಪಿ- ಜೆಡಿಎಸ್ ಒಟ್ಟಾಗಿರುವುದಕ್ಕೆ ರಾಜ್ಯದ ಜನರ ಆಶೀರ್ವಾದ ಲಭಿಸಿದೆ. ರಾಜ್ಯದಲ್ಲಿ 19 ಜನ ಎನ್ಡಿಎ ಸಂಸದರ ಆಯ್ಕೆಗೆ ಕಾರಣಕರ್ತರಾದ ಎಲ್ಲ ಕಾರ್ಯಕರ್ತರಿಗೆ ಅಭಿನಂದನೆಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.

ಕನ್ನಡದ ಉತ್ತಮ  ಸಾಹಿತಿಯನ್ನು ಕಳೆದುಕೊಂಡಿದ್ದೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕನ್ನಡದ ಉತ್ತಮ ಸಾಹಿತಿಯನ್ನು ನಾವು ಕಳೆದುಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರೈತರ ಬದುಕು ಮತ್ತು ಬವಣೆಗಳ ಬಗ್ಗೆ ಚೆಲ್ಲಾಟ ಆಡಿದರೆ ಹುಷಾರ್ : ಸಿಎಂ ಎಚ್ಚರಿಕೆ

ವಿಜಯನಗರ: ರೈತರಿಗೆ ಬೀಜ ಗೊಬ್ಬರದ ಕೊರತೆ ಆಗಬಾರದು. ಆದರೆ ನಿಮ್ಮನ್ನೇ ಹೊಣೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ನೀಟ್ ಪರೀಕ್ಷೆ  ಅಕ್ರಮ ಬಹುದೊಡ್ಡ ಹಗರಣ: ಸಚಿವ ಶರಣಪ್ರಕಾಶ್ ಪಾಟೀಲ್

ರಾಯಚೂರು: ವೈದ್ಯಕೀಯ ಪ್ರವೇಶಾತಿಗೆ ನಡೆಯುವ ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದ್ದು, ಪ್ರಧಾನಿ ನರೇಂದ್ರಮೋದಿ ಸರ್ಕಾರದ ಬಹುದೊಡ್ಡ ಹಗರಣ ಇದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಆರೋಪಿಸಿದ್ದಾರೆ.

Translate »
Scroll to Top