ರಾಜಕೀಯ

ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಪರವಾಗಿ ಸೂಚಕರು ನಾಮಪತ್ರ ಸಲ್ಲಿಕೆ

ಬಳ್ಳಾರಿ: ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಪರವಾಗಿ ಸೂಚಕರು ನಾಮಪತ್ರ ಸಲ್ಲಿಕೆ ಮಾಡಿದರು. ಈ ಸಂಧರ್ಭದಲ್ಲಿ ಮಾಜಿ ಶಾಸಕ ಜಿ.ಸೋಮಶೇಖರ್ ರೆಡ್ಡಿ, ರಾಜ್ಯ ಎಸ್ ಟಿ ಮೋರ್ಚಾದ ಅಧ್ಯಕ್ಷ ಬಂಗಾರು ಹನುಮಂತು, ವಿಜಯನಗರ ಜಿಲ್ಲೆಯ ಕಾರ್ಯದರ್ಶಿ ರಾಮಣ್ಣ, ವಿಜಯನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ಚನ್ನಬಸವನ ಗೌಡ ಅವರು ಉಪಸ್ಥಿತರಿದ್ದರು.

ರಾಜ್ಯದಲ್ಲಿ ಹಿಂದೂಗಳ ಮೇಲೆ ಮಿತಿಮೀರಿದ ಹಲ್ಲೆ, ಭಯೋತ್ಪಾದನಾ ಚಟುವಟಿಕೆ: ಆರ್.ಅಶೋಕ್

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ, ಟಿಪ್ಪು ಸಿದ್ಧಾಂತ ಇರುವ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಮೇಲೆ ರಾಜ್ಯದಲ್ಲಿ ಮೂಲಭೂತವಾದಿ ಇಸ್ಲಾಮಿಕ್ ಸಂಘಟನೆಗಳು, ಇಸ್ಲಾಮಿಕ್ ಕಾರ್ಯಕರ್ತರು ಪಾಕಿಸ್ತಾನ ಬೆಂಬಲಿತ ಕಾರ್ಯಕರ್ತರಿಂದ ಹಿಂದೂಗಳ ಮೇಲೆ ನಿರಂತರವಾಗಿ ಹಲ್ಲೆ, ಅವಹೇಳನ, ಧಮ್ಕಿ, ಭಯೋತ್ಪಾದನಾ ಚಟುವಟಿಕೆ, ಬಾಂಬ್ ಹಾಕುವ ಘಟನೆಗಳು ಮಿತಿ ಮೀರಿ ನಡೆಯುತ್ತಿವೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆಕ್ಷೇಪಿಸಿದರು.

ಈ ಬಾರಿ ಕೇಂದ್ರದಲ್ಲೂ BJP ಅಧಿಕಾರಕ್ಕೆ ಬರೋದಿಲ್ಲ: ಕೇಂದ್ರದಲ್ಲಿ INDIA ಅಧಿಕಾರಕ್ಕೆ ಬರುವುದರಿಂದ ಇಲ್ಲಿ ಸುಧಾಕರ್ ಸೋಲಿಸಿ : ಸಿ.ಎಂ.ಸಿದ್ದರಾಮಯ್ಯ ಕರೆ

ಚಿಕ್ಕಬಳ್ಳಾಪುರ: ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಅಭೂತಪೂರ್ವವಾಗಿ ರಕ್ಷಾ ರಾಮಯ್ಯ ಗೆಲ್ಲುತ್ತಾರೆ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಸ್ಪಷ್ಟವಾದ ಮಾತುಗಳಲ್ಲಿ ಘೋಷಿಸಿದರು.
ಚಿಕ್ಕಬಳ್ಳಾಪುರ ನಗರದಲ್ಲಿ ನಡೆದ ಬೃಹತ್ ರೋಡ್ ದಲ್ಲಿ ಮಾತನಾಡಿದರು. ನೀವೇ ತಿರಸ್ಕರಿಸಿದ NDA ಅಭ್ಯರ್ಥಿ ಸುಧಾಕರ್ ಮತ್ತೆ ಪ್ರಭಾವ ಬಳಸಿ ಲೋಕಸಭೆಗೆ ನಿಂತಿದ್ದಾರೆ. ಇವರನ್ನು ಈ ಬಾರಿಯೂ ಸೋಲಿಸಿದರೆ ನಿಮ್ಮ ಮತಕ್ಕೆ ಹೆಚ್ಚು ಗೌರವ ಬರುತ್ತದೆ ಎಂದು ಕರೆ ನೀಡಿದರು.

ಜೈ ಶ್ರೀರಾಮ್​ ಎಂದಿದ್ದಕ್ಕೆ ಹಲ್ಲೆ​​: ವಿಚಾರಣೆ ವೇಳೆ ಸತ್ಯ ಬಾಯ್ಬಿಟ್ಟ ಆರೋಪಿಗಳು

ಬೆಂಗಳೂರು, ಏಪ್ರಿಲ್ ೧೮: ನಗದರಲ್ಲಿ ಜೈಶ್ರೀರಾಮ್ ಎಂದಿದ್ದಕ್ಕೆ ಹಲ್ಲೆ ಮಾಡಿದ ಕೇಸ್ಗೆ ಬಂಧಿಸಿದಂತೆ ಈಗಾಗಲೇ ಪೊಲೀಸರು ಇಬ್ಬರು ಅಪ್ರಾಪ್ತರು ಸೇರಿದಂತೆ ನಾಲ್ವರನ್ನು ನಿನ್ನೆ ಬಂಧಿಸಿದ್ದಾರೆ. ವಿದ್ಯಾರಣ್ಯಪುರ ಪೊಲೀಸ್ ಠಾಣೆಗೆ ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮೀಪ್ರಸಾದ್ ಭೇಟಿ ನೀಡಿದ್ದು, ನಾಲ್ವರು ಆರೋಪಿಗಳ ವಿಚಾರಣೆ ಮಾಡಿದ್ದಾರೆ. ಯಾವುದೇ ಪ್ರೀಪ್ಲ್ಯಾನ್ ಕೂಡ ಇರಲಿಲ್ಲ. ಹಲ್ಲೆ ಮಾಡೋದು ನಮ್ಮ ಉದ್ದೇಶ ಆಗಿರಲಿಲ್ಲ ಎಂದು ಆರೋಪಿಗಳು ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾರೆ.
ನಾಡಿನೆಲ್ಲೆಡೆ ನಿನ್ನೆ ದಶರಥಸುತನ ಗುಣಗಾನ ಮಾಡಲಾಗಿದೆ. ಶ್ರೀರಾಮನವಮಿಯ ಸಂಭ್ರಮ ಮನೆ ಮಾಡಿತ್ತು. ಆದರೆ ಇದರ ಮಧ್ಯೆ ಬೆಂಗಳೂರಿನಲ್ಲಿ ರಾಮನವಮಿ ಮುಗಿಸಿ ಹೋಗುತ್ತಿದ್ದ ಯುವಕರನ್ನು ಅಡ್ಡಗಟ್ಟಿದ ಕೆಲ ಅನ್ಯಕೋಮಿನ ಯುವಕರು ಪುಂಡಾಟ ಮೆರೆದಿದ್ದರು. ಸದ್ಯ ಕೇಸ್ಗೆ ಸಂಬಂಧಿಸಿದಂತೆ ಪೊಲೀಸರಿಂದ ಇಬ್ಬರು ಅಪ್ರಾಪ್ತರು ಸೇರಿ ನಾಲ್ವರನ್ನು ಬಂಧಿಸಿ ವಿಚಾರಣೆ ಮಾಡಿದ್ದು, ಹಲ್ಲೆ ಮಾಡೋದು ನಮ್ಮ ಉದ್ದೇಶ ಆಗಿರಲಿಲ್ಲ ಎಂದು ಆರೋಪಿಗಳು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಜನ ಸಾಮಾನ್ಯರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತೆವೆಕಾಂಗ್ರೆಸ್‍ನ ವರಿಷ್ಠ ನಾಯಕ ರಾಹುಲ್‍ಗಾಂಧಿ ಭರವಸೆ

ಮಂಡ್ಯ: ಬಿಜೆಪಿ ಶ್ರೀಮಂತರ ಪರವಾಗಿ ಮಾತ್ರ ಯೋಚಿಸುತ್ತಿದ್ದು, ಬಡವರ ಬದುಕಿನ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಜನ ಸಾಮಾನ್ಯರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವುದಾಗಿ ಕಾಂಗ್ರೆಸ್ನ ವರಿಷ್ಠ ನಾಯಕ ರಾಹುಲ್ಗಾಂಧಿ ಭರವಸೆ ನೀಡಿದ್ದಾರೆ.

“ತೇಜಸ್ವಿ ಸೂರ್ಯ ಅವರಿಗೆ ವಿಶ್ವಕರ್ಮರ ಬೆಂಬಲ” – ಡಾ. ಬಿ. ಎಂ. ಉಮೇಶ್ ಕುಮಾರ್    

ಬೆಂಗಳೂರು: “ವಿಶ್ವಕರ್ಮ ಜನಾಂಗದ ಮೇಲೆ ಅಪಾರ ಪ್ರೀತಿ -ವಿಶ್ವಾಸ ಹೊಂದಿರುವ ಹಾಲಿ ಸಂಸದ ತೇಜಸ್ವಿ ಸೂರ್ಯ ಅವರನ್ನು ವಿಶ್ವಕರ್ಮ ಸಮುದಾಯ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬೆಂಬಲಿಸಲಿದೆ” ಎಂದು ಡಾ. ಬಿ. ಎಂ. ಉಮೇಶ್ ಕುಮಾರ್ ತಿಳಿಸಿದ್ದಾರೆ.

ಕನ್ನಡ ಸೇವೆಯನ್ನು ಮಾಡಿದ ಅಪರೂಪದ ನಟ ದ್ವಾರಕೀಶ್: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಸೇವೆಯನ್ನು ಮಾಡಿದ ಅಪರೂಪದ ನಟ ದ್ವಾರಕೀಶ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ರವೀಂದ್ರ ಕಲಾಕ್ಷೇತ್ರದಲ್ಲಿ ಖ್ಯಾತ ಚಲನಚಿತ್ರ ನಟ ನಿರ್ಮಾಪಕ ದಿ. ದ್ವಾರಕೀಶ್ರವರ ಪ್ರಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಪ್ರಧಾನಿಯವರ ಬೆಂಗಳೂರಿನ ಕಾರ್ಯಕ್ರಮಕ್ಕೆ  2 ಲಕ್ಷ ಜನ- ಶೋಭಾ ಕರಂದ್ಲಾಜೆ

ಬೆಂಗಳೂರು: ಇದೇ 20ರಂದು ಸಂಜೆ ಅರಮನೆ ಮೈದಾನಕ್ಕೆ ಆದರಣೀಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು ಆಗಮಿಸಲಿದ್ದು, ನಮ್ಮೆಲ್ಲರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ತಿಳಿಸಿದರು.

ಸ್ವತಂತ್ರ ಅಭ್ಯರ್ಥಿಯಾಗಿ ಅರುಣ್ ಹಿರೇಹಳ್  ನಾಮಪತ್ರ ಸಲ್ಲಿಕೆ

ಬಳ್ಳಾರಿ: ಜಿಲ್ಲಾ ಲೋಕಸಭಾ ಕ್ಷೆತ್ರಕ್ಕೆ ಸ್ವತಂತ್ರ ಅಭ್ಯರ್ಥಿಯಾಗಿ ಅರುಣ್ ಹಿರೇಹಾಳ್ ಇಂದು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ರೈತರ ಸಾಲ ಮನ್ನಾ – ರಕ್ಷಾ ರಾಮಯ್ಯ: ವ್ಯಾಪಕ ಪ್ರಚಾರ

ನೆಲಮಂಗಲ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ನೆಲಮಂಗಲ ವಿಧಾನಸಭಾ ಕ್ಷೇತ್ರದ ಸೋಂಪುರ, ಸೋಲೂರು ಹೋಬಳಿ ಭಾಗಗಳಲ್ಲಿ ತೀವ್ರ ಪ್ರಚಾರ ನಡೆಸಿದರು.

Translate »
Scroll to Top