ರಾಜಕೀಯ

ರಾಜ್ಯ ನೌಕರರಿಗೆ ಗುಡ್ ನ್ಯೂಸ್, ೭ನೇ ವೇತನ ಆಯೋಗದ‌ ಶಿಫಾರಸು ಜಾರಿಗೆ ಮುಂದಾದ ‍ಸರ್ಕಾರ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಬಹುನಿರೀಕ್ಷಿತ ೭ನೇ ವೇತನ ಆಯೋಗದ ಶಿಫಾರಸು ಜಾರಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮುಂದಾಗಿದೆ. ಇಂದು (ಜೂನ್ ೨೦) ವಿಧಾನಸೌಧದ ಸಿಎಂ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ ೭ನೇ ವೇತನ ಆಯೋಗದ ಶಿಫಾರಸು ಜಾರಿಗೆ ಅಧಿಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನೀಡಲಾಗಿದೆ. ಈ ಮೂಲಕ ಏಳನೇ ವೇತನ ಆಯೋಗ ಜಾರಿ ಮಾಡಬೇಕೆಂಬ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರುವ ಕಾಲ ಸನ್ನಿಹಿತವಾದಂತಾಗಿದೆ.

ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಭಾಷೆ, ನೆಲ, ಜಲವನ್ನು ಸಂರಕ್ಷಣೆ ಮಾಡಿಕೊಂಡು ಹೋಗುವ ಕೆಲಸ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ. ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ ಎಂದು ಮುಖ್ಯಮಂತ್ರಿ ಸಿದ್ದಾಮಯ್ಯ ಕರೆ ನೀಡಿದರು.

ಸರಕಾರದಿಂದ ವಿರೋಧ ಪಕ್ಷ ಹತ್ತಿಕ್ಕುವ ಕೆಲಸ- ಛಲವಾದಿ ನಾರಾಯಣಸ್ವಾಮಿ ಖಂಡನೆ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಿದ್ದು ಖಂಡನೀಯ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು.

ಭಂಡತನದ ನಿರ್ಧಾರ ಕೈಬಿಡಿ- ವಿಜಯೇಂದ್ರ ಆಗ್ರಹ

ಬೆಂಗಳೂರು: ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿಗಳು ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆಯ ಭಂಡತನದ ನಿರ್ಧಾರವನ್ನು ಕೈಬಿಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಒತ್ತಾಯಿಸಿದರು.

ಉತ್ತಮ ಮುಂಗಾರು ಮಳೆಯಾಗುವ ನಿರೀಕ್ಷೆ- ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರಿಕೆವಹಿಸುವಂತೆ ಪ್ರಿಯಾಂಕ್‌ ಖರ್ಗೆ ಸೂಚನೆ

ಬೆಂಗಳೂರು: ಈ ಬಾರಿ ಉತ್ತಮ ಮುಂಗಾರು ಮಳೆಯಾಗುವ ನಿರೀಕ್ಷೆಯಿದ್ದು, ಮುಂಜಾಗರೂಕತೆವಹಿಸದಿದ್ದಲ್ಲಿ ಕುಡಿಯುವ ನೀರು ಕಲುಷಿತಗೊಳ್ಳುವ ಪ್ರಕರಣಗಳು ಹೆಚ್ಚುವ ಸಾಧ್ಯತೆ ಇರುವುದರಿಂದ ಗ್ರಾಮೀಣ ನೀರು ಸರಬರಾಜು ಇಲಾಖೆಯ ಎಂಜನಿಯರುಗಳು ಅತ್ಯಂತ ಜಾಗರೂಕತೆಯಿಂದ ಕಾರ್ಯನಿರ್ವಹಿಸಿ, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರಿಕೆವಹಿಸಬೇಕೆಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ನಿರ್ದೇಶನ ನೀಡಿದರು.

ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಜುಲೈ 3 ರವರೆಗೆ ವಿಸ್ತರಿಸಿದ ‍ಕೋರ್ಟ್

ನವದೆಹಲಿ: ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ರ್ಗಾ ವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿ ನ್ಯಾಯಾಲಯವು ಜುಲೈ ೩ ರವರೆಗೆ ವಿಸ್ತರಿಸಿದೆ.

ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ, ಮಕ್ಕಳು ಮೌಡ್ಯದಿಂದ ಹೊರಗೆ ಬರಬೇಕು: ಸಿಎಂ ಸಿದ್ದರಾಮಯ್ಯ ಕರೆ

ಬೆಂಗಳೂರು: ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ. ಡಾಕ್ಟರ್ ಓದಿದವರು ಇನ್ನೂ ಮೌಡ್ಯ ಬಿಟ್ಟಿಲ್ಲ. ಓದಿದವರೇ ಇನ್ನೂ ಹಣೆಬರಹದಲ್ಲಿ, ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಟ್ಟುಕೊಂಡಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಇಂಥಾ ಮೌಡ್ಯದಲ್ಲಿ ನಂಬಿಕೆ ಇಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಕ್ರೀಡಾ, ಪರಿಶಿಷ್ಟ ಪಂಗಡಗಳ ಇಲಾಖೆ ಸಿಎಂ ಕೈಯಲ್ಲಿ, ಅಧಿಕಾರಿಗಳಿಗೆ ಸಿದ್ದರಾಮಯ್ಯ ಕ್ಲಾಸ್​​​

ಬೆಂಗಳೂರು: ಕರ್ನಾಟಕ ಮರ್ಹಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ತಲೆದಂಡವಾಗಿದೆ. ಸಚಿವ ಬಿ. ನಾಗೇಂದ್ರ ರಾಜಿನಾಮೆ ನೀಡುತ್ತಿದ್ದಂತೆ ಇವರು ನೋಡಿಕೊಳ್ಳುತ್ತಿದ್ದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿಯೇ ಇವೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡೂ ಇಲಾಖೆ ಪ್ರಗತಿ ಪರೀಶಲನಾ ಸಭೆ ನಡೆಸಿದರು.

 ‘ಆಶ್ರಮ ಶಾಲೆಯ ಮಕ್ಕಳು, ಬಡವರು ಹಾಗೂ ದಲಿತ ಮಕ್ಕಳ ಶಿಕ್ಷಣದ ಬಗ್ಗೆ ಕಡೆಗಣೆನೆಗೆ ಸಿಎಂ  ಅಧಿಕಾರಿಗಳ ವಿರುದ್ದ ಗರಂ

ಬೆಂಗಳೂರು: ಆಶ್ರಮ ಶಾಲೆಯ ಮಕ್ಕಳು, ಬಡವರು ಹಾಗೂ ದಲಿತ ಮಕ್ಕಳ ಶಿಕ್ಷಣದ ಬಗ್ಗೆ ನರ್ಲಪಕ್ಷ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆಗಿ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಇಂದು (ಮಂಗಳವಾರ) ಸಿಎಂ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳ ವಿರುದ್ದ ಫುಲ್ ಗರಂ ಆಗಿದ್ದಾರೆ.

ತೈಲ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ ಬರೀ‌ ನಾಟಕ: ಎಂ‌ ಬಿ ಪಾಟೀಲ

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನಾವು ಕೇವಲ ಮೂರು ರೂ. ಏರಿಸಿದ್ದೇವೆ ಅಷ್ಟೇ. ಮೋದಿ ಅಧಿಕಾರಕ್ಕೆ ಬಂದ ನಂತರ ಅಡುಗೆ ಅನಿಲ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಕ್ರಮವಾಗಿ 400, 38 ಮತ್ತು 35 ರೂ. ದುಬಾರಿ ಆಗಿದೆ. ಆಗ ತೆಪ್ಪಗಿದ್ದ ಬಿಜೆಪಿಯ ಅಶೋಕ್ ಮತ್ತು ವಿಜಯೇಂದ್ರ ಗ್ಯಾಂಗ್ ಈಗ ಪ್ರತಿಭಟಿಸುತ್ತಿರುವುದು ಬರೀ ನಾಟಕ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಎದಿರೇಟು ನೀಡಿದ್ದಾರೆ.

Translate »
Scroll to Top