ಬೆಂಗಳೂರು

ಅಬಕಾರಿ ಇಲಾಖೆಯಲ್ಲಿ  ಭ್ರಷ್ಟಾಚಾರ ನಡೆದಿದೆ ಎನ್ನುವುದನ್ನು ಪ್ರಧಾನಿ ಮೋದಿ ಸಾಬೀತುಪಡಿಸಿದರೆ ನಾನು ರಾಜಕೀಯದಿಂದ ನಿವೃತ್ತಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಅಬಕಾರಿ ಇಲಾಖೆಯಲ್ಲಿ ಒಂದು ಪೈಸೆಯಷ್ಟು ಭ್ರಷ್ಟಾಚಾರ ನಡೆದಿದೆ ಎನ್ನುವುದನ್ನು ಪ್ರಧಾನಿ ಮೋದಿ ಅವರು ಸಾಬೀತುಪಡಿಸಿದರೆ ನಾನು ರಾಜಕೀಯದಿಂದ ನಿವೃತ್ತಿಯಾಗುತ್ತೇನೆ. ಈ ಆರೋಪ ಸುಳ್ಳು ಎಂದಾದರೆ ಮೋದಿ ಅವರು ಪ್ರಧಾನಿ ಹುದ್ದೆಯನ್ನು ಬಿಡುತ್ತಾರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಇ-ಸ್ವತ್ತು ಮಂಜೂರಾತಿ ಪ್ರಕ್ರಿಯೆ ಸರಳೀಕರಣ ಹಾಗೂ ಸಬಲೀಕರಣಕ್ಕಾಗಿ ಕಾರ್ಯಪಡೆ ರಚನೆ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳ ಇ-ಸ್ವತ್ತು ಮಂಜೂರಾತಿ ಪ್ರಕ್ರಿಯೆಯನ್ನು ಸರಳೀಕರಣ ಹಾಗೂ ಸಬಲೀಕರಣಗೊಳಿಸುವ ಸಲುವಾಗಿ ಕಂದಾಯ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸುವ ಸಲುವಾಗಿ ಕಾರ್ಯಪಡೆಯೊಂದನ್ನು ರಚಿಸುವದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ರಾಜಕೀಯ ದ್ವೇಷದ ಕ್ರಮ : ಯಡಿಯೂರಪ್ಪ

ಬಳ್ಳಾರಿ: ಈ ಹಿಂದೆ ಕೋವಿಡ್-19 (ಕೊರೋನಾ) ವೈರಾಣು ಹರಡಿದ್ದ ಸಂದರ್ಭದಲ್ಲಿ ಪಿಪಿಇ ಕಿಟ್ ಖರೀದಿ ಹಗರಣ ನಡೆದಿದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರವು ಪ್ರಾಸಿಕ್ಯೂಷನ್ ಅನುಮತಿಗೆ ಶಿಫಾರಸ್ಸು ನೀಡಿರುವುದರ ಹಿಂದೆ ಕೇವಲ ರಾಜಕೀಯ ದ್ವೇಷ ಅಡಗಿದೆ ಎಂದು ಬಿಜೆಪಿ ಹಿರಿಯ ಧುರೀಣ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬಿಎಸ್‍ವೈ, ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್‍ಗೆ ಶಿಫಾರಸು

ಬೆಂಗಳೂರು: ಕೋವಿಡ್ ಸಮಯದಲ್ಲಿ ನಡೆದಿದೆ ಎನ್ನಲಾದ ಅಕ್ರಮದ ವಿಚಾರವಾಗಿ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ ಅಸ್ತ್ರ ಪ್ರಯೋಗಿಸಲು ರಾಜ್ಯ ಸರ್ಕಾರ ತಯಾರಿ ನಡೆಸಿದೆ. ನ್ಯಾ.ಮೈಕಲ್ ಡಿ ಕುನ್ನಾ ವರದಿ ಆಧಾರದ ಮೇಲೆ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಚೀನಾದಿಂದ ಪಿಪಿಇ ಕಿಟ್ ಖರೀದಿಸಿದ ವಿಚಾರವೇ ಈಗ ಕಾಂಗ್ರೆಸ್ ಸರ್ಕಾರದ ಪಾಲಿಗೆ ಬ್ರಹ್ಮಾಸ್ತ್ರವಾಗಿದೆ.

ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಒತ್ತಾಯ

ಬೆಂಗಳೂರು : ಲೋಕಾಯುಕ್ತದಲ್ಲಿ ನಡೆಯುತ್ತಿರುವ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಒತ್ತಾಯಿಸಿದ್ದಾರೆ.

ಅಬಕಾರಿ ಇಲಾಖೆಯಲ್ಲಿ 900 ಕೋಟಿ ರೂ. ಭ್ರಷ್ಟಾಚಾರದ ಆರೋಪ: ಸಿಬಿಐ ತನಿಖೆಗೆ ಒಳಪಡಿಸಿ ಎಂದು ಆರ್ ಅಶೋಕ ಆಗ್ರಹ

ಬೆಂಗಳೂರು : ಅಬಕಾರಿ ಇಲಾಖೆಯಲ್ಲಿ 900 ಕೋಟಿ ರೂ. ಭ್ರಷ್ಟಾಚಾರ ನಡೆದಿದ್ದು, ಇದನ್ನು ಕೂಡಲೇ ಸಿಬಿಐ ತನಿಖೆಗೆ ವಹಿಸಬೇಕು. ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆ ನೀಡಬೇಕು. ಇದು ಹಣದ ಅವ್ಯವಹಾರವಾಗಿರುವುದರಿಂದ ಜಾರಿ ನಿರ್ದೇಶನಾಲಯ ಕೂಡ ಕ್ರಮ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.

ವಿಜ್ಞಾನ ಮತ್ತು ತಂತ್ರಜ್ಞಾನದ ಮೂಲಕ ರೈತರ ಸಬಲೀಕರಣಕ್ಕೆ ಜಾಗೃತಿ ಎಕ್ಸ್ ಪೋ

ಬೆಂಗಳೂರು:ಮಧ್ಯವರ್ತಿಗಳಿಲ್ಲದೇ ಅಂತರರಾಷ್ಟ್ರೀಯ ಮಾರುಕಟ್ಟೆಗೆ ಮುಕ್ತ ಪ್ರವೇಶ ಪಡೆಯಲು ಫೋರ್ಟೆಕ್ಸ್ ಟ್ರೇಡ್ ಟೆಕ್ನಾಲಜೀಸ್ ಲಿಮಿಟೆಡ್ ಸಂಸ್ಥೆ ವಿಜ್ಞಾನ ಮತ್ತು ತಂತ್ರಜ್ಞಾನದ ಮೂಲಕ ರೈತರ ಸಬಲೀಕರಣಕ್ಕಾಗಿ ಜಾಗೃತಿ ಎಕ್ಸ್ ಪೋ ಆಯೋಜಿಸಿದ್ದು, ಮಧ್ಯವರ್ತಿಗಳಿಲ್ಲದೇ ಜಾಗತಿಕ ಮಾರುಕಟ್ಟೆಗೆ ಮುಕ್ತ ಪ್ರವೇಶ ಪಡೆಯಲು ಅವಕಾಶ ಕಲ್ಪಿಸುವ ಸಾಧಕ – ಬಾಧಕಗಳ ಕುರಿತು ಗಹನವಾಗಿ ಚರ್ಚೆ ನಡೆಯಿತು.

ನನ್ನ ವಿರುದ್ಧದ ಎಫ್‌ಐಆರ್ ಹಾಸ್ಯಾಸ್ಪದ ಮತ್ತು ದುರುದ್ದೇಶಪೂರಿತ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಐಪಿಎಸ್ ಅಧಿಕಾರಿಯೊಬ್ಬರ ದೂರಿನ ಮೇರೆಗೆ ನನ್ನ ವಿರುದ್ಧ ಪೊಲೀಸರು ದಾಖಲು ಮಾಡಿರುವ ಎಫ್‌ಐಆರ್ ಹಾಸ್ಯಾಸ್ಪದ, ದುರುದ್ದೇಶಪೂರಿತ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಸ್ವಿಗಿ ಲಿಮಿಟೆಡ್ನ ಐಪಿಒ ನವೆಂಬರ್ 6ಕ್ಕೆ ಆರಂಭ

ಬೆಂಗಳೂರು: ಗ್ರಾಹಕರ ಅನುಕೂಲತೆಗೆ ಅನುಗುಣವಾಗಿ ಮನೆ ಬಾಗಿಲಿಗೆ ಸರಕು ಪೂರೈಸುವುದರಲ್ಲಿ ಭಾರತದಲ್ಲಿ ಪ್ರವರ್ತಕ ಸಂಸ್ಥೆಯಾಗಿರುವ ಸ್ವಿಗಿ ಲಿಮಿಟೆಡ್ (ಕಂಪನಿ), 2024ರ ನವೆಂಬರ್ 6ರಂದು ತನ್ನ ಆರಂಭಿಕ ಸಾರ್ವಜನಿಕ ಕೊಡುಗೆ (ಐಪಿಒ) ಆರಂಭಿಸಲಿದೆ.

ದೇಶಾದ್ಯಂತ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ : ಕೇರಿಯರ್ ಉತ್ಸವಕ್ಕಾಗಿ ಕ್ಯೂಎಸ್ 1-ಗೇಜ್ ನೊಂದಿಗೆ ಕೆ2 ಕಲಿಕೆ ಸಹಭಾಗಿತ್ವ

ಬೆಂಗಳೂರು; ಬಹು ಆಯಾಮದ ಶೈಕ್ಷಣಿಕ ಪರಿಹಾರಗಳನ್ನು ಒದಗಿಸುವ, ಬೆಂಗಳೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ಕೆ2 ಲರ್ನಿಂಗ್ ರಿಸೋರ್ಸಸ್ ಇಂಡಿಯಾ ಪ್ರೈ. ಲಿಮಿಡೆಟ್ ಇದೀಗ ಕ್ಯೂಎಸ್ 1-ಗೇಜ್ ನೊಂದಿಗೆ ಪಾಲುದಾರಿಕೆ ಹೊಂದಿದೆ. ಭಾರತದ ಪ್ರಮುಖ ಶೈಕ್ಷಣಿಕ ಶ್ರೇಯಾಂಕ ವ್ಯವಸ್ಥೆಯು ತನ್ನ ವೃತ್ತಿ ಮಾರ್ಗದರ್ಶನ ವೇದಿಕೆಯಾದ ವೃತ್ತಿ ಉತ್ಸವವನ್ನು ವಿಸ್ತರಿಸಲು ಮುಂದಾಗಿದೆ. ಈ ಪಾಲುದಾರಿಕೆ ಮೂಲಕ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸಮಗ್ರವಾಗಿ ವೃತ್ತಿ ಮಾರ್ಗದರ್ಶನ ನೀಡಲು ನೆರವಾಗಲಿದೆ. ವೃತ್ತಿ ಆಯ್ಕೆ ಜೊತೆಗೆ ಚತುರ ಶಿಕ್ಷಣದ ಒಳನೋಟವನ್ನು ಪಡೆಯಲು ಸಹಕಾರಿಯಾಗಲಿದೆ.

Translate »
Scroll to Top