ನೆನೆಗುದಿಗೆ ಬಿದ್ದಿದ್ದ ತುಮಕೂರು ರಾಯದುರ್ಗ ರೈಲ್ವೆ ಮಾರ್ಗ ಯೋಜನೆಗೆ ವೇಗ: ಕೇಂದ್ರ ಸಚಿವ ವಿ. ಸೋಮಣ್ಣ
ಬೆಂಗಳೂರು: ಕಳೆದ ಹತ್ತಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ತುಮಕೂರು ರಾಯದುರ್ಗ ರೈಲ್ವೆ ಮಾರ್ಗ ಭೂಸ್ವಾಧಿನ ಪ್ರಕ್ರಿಯೆಯನ್ನು ಕೇವಲ 3 ತಿಂಗಳಲ್ಲಿ ಶೇ 90 ಕ್ಕಿಂತ ಹೆಚ್ಚು ಪೂರ್ಣಗೊಳಿಸಿ ರೈಲ್ವೆ ಯೋಜನೆಗಳಿಗೆ ವೇಗ ನೀಡಲಾಗಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.