ಜಿಲ್ಲೆಗಳು

ಬಳ್ಳಾರಿ ‘ದಾಸ’ನಾದ ನಟ ದರ್ಶನ್

ಬಳ್ಳಾರಿ: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ, ಕನ್ನಡ ಚಿತ್ರರಂಗದ ಜನಪ್ರಿಯ ನಾಯಕ ನಟ ದರ್ಶನ್ ಅವರನ್ನು ಬಳ್ಳಾರಿಯ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ಗುರುವಾರ ಬೆಳಿಗ್ಗೆ ೧೦ ಗಂಟೆಗೆ `ದರ್ಶನ್’ರನ್ನು ಬಂಧೀಖಾನೆ ಇಲಾಖೆ ಅಧಿಕಾರಿಗಳು, ಸಕಲ ಭದ್ರತೆಯೊಂದಿಗೆ ಬಳ್ಳಾರಿಗೆ ಕರೆ ತಂದಿದ್ದಾರೆ.

ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ಕುರಿತು ಕೇಂದ್ರ ಸರ್ಕಾರಕ್ಕೆ ಒತ್ತಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಆಲಮಟ್ಟಿ: ಕೃಷ್ಣಾ ನ್ಯಾಯಾಧೀಕರಣ-2ರ ತೀರ್ಪಿನನ್ವಯ ರಾಜ್ಯಕ್ಕೆ 130 ಟಿಎಂಸಿ ನೀರು ಹೆಚ್ಚುವರಿಯಾಗಿ ದೊರೆಯಲಿದ್ದು, ಇದಕ್ಕಾಗಿ ಆಲಮಟ್ಟಿ ಜಲಾಶಯದ ಎತ್ತರವನ್ನು ಹೆಚ್ಚಿಸುವ ಕುರಿತು ಅಧಿಸೂಚನೆ ಹೊರಡಿಸಲು ಈಗಾಗಲೇ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಮೈಸೂರಿನತ್ತ ಹೆಜ್ಜೆ ಹಾಕಿದ ಗಜಪಡೆ

ಮೈಸೂರು: ನಾಗರಹೊಳೆಯ ವೀರನಹೊಸಹಳ್ಳಿ ಗೆಟ್ ಬಳಿ ನಾಡಹಬ್ಬ ದಸರಾ ಮಹೋತ್ಸವದ ಆಕರ್ಷಣೆಯಾದ ಜಂಬೂಸವಾರಿ ಇಂದು ಅಭಿಮನ್ಯು ನೇತೃತ್ವದ 9 ಗಜಗಳ ಪಡೆಗೆ ಮೈಸೂರು ಅರಮನೆ ಪುರೋಹಿತರು ತುಲಾ ಲಗ್ನದಲ್ಲಿ ಪೂಜೆ ಸಲ್ಲಿಸುವ ಮೂಲಕ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ ಸಾಂಪ್ರದಾಯಿಕವಾಗಿ ಚಾಲನೆ ನೀಡಿದರು.

ಬೀದಿರಂಪ ಬಿಟ್ಟು ನ್ಯಾಯಾಲಯದಲ್ಲಿ ಹೋರಾಟ ಮಾಡಲು ಸಿಎಂಗೆ ಸಲಹೆ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಸಿದ್ದರಾಮಯ್ಯನವರು ಮತ್ತೊಬ್ಬ ಕೇಜ್ರಿವಾಲ್ ಆಗಲು ಹೋಗದಿರಲಿ ಎಂದು ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸಲಹೆ ನೀಡಿದರು.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಟಿಕೆಟ್ ಗಾಗಿ ಜಿದ್ದಾಜಿದ್ದಿ

ಬೆಂಗಳೂರು : ಬಿಜೆಪಿ ಮತ್ತು ಜೆಡಿಎಸ್ ನಲ್ಲಿ ಆಂತರಿಕವಾಗಿ ಸಾಕಷ್ಟು ಸಮಸ್ಯೆಗಳಿರುವ ಬೆನ್ನಲ್ಲೇ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಜಿದ್ದಾಜಿದ್ದಿಯಾಗಿ ಪರಿಣಮಿಸಿದ್ದು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜಕೀಯವಾಗಿ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ.

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳವನ್ನು ಅದ್ದೂರಿಯಾಗಿ ಆಚರಿಸಲು ಸಿದ್ಧತೆ ಪ್ರಾರಂಭಿಸಿ : ಎನ್ ಚಲುವರಾಯಸ್ವಾಮಿ

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಡಿಸೆಂಬರ್ 20,21 ಹಾಗೂ 22 ರಂದು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳವನ್ನು ಅದ್ದೂರಿಯಾಗಿ ಆಚರಿಸಲು ಸಿದ್ಧತೆ ಪ್ರಾರಂಭಿಸಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.

ರಾಬರ್ಟ್ ಬ್ರೂಸ್ ಫುಟ್ ಸಂಗನಕಲ್ಲು ಪ್ರಾಕ್ತನ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ

ಬಳ್ಳಾರಿ : ನಗರದ ಡಾ.ರಾಜ್ ಕುಮಾರ್ ರಸ್ತೆಯ ರಾಬರ್ಟ್ ಬ್ರೂಸ್ ಫುಟ್ ಸಂಗನಕಲ್ಲು ಪ್ರಾಕ್ತನ ವಸ್ತು ಸಂಗ್ರಹಾಲಯಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಗುರುವಾರ ಭೇಟಿ ನೀಡಿ ವೀಕ್ಷಣೆ ಮಾಡಿದರು.

ಕೊಪ್ಪಳ ಜಿಲ್ಲೆಯ ಐತಿಹಾಸಿಕ ಅಶೋಕ ವೀರಸ್ತಂಭ ಲೋಕಾರ್ಪಣೆ

ಕೊಪ್ಪಳ : ಕೊಪ್ಪಳ ನಗರದ ವಿಶೇಷತೆಯಾದ ಐತಿಹಾಸಿಕ ಅಶೋಕ ವೀರಸ್ತಂಭವನ್ನು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ತಂಗಡಗಿ ಅವರು ಲೋಕಾರ್ಪಣೆ ಮಾಡಿದರು.

ಬಳ್ಳಾರಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಕಂದಾಯ ಸಚಿವ ಕೃಷ್ಣ ಭೈರೇಗೌಡ

ಬಳ್ಳಾರಿ,ಆ.15: ಭಾರತದ 78 ನೇ ಸ್ವಾತಂತ್ರೋತ್ಸವದ ಅಂಗವಾಗಿ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ಧ್ವಜಾರೋಹಣ ನೆರವೇರಿಸಿದರು.

ಉಪ ಮುಖ್ಯಮಂತ್ರಿಗಳಿಂದ  ರಾಷ್ಟ್ರಧ್ವಜಾರೋಹಣ

ಚನ್ನಪಟ್ಟಣ: ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆ.15ರ ಗುರುವಾರ ಚನ್ನಪಟ್ಟಣ ಟೌನಿನ ಬಾಲಕರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ 78ನೇ ಸ್ವಾತಂತ್ಯ್ರ ದಿನಾಚರಣೆಯಲ್ಲಿ ರಾಜ್ಯದ ಉಪಮುಖ್ಯಮಂತ್ರಿಗಳು ಹಾಗೂ ಜಲ ಸಂಪನ್ಮೂಲ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.

Translate »
Scroll to Top