ಉಡುಪಿ

ಮಳೆ ಅನಾಹುತ ಮತ್ತು‌ ಪ್ರವಾಹದಿಂದ ಆದ ಜೀವಹಾನಿಗೆ ಪರಿಹಾರ ತುರ್ತಾಗಿ ಕೊಡಿ : ಸಿಎಂ

ಕಾರವಾರ : ಮಳೆಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆ ಅನಾಹುತಕ್ಕೆ NDRF ಪ್ರಕಾರ ಪರಿಹಾರ ಒಗದಿಸುವ ಕುರಿತಂತೆ ತಕ್ಷಣ ಹಾನಿಯ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿಸಿದ್ದರಾಮಯ್ಯ ಸೂಚನೆ ನೀಡಿದರು.

ತಕ್ಷಣ ಪರಿಹಾರ, ಶಾಶ್ವತ ಸೂರು ಕಲ್ಪಿಸಿ: ವಿಜಯೇಂದ್ರ

ಬೆಂಗಳೂರು:ರಾಜ್ಯ ಸರಕಾರ ಮತ್ತು ಮಾನ್ಯ ಮುಖ್ಯಮಂತ್ರಿಗಳು, ಉಳುವರೆ ಗ್ರಾಮದ ದುರ್ಘಟನೆ ಸಂಬಂಧ ತಕ್ಷಣ ಪರಿಹಾರ ಕೊಡಬೇಕು. ಭಯಭೀತ ಜನರಿಗೆ ಶಾಶ್ವತ ಸೂರು ಕಲ್ಪಿಸಲು ಮುಂದಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದರು.

ಜೀವದ ಹಂಗು ತೊರೆದು ಕಾರ್ಯಾಚರಣೆ ನಡೆಸುತ್ತಿರುವ ಸಿಬ್ಬಂದಿಯ ಕಾರ್ಯಕ್ಷಮತೆಗೆ ಸಿಎಂ ಶ್ಲಾಘನೆ

ಶಿರೂರು : ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ SDRF ಮತ್ತು NDRF ತಂಡಗಳ ಜೊತೆ ಚರ್ಚೆ ನಡೆಸಿದ ಮುಖ್ಯಮಂತ್ರಿಗಳು ಸಿಬ್ಬಂದಿಯ ಕಾರ್ಯಕ್ಷಮತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ನಡು ರಸ್ತೆಯಲ್ಲಿ ಗ್ಯಾಂಗ್ ವಾರ್ : ಇದು ದೇಶಕ್ಕೆ ಕಾಂಗ್ರೆಸ್ ತೋರಿಸುತ್ತಿರುವ ‍ಕರ್ನಾಟಕ ಮಾಡೆಲ್! ಬಿಜೆಪಿ ಕಿಡಿ

ಉಡುಪಿ: ಎರಡು ಗುಂಪಿನ ನಡುವೆ ಭಯಾನಕ ಗ್ಯಾಂಗ್ ವಾರ್ ನಡೆದಿರುವ ಘಟನೆ ಉಡುಪಿಯ ಕುಂಜಿಬೆಟ್ಟುವಿನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕಾಪು ಮೂಲದ ಎರಡು ಬಣದ ಯುವಕರು ಉಡುಪಿ- ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳಲ್ಲಿ ಬಂದು ಜಗಳ ಮಾಡಿಕೊಂಡು ಕಾರುಗಳನ್ನು ಗುದ್ದಿಸಿ ಹೊಡೆದಾಟ ಮಾಡಿಕೊಂಡಿದ್ದಾರೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಅವರನ್ನು ಜೂನ್ ೧ರವರೆಗೆ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ.

ಕರ್ನಾಟಕ – ಕೇರಳ ಗಡಿಭಾಗದಲ್ಲಿ ಶಂಕಿತ ನಕ್ಸಲರ ಸುಳಿವು; ಕೂಂಬಿಂಗ್ ಕರ‍್ಯಾಚರಣೆ ಆರಂಭ

ಉಡುಪಿ: ಕರ್ನಾಟಕ – ಕೇರಳ ಗಡಿಭಾಗ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಶಂಕಿತ ನಕ್ಸಲರು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಪೊಲೀಸರು ಅಕ್ಕಪಕ್ಕದ ಪ್ರದೇಶಗಳಲ್ಲಿ ಕೂಂಬಿಂಗ್ ಕರ್ಯಾಧಚರಣೆ ಆರಂಭಿಸಿದ್ದು, ಮುಂಬರುವ ಲೋಕಸಭೆ ಚುನಾವಣೆ ಅಂಗವಾಗಿ ಸೂಕ್ತ ಬಂದೋಬಸ್ತ್ ಮಾಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ವಿಶ್ವ ಮಾನವ ಸಂಸ್ಕೃತಿಯನ್ನು ಬಂಟ ಸಮುದಾಯ ಆಚರಿಸುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಉಡುಪಿ: ಮನುಷ್ಯ ದ್ವೇಷವನ್ನು ಬಂಟ ಸಮುದಾಯ ಯಾವತ್ತೂ ಬೆಂಬಲಿಸುವುದಿಲ್ಲ. ವಿಶ್ವ ಮಾನವ ಸಂಸ್ಕೃತಿಯನ್ನು ಬಂಟ ಸಮುದಾಯ ಆಚರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ನನ್ನ ಮಣ್ಣು ನನ್ನ ದೇಶ ಅಭಿಯಾನ ತಾಲೂಕು ಮಟ್ಟದ ಕಲಶ ಯಾತ್ರೆ – ಶಾಸಕ ಗುರ್ಮೆ ಸುರೇಶ ಶೆಟ್ಟಿ ಭಾಗಿ

ಕಾಪು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ನೆಹರು ಯುವ ಕೇಂದ್ರ ಉಡುಪಿ, ಕಾಪು ತಾಲೂಕು ಪಂಚಾಯತ್, ತಾಲೂಕು ಆಡಳಿತ ಕಾಪು, ಕಾಪು ಪುರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಜಂಟಿ ಆಶ್ರಯದಲ್ಲಿ ಇಂದು ಹಮ್ಮಿಕೊಳ್ಳಲಾದ “ನನ್ನ ಮಣ್ಣು ನನ್ನ ದೇಶ ಅಭಿಯಾನ ಕಲಶ ಯಾತ್ರೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಅಗ್ನಿವೀರ್ ಗೆ ಆಯ್ಕೆಯಾದ ಮಣಿಕಂಠ ಎಸ್.ಡಿ ಅವರಿಗೆ ಅಭಿನಂದನಾ ಸಮಾರಂಭ

ಕೋಸ್ಟಲ್ ವಿಂಗ್ಸ್ ಅಕಾಡೆಮಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಕಾಪು, ಉಡುಪಿ ಇಲ್ಲಿ ತರಬೇತಿ ಪಡೆದು “ಅಗ್ನಿವೀರ್” ಗೆ ಆಯ್ಕೆಯಾದ “ಮಣಿಕಂಠ ಎಸ್.ಡಿ” ಅವರಿಗೆ ಇಂದು ದಿನಾಂಕ 02-10-2023 ರಂದು ನಡೆದ ಅಭಿನಂದನಾ ಸಮಾರಂಭದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಚೈತ್ರ ಕುಂದಾಪುರ ವಂಚನೆ ಪ್ರಕರಣ: ಗೌಪ್ಯವಾಗಿ ನಿರ್ಮಾಣವಾಗುತ್ತಿದ್ದ ಮನೆ ಯಾರದ್ದು?

ವಂಚನೆ ಪ್ರಕರಣದಲ್ಲಿ ಪೊಲೀಸ್ ವಶದಲ್ಲಿರುವ ಚೈತ್ರ ಕುಂದಾಪುರ ಹೊಸ ಮನೆಯೊಂದು ಕಟ್ಟಿಸುತ್ತಿದ್ದರು ಎನ್ನಲಾಗಿದೆ. ಚೈತ್ರ ಕೋಟಿ ಲೂಟಿ ಹೊಡೆದು ಗೆಳೆಯನ ಹೆಸರಲ್ಲಿ ಮನೆ ಕಟ್ಟಿಸುತ್ತಿರುವುದು ಪತ್ತೆಯಾಗಿದೆ.

Translate »
Scroll to Top