ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಿಗೆ ಪ್ರಿಯಾಂಕ್ ಖರ್ಗೆ ಪತ್ರ
ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಮಳೆಯ ತೀವ್ರ ಕೊರತೆಯಿಂದಾಗಿ ಬರ ಪರಿಸ್ಥಿತಿ ಎದುರಾಗಿದ್ದು, ರಾಜ್ಯ ಸರ್ಕಾರ ಈಗಾಗಲೆ 31 ಜಿಲ್ಲೆಗಳ 195 ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿರುವ ಹಿನ್ನೆಲೆಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿ ಈಗ ನಿಗದಿ ಪಡಿಸಿರುವ 100 ದಿನಗಳ ಉದ್ಯೋಗ ಅವಧಿಯನ್ನು 150 ದಿನಗಳಿಗೆ ಏರಿಸಬೇಕು ಹಾಗೂ 1300 ಲಕ್ಷ ಮಾನವ ದಿನಗಳನ್ನು 1800 ಲಕ್ಷ ಮಾನವ ದಿನಗಳಿಗೆ ಏರಿಸಲು ಕೋರಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಭಾರತ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವರಾದ ಗಿರಿರಾಜ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ.