ಕಲ್ಬುರ್ಗಿ

ಪಿ.ಎಸ್.ಐ ನೇಮಕಾತಿಗೆ ತಡೆ

ಕಲಬುರಗಿ.ಫೆ.19 : ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಪಿ.ಎಸ್.ಐ. ನೇಮಕಾತಿಯಲ್ಲಿ ಅನ್ಯಾಯವಾಗಿದೆ ಎಂದ ಇಲ್ಲಿನ ಜನಪ್ರತಿನಿಧಗಳ ಒತ್ತಾಯದ ಮೇರೆಗೆ ಪ್ರಸ್ತುತ ನೇಮಕಾತಿಗೆ ತಡೆ ನೀಡಲಾಗಿದ್ದು, ಈ ಕುರಿತು ಅಧ್ಯಯನಕ್ಕೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದರು. ಶನಿವಾರ ಕಲಬುರಗಿಯ ನಾಗನಹಳ್ಳಿ ಪೊಲೀಸ್ ತರಬೇತಿ ಮಹಾವಿದ್ಯಾಲಯದ ಅತಿಥಿಗೃಹದಲ್ಲಿ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ತೊಂದರೆಯಾಗದಂತೆ 371ಜೆ ವಿಶೇಷ ವಿಶೇಷ ಸ್ಥಾನಮಾನದ ಕಾಯ್ದೆ ಮತ್ತು …

ಪಿ.ಎಸ್.ಐ ನೇಮಕಾತಿಗೆ ತಡೆ Read More »

ಆಂತರಿಕ ಭದ್ರತೆ ಸವಾಲೊಡ್ಡುವವರಿಗೆ ಕಾನೂನು ಪಾಠ ಬೋಧಿಸಿ

ಕಲಬುರಗಿ.ಫೆ.19 : ನೆಲದ ಕಾನೂನಿಗೆ ವಿರುದ್ಧವಾಗಿ ನಡೆಯುವ ಮತ್ತು ಆಂತರಿಕ ಭದ್ರತೆಗೆ ಸವಾಲೊಡ್ಡುವ ದುಷ್ಟಶಕ್ತಿಗಳಿಗೆ ಕಾನೂನು ಪಾಠ ಬೋಧಿಸಬೇಕು ಎಂದು ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪೊಲೀಸ್ ರಿಗೆ ಕರೆ ನೀಡಿದರು. ಶನಿವಾರ ಕಲಬುರಗಿಯ ನಾಗನಹಳ್ಳಿಪೊಲೀಸ್ ತರಬೇತಿ ಮಹಾವಿದ್ಯಾಲಯದಲ್ಲಿ 1ನೇ ತಂಡದ ಪ್ರೊ. ಡಿಎಸ್‍ಪಿ/ 10ನೇ ತಂಡದ ಪ್ರೊ. ಪಿ.ಎಸ್.ಐ (ಸಿವಿಲ್), 6ನೇ ತಂಡದ ಆರ್.ಎಸ್.ಐ./ ಸ್ಪೆಷಲ್ ಆರ್.ಎಸ್.ಐ./ 6ನೇ ತಂಡದ ಪಿ.ಎಸ್.ಐ. (ನಿಸ್ತಂತು) ಹಾಗೂ 2ನೇ ತಂಡದ ಪಿ.ಎಸ್.ಐ. (ಎಫ್.ಪಿ.ಬಿ.) ಪ್ರಶಿಕ್ಷಣಾರ್ಥಿಗಳ ನಿರ್ಗಮನ …

ಆಂತರಿಕ ಭದ್ರತೆ ಸವಾಲೊಡ್ಡುವವರಿಗೆ ಕಾನೂನು ಪಾಠ ಬೋಧಿಸಿ Read More »

ಕಲಬುರಗಿಯಲ್ಲಿ ಉದ್ಯೋಗ ಮೇಳ

ಕಲಬುರಗಿ,12 : ಡಿಜಿಟಲ್ ವ್ಯವಹಾರ ಸ್ವರೂಪವು ಆರ್ಥಿಕ ಸಬಲೀಕರಣಕ್ಕೆ ದೊಡ್ಡ ಶಕ್ತಿಯಾಗಿದ್ದು, ಯಾವುದೇ ದೇಶದೊಂದಿಗೆ ವ್ಯಾಪಾರ- ವಹಿವಾಟು ತುಂಬಾ ಸುಲಭವಾಗಿದೆ. ಜತೆಗೆ ಡಿಜಿಟಲ್ ಮಾರುಕಟ್ಟೆ ತರಬೇತಿಯಿಂದ ನೂರಕ್ಕೆ ನೂರರಷ್ಟು ಉದ್ಯೋಗ ಖಾತ್ರಿಯೂ ಸಿಗುತ್ತದೆ ಎಂದು ಐಟಿ, ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಇಲ್ಲಿನ ಪಿಡಿಎ ಕಾಲೇಜಿನಲ್ಲಿ ಶನಿವಾರದಂದು ಏರ್ಪಡಿಸಿದ್ದ ಉದ್ಯೋಗ ಮೇಳ’ವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳೊಂದಿಗೆ ವರ್ಚುಯಲ್ ರೂಪದಲ್ಲಿ ಮಾತನಾಡಿದ ಅವರು, ಪದವಿ ವಿದ್ಯಾರ್ಥಿಗಳಿಗೆ ಡಿಜಿಟಲ್ ಮಾರುಕಟ್ಟೆ ತರಬೇತಿ ನೀಡುವ ಉದ್ದೇಶದಿಂದನಾಂದಿ’ ಸಂಸ್ಥೆಯೊಂದಿಗೆ ಒಡಂಬಡಿಕೆ …

ಕಲಬುರಗಿಯಲ್ಲಿ ಉದ್ಯೋಗ ಮೇಳ Read More »

ಗ್ರಾಮೀಣ ಪತ್ರಿಕೆಗಳ ಹಿತಕಾಯಲು ಸರ್ಕಾರ ಬದ್ಧ

ಕಲಬುರ್ಗಿ, ಜ. 4: ಗ್ರಾಮೀಣ ಪತ್ರಿಕೆಗಳು ಹಾಗೂ ಪತ್ರಕರ್ತರ ಹಿತಕಾಯಲು ಸರ್ಕಾರ ಬದ್ಧವಿದೆ.ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯ ಯೋಜನೆಗಳನ್ನು ರೂಪಿಸಲಾಗಿದ್ದು, ಸಧ್ಯದಲ್ಲಿಯೇ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಇಲ್ಲಿನ ಪೂಜ್ಯ ಶ್ರೀ ಬಸವರಾಜಪ್ಪ ಸ್ಮಾರಕ ಭವನದಲ್ಲಿಇಂದುಆಯೋಜನೆಗೊಂಡ ೩೬ನೇ ಕರ್ನಾಟಕಕಾರ್ಯನಿರತ ಪತ್ರಕರ್ತರ ಸಂಘದ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದಅವರು, ಪತ್ರಿಕೋದ್ಯಮ ಕವಲು ದಾರಿಯಲ್ಲಿದ್ದು, ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಇಂತಹ ಸಂದಿಗ್ಧ ಸಂದರ್ಭದಲ್ಲಿ ಪತ್ರಕರ್ತರು ಹಾಗೂ ಪತ್ರಿಕೆಗಳ ಹಿತಕಾಯುವುದು ಸರ್ಕಾರದ ಆದ್ಯಕರ್ತವ್ಯಎಂದರು. ಕೇಂದ್ರ ವಿತ್ತ ಸಚಿವರೊಂದಿಗೆ ಮಾತನಾಡಿ, …

ಗ್ರಾಮೀಣ ಪತ್ರಿಕೆಗಳ ಹಿತಕಾಯಲು ಸರ್ಕಾರ ಬದ್ಧ Read More »

ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ : ಸಿಎಂ

ಕಲ್ಬುರ್ಗಿ, ಜನವರಿ, 4 : ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕಲ್ಬುರ್ಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ ಆರ್ಥಿಕ ಅನುಮತಿ ನೀಡಲಾಗಿದೆ. ಶಿಕ್ಷಣ ಇಲಾಖೆಯಲ್ಲಿ 5000 ಹುದ್ದೆಗಳೂ ಸೇರಿದಂತೆ ವಿವಿಧ ಇಲಾಖೆಗಳಿಗೆ ಒಟ್ಟು 14000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ತಿಳಿಸಿದರು. ಕೆಕೆಆರ್ ಡಿಬಿ ಬೋರ್ಡ್ ರಚನೆಯಾಗದಿರುವ ಬಗ್ಗೆ …

ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ : ಸಿಎಂ Read More »

ಕಲುಬರುಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ ಪ್ರಾರಂಭ: ಸಚಿವ ನಿರಾಣಿ ಘೋಷಣೆ

ಕಲಬುರಗಿ,ಜ.3: ಕಲ್ಯಾಣ ಕರ್ನಾಟಕದ ಪ್ರಮುಖ ಕೇಂದ್ರ ಕಲಬುರಗಿಯಲ್ಲಿ ಕೈಗಾರಿಕೆಗಳನ್ನು ಉತ್ತೇಜಿಸುವ ಕಾರಣಕ್ಕಾಗಿ ಈ ಭಾಗದಲ್ಲಿ ಜವಳಿ ಪಾಕ್೯ (ಟೆಕ್ಸ್ ಟೈಲ್) ಪ್ರಾರಂಭಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಘೋಷಿಸಿದರು. ಸೋಮವಾರ ಗುಲಬರ್ಗಾ ವಿಶ್ವವಿದ್ಯಾಲಯದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ವತಿಯಿಂದ ನಡೆದ ಉದ್ಯಮಿಯಾಗು ,ಉದ್ಯೋಗ ನೀಡು ಹಾಗೂ ಕೈಗಾರಿಕಾ ಆದಾಲತ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಈ ಸಂಬಂಧ ಕೇಂದ್ರ ಸರ್ಕಾರದ ಜೊತೆಗೆ ಮಾತುಕತೆಯನ್ನು …

ಕಲುಬರುಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ ಪ್ರಾರಂಭ: ಸಚಿವ ನಿರಾಣಿ ಘೋಷಣೆ Read More »

Translate »
Scroll to Top