ಕೊಡಗು

ಸೆಪ್ಟೆಂಬರ್ 12ರ ವರೆಗೆ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಸೆಪ್ಟೆಂಬರ್ 12 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಪವರ್ ಕಟ್ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದೆಯಾ ಕಾಂಗ್ರೆಸ್‍ ಸರ್ಕಾರ…?

ಬೆಂಗಳೂರು: ಮಳೆಯ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪವರ್ ಕಟ್ ಮಾಡಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿರುವ ಅಂಶ ಬೆಳಕಿಗೆ ಬಂದಿದೆ.

ಗೊಂಡ ಸಮುದಾಯದ ಜಾತಿ ಪ್ರಮಾಣ ಪತ್ರ ಸಮಸ್ಯೆಗಳ ಕುರಿತು ಸಭೆ

ಬೆಂಗಳೂರು: ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕಲಬುರಗಿ, ಬೀದರ್, ಯಾದಗಿರಿ ಹಾಗೂ ಕೊಡಗು ಜಿಲ್ಲೆಗಳ ಗೊಂಡ ಸಮುದಾಯದವರಿಗೆ ಜಾತಿ ಸಿಂಧುತ್ವ ಪ್ರಮಾಣ ಪತ್ರ ನೀಡುವ ಸಂಬಂಧ ಎದುರಿಸುತ್ತಿರುವ  ಸಮಸ್ಯೆಗಳ ಕುರಿತು ಸಭೆ ಜರುಗಿತು.  ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಕಂದಾಯ ಸಚಿವರಾದ ಕೃಷ್ಣಬೈರೇಗೌಡ, ಈಶ್ವರ ಖಂಡ್ರೆ, ನಾಗೇಂದ್ರ,  ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಲಬುರಗಿ, ಬೀದರ್, ಯಾದಗಿರಿ ಹಾಗೂ ಕೊಡಗು ಜಿಲ್ಲೆಗಳ ಜಿಲ್ಲಾಧಿಕಾರಿಗಳು,  ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಡಾ: ರಾಕೇಶ್ …

ಗೊಂಡ ಸಮುದಾಯದ ಜಾತಿ ಪ್ರಮಾಣ ಪತ್ರ ಸಮಸ್ಯೆಗಳ ಕುರಿತು ಸಭೆ Read More »

ಉದುರುತ್ತಿರುವ ಕಾಫಿ ಫಸಲು, ಬೆಳೆಗಾರರು ಕಂಗಾಲು.

ಭಾರಿ ಮಳೆಯಿಂದ ಉದುರುತ್ತಿರುವ ಕಾಫಿ ಫಸಲು, ತೀವ್ರ ಸಂಕಷ್ಟದ ಪರಿಸ್ಥಿತಿಯಲ್ಲಿ ಕೊಡಗಿನ ಕಾಫಿ ಬೆಳೆಗಾರರು

ರಾಜ್ಯಾದ್ಯಂತ ಅಬ್ಬರಿಸುತ್ತಿರುವ ಮುಂಗಾರು ಮಳೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ತಡವಾಗಿ ಆರಂಭಗೊಂಡ ಮುಂಗಾರು ಮಳೆ ರಾಜ್ಯದ ಮೂರನೇ ಒಂದು ಭಾಗದಲ್ಲಿ ಅಬ್ಬರಿಸುತ್ತಿದೆ. ಈ ಟಕಾರಣದಿಂದ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ವರುಣಾಘಾತವೇ ಉಂಟಾಗಿದೆ.

ಪೌರ ಕಾರ್ಮಿಕರನ್ನು ಖಾಯಂಗೊಳಸಲು  ಪೌರಕಾರ್ಮಿಕರ ಮಹಾ ಸಂಘ ಆಗ್ರಹ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರು ಹಾಗೂ ಮೇಲ್ವಿಚಾರಕರನ್ನು ಖಾಯಂಗೊಳಿಸುವ ಕುರಿತು ರಾಜ್ಯ ಬೆಜಟ್ ನಲ್ಲಿ ಯಾವುದೇ ಪ್ರಸ್ತಾಪ ಮಾಡಿಲ್ಲ. ವಿಧಾನಮಂಡಲ ಅಧಿವೇಶನದಲ್ಲಿ ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾ ಸಂಘ ಆಗ್ರಹಿಸಿದೆ.

ಭಾರೀ ಗಾಳಿ, ಮಳೆ ಸಾಧ್ಯತೆ : ಕೊಡಗು, ಕರಾವಳಿಗೆ ಎಲ್ಲೋ ಅಲರ್ಟ್…!

ಕರಾವಳಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದಲೂ ಎಡೆಬಿಡದೆ ಸುರಿಯುತ್ತಿರುವ ಮಳೆ ರಾಯ ಮತ್ತೆ ಆರ್ಭಟಿಸುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಉಡುಪಿ, ದಕ್ಷಿಣ ಕನ್ನಡ ಮಾತ್ರವಲ್ಲದೇ ಕೊಡಗು ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗಲಿದ್ದು, ನಾಳೆ ಭಾರೀ ಗಾಳಿ ಬೀಸಲಿದೆ. ಅಲ್ಲದೇ ಜುಲೈ 13ರಿಂದ ಮತ್ತೆ ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂಗಾರು ಅಬ್ಬರಕ್ಕೆ ರಾಜ್ಯದಲ್ಲಿ ನಾಲ್ಕು ಬಲಿ, ಇಂದೂ ಸುರಿಯಲಿದೆ ಭಾರೀ ಮಳೆ.

ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಕರಾವಳಿ ಭಾಗದಲ್ಲಿ ಮಳೆ ಸಂಬಂಧಿ ಅವಘಡಗಳಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಮಳೆಯ ಅಬ್ಬರದಿಂದಾಗಿ ಮಂಗಳೂರು, ಉಡುಪಿ, ಕುಂದಾಪುರ, ಕಾರವಾರ ತಾಲೂಕಿನಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

ಭಾರೀ ಮಳೆ ಮುನ್ಸೂಚನೆ ಕರಾವಳಿಯ ಮೂರು ಜಿಲ್ಲೆಗಳ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ

ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿರುವ ಕಾರಣ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ದಕ್ಷಿಣ ಕನ್ನಡದಲ್ಲಿ ಇಂದು ಕೂಡ ರಜೆ ವಿಸ್ತರಿಸಲಾಗಿದೆ.

ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆ ಸಾಧ್ಯತೆ! ಎಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಾಮರಾಜನಗರ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಜೂನ್ 2ರವರೆಗೂ ಅಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Translate »
Scroll to Top