ಕೊಪ್ಪಳ

ಮದುವೆ ಮಂಟಪದಿಂದ ನೇರವಾಗಿ ಮತಗಟ್ಟೆಗೆ ಆಗಮಿಸಿದ ನವದಂಪತಿ

ಕೊಪ್ಪಳ: ಕೊಪ್ಪಳ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಮದುವೆ ಮಂಟಪದಿಂದ ನೇರವಾಗಿ ಮತಗಟ್ಟೆಗೆ ಬಂದು ನವದಂಪತಿ ಮತದಾನ ಮಾಡಿದರು.

ಸಂವಿಧಾನದ ಧ್ಯೇಯೋದ್ದೇಶಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ: ಮುಖ್ಯಮಂತ್ರಿ  ಸಿದ್ದರಾಮಯ್ಯ

ಕೊಪ್ಪಳ: ಕೇಂದ್ರದಲ್ಲಿ ನರೇಂದ್ರ ಮೋದಿಯವರು 10 ವರ್ಷಗಳ ಕಾಲ ಸಂವಿಧಾನಕ್ಕೆ ವಿರೋಧವಾಗಿ ನಡೆದುಕೊಂಡಿದ್ದಷ್ಟೇ ಅಲ್ಲ ಸಂವಿಧಾನದ ಧ್ಯೇಯೋದ್ದೇಶಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕೊಪ್ಪಳ: ಗಂಗಾವತಿಯ ಶ್ರೀರಾಮನಗರದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಹಲ್ಲೆ

ಕೊಪ್ಪಳ: ಬೆಂಗಳೂರಿನಲ್ಲಿ ರಾಮ ನವಮಿ ದಿನ ಜೈ ಶ್ರೀರಾಮ್ ಘೋಷಣೆ ಕೂಗಿದವರ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ರಾಜ್ಯದಾದ್ಯಂತ ರ್ಚೆ ಗೆ ಗ್ರಾಸವಾಗಿರುವ ಸಂರ್ಭಿದಲ್ಲೇ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಕೂಡ ಅಂಥದ್ದೇ ಘಟನೆ ವರದಿಯಾಗಿದೆ. ಗಂಗಾವತಿಯ ಶ್ರೀರಾಮನಗರದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಸುಮಾರು ೨೦ ಮಂದಿ ಮುಸ್ಲಿಂ ಯುವಕರ ಗುಂಪು ಹಲ್ಲೆ ಮಾಡಿದೆ ಎಂಬ ಆರೋಪ ಕೇಳಿಬಂದಿದೆ.

ಕೊಪ್ಪಳ: ಗಂಗಾವತಿಯ ಶ್ರೀರಾಮನಗರದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಹಲ್ಲೆ

ಕೊಪ್ಪಳ: ಬೆಂಗಳೂರಿನಲ್ಲಿ ರಾಮ ನವಮಿ ದಿನ ಜೈ ಶ್ರೀರಾಮ್ ಘೋಷಣೆ ಕೂಗಿದವರ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ರಾಜ್ಯದಾದ್ಯಂತ ರ್ಚೆ ಗೆ ಗ್ರಾಸವಾಗಿರುವ ಸಂರ್ಭಿದಲ್ಲೇ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಕೂಡ ಅಂಥದ್ದೇ ಘಟನೆ ವರದಿಯಾಗಿದೆ. ಗಂಗಾವತಿಯ ಶ್ರೀರಾಮನಗರದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಸುಮಾರು ೨೦ ಮಂದಿ ಮುಸ್ಲಿಂ ಯುವಕರ ಗುಂಪು ಹಲ್ಲೆ ಮಾಡಿದೆ ಎಂಬ ಆರೋಪ ಕೇಳಿಬಂದಿದೆ.

ವೈಭವದ ಕನಕಗಿರಿ ಉತ್ಸವ: ಮೆರವಣಿಗೆಯಲ್ಲಿ ಮೈನವಿರೇಳಿಸಿದ ಕಲಾತಂಡದ ಪ್ರದರ್ಶನ

ಕನಕಗಿರಿ : ರಾಜಬೀದಿಯಲ್ಲಿ ಕಲಾ ತಂಡಗಳೊಂದಿಗೆ ಮೆರವಣಿಗೆಯಲ್ಲಿ ಸಾಗಿಬಂದ ಸಾರೋಟು, ಕನಕಾಚಲ ಲಕ್ಷ್ಮೀ ನರಸಿಂಹಸ್ವಾಮಿಯನ್ನು ಹೊತ್ತುತಂದ ಗಜರಾಜನ ರಾಜಗಾಂಭೀರ್ಯ, ಕಳಸ ಹೊತ್ತ ಮಹಿಳೆಯರು, ಶ್ರೀ ಕನಕಾಚಲ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದ ಇತಿಹಾಸ ಸಾರುವ ಸಾರೋಟ, ಪಲ್ಲಕ್ಕಿ, ಉಡಚ್ಚಪ್ಪನಾಯಕ ವೇಷಧಾರಿಗಳು. ಮತ್ತೊಂದೆಡೆ ಕಿವಿಗಡಚಿಕ್ಕುವ ತಮಟೆಯ ಸದ್ದು, ಮತ್ತೊಂದೆಡೆ ವಾಲಗ, ನೆರೆದಿದ್ದ ಜನಸ್ತೋಮದಿಂದ ಜೈಕಾರದ ಘೋಷಣೆ, ಮೈನವಿರೇಳಿಸಿದ ಜಾನಪದ ಕಲಾ ತಂಡಗಳ ಮನಮೋಹಕ ಪ್ರದರ್ಶನ…!

ಅಪರಿಚಿತ ವಾಹನ ಡಿಕ್ಕಿ – ವಾನರ ಸಾವು

ಕೊಪ್ಪಳ: ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆ ಪರಿಣಾಮ ವಾನರ ಅಸುನೀಗಿರುವ ಘಟನೆ ಶಹಪುರ-ಹಿಟ್ನಾಳ್ ಟೋಲ್ ಗೇಟ್ ಮಧ್ಯೆ ಜರುಗಿದೆ.

ನಿಂತ ಬೆಳೆಗಳಿಗೆ, ಕುಡಿಯುವ ನೀರು ಕಾಯ್ದಿರಿಸಲು ಕಾಲುವೆಗೆ ನೀರು: ಸಚಿವರಾದ ಶಿವರಾಜ್ ತಂಗಡಗಿ

ಹೊಸಪೇಟೆ (ವಿಜಯನಗರ): ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರು ಆಗಿರುವ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ತುಂಗಭದ್ರಾ ಯೋಜನೆಯ 121ನೇ ತುರ್ತು ನೀರಾವರಿ ಸಲಹಾ ಸಮಿತಿ ಸಭೆ ನಡೆಯಿತು.

ಹಾಲವರ್ತಿ ಘಟನೆ ಸಹಿಸಲ್ಲ: ಜಿಲ್ಲಾ‌ ಉಸ್ತುವಾರಿ ಸಚಿವ ತಂಗಡಗಿ

ಬೆಂಗಳೂರು : ಕೊಪ್ಪಳ ಜಿಲ್ಲೆಯ ಹಾಲವರ್ತಿ ಗ್ರಾಮದಲ್ಲಿ ದಲಿತರಿಗೆ ಹೋಟೆಲ್ ಪ್ರವೇಶ ನಿಷೇಧ ಮಾಡಿದ್ದಾರೆ ಎನ್ನುವುದನ್ನು ಸಹಿಸಲು ಸಾಧ್ಯವಿಲ್ಲ. ಸಂಬಂಧಪಟ್ಟವರ ವಿರುದ್ಧ ಕೂಡಲೇ ಕ್ರಮ ಜರುಗಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರೂ ಆದ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದ್ದಾರೆ.

ಮಾರ್ಚ್ 2 ಮತ್ತು 3ಕ್ಕೆ ಅದ್ಧೂರಿ ಕನಕಗಿರಿ ಉತ್ಸವ: ಸಚಿವ‌ ತಂಗಡಗಿ

ಕನಕಗಿರಿ : ಜಿಲ್ಲೆಯ ಕನಕಗಿರಿ ಉತ್ಸವವನ್ನು ಮಾರ್ಚ್ 2 ಮತ್ತು 3 ರಂದು ಅದ್ಧೂರಿಯಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹೇಳಿದರು.

ಸಂಭ್ರಮದಿಂದ ಜರುಗಿದ  ಶ್ರೀರಾಮನ ಪಲ್ಲಕ್ಕಿ ಉತ್ಸವ

ಕಾರಟಗಿ : ದೇಶದಾದ್ಯಂತ ಸಂಭ್ರಮದ ಮಾತಾಗಿರುವ ಅಯೋಧ್ಯಯಲ್ಲಿ ಜರುಗಲಿರುವ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ನಿಮಿತ್ಯ ಸೋಮವಾರ ಕಾರಟಗಿ ತಾಲೂಕು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಕ್ಯಾಂಪುಗಳಲ್ಲಿ ಶ್ರೀರಾಮನ ದೇವಸ್ಥಾನಗಳಲ್ಲಿ ಹಾಗೂ ಆಂಜನೇಯ ದೇವಸ್ಥಾನಗಳಲ್ಲಿ ಬೆಳಿಗ್ಗೆಯಿಂದ ಅಗ್ನಿಹೋತ್ರ ಹೋಮ ಹಾಗೂ ಶ್ರೀರಾಮನಿಗೆ ವಿಶೇಷ ಪೂಜೆ ಧಾರ್ಮಿಕ ವಿಧಿ ವಿಧಾನಗಳಿಂದ ಸಂಭ್ರಮ ಸಡಗರದಿಂದ ಜರುಗಿದವವು

Translate »
Scroll to Top