ಕೋಲಾರ

ಕಾಂಗ್ರೆಸ್ ನೇತೃತ್ವದ ಇಂಡಿಯಾ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ – ಕರ್ನಾಟಕಕ್ಕೆ ನರೇಂದ್ರ ಮೋದಿ ಕೊಡುಗೆ “ಚೊಂಬು” ಮಾತ್ರ – ರಕ್ಷಾ ರಾಮಯ್ಯ

ಬಾಗೇಪಲ್ಲಿ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ನಡೆಸಿ ಬಿರುಗಾಳಿ ಎಬ್ಬಿಸಿದರು.
ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಶಾಸಕರಾದ ಸುಬ್ಬಾರೆಡ್ಡಿ ನೇತೃತ್ವದಲ್ಲಿ ಕ್ಷೇತ್ರದಾದ್ಯಂತ ಸಂಚರಿಸಿ ಮತಯಾಚಿಸಿದರು. ಕಾರ್ಯಕರ್ತರ ಉತ್ಸಾಹ, ಹುಮ್ಮಸ್ಸು ಇಮ್ಮಡಿಗೊಂಡಿದ್ದು ಬಾಗೇಪಲ್ಲಿಯಲ್ಲಿ ಜನ ಸಾಗರವೇ ಹರಿದು ಬಂದಿತ್ತು.

ನಿರುದ್ಯೋಗಿ ಯುವಕ/ಯುವತಿಯರಿಗೆ ಪಕೋಡ ಮಾರಿ ಅನ್ನೋಕೆ ಮೋದಿ ಪ್ರಧಾನಿಯೇ ಆಗಬೇಕಿತ್ತಾ: ಸಿ.ಎಂ.ಸಿದ್ದರಾಮಯ್ಯ

ಕೋಲಾರ (ಶಿಡ್ಲಘಟ್ಟ): ಮೋದಿಯವರು ಪ್ರಧಾನಿಯಾಗಿ ನಾಲಾಯಕ್ ಅಂತ ವಿದ್ಯಾವಂತ ಯುವ ಸಮೂಹ ತೀರ್ಮಾನಿಸಿದೆ. ಇಂಥಾ ನಾಲಾಯಕ್ ಗೆ ಮತ ಹಾಕ್ತೀರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಕೋಲಾರ (ಶಿಡ್ಳಘಟ್ಟ)ದ ರೋಡ್ ಶೋನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವಿನ ಜನ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತಯಾಚಿಸಿ ಈ ರೀತಿ ಪ್ರಶ್ನಿಸಿದರು.
ನಿರುದ್ಯೋಗಿ ಯುವಕ/ಯುವತಿಯರಿಗೆ ಪಕೋಡ ಮಾರಿ ಅನ್ನೋಕೆ ಮೋದಿ ಪ್ರಧಾನಿಯೇ ಆಗಬೇಕಿತ್ತಾ.

ಕೋಲಾರ ಕ್ಷೇತ್ರದಲ್ಲಿ ಡಿ.ಎಸ್. ವೀರಯ್ಯ ಅವರಿಗೆ ಟಿಕೆಟ್ ನೀಡಿ – ಕರ್ನಾಟಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಒಕ್ಕೂಟ ಆಗ್ರಹ

ಬೆಂಗಳೂರು : ಕೋಲಾರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸಂಯುಕ್ತ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ದಲಿತ ಸಮುದಾಯದ ಹಿರಿಯ ಮುಖಂಡ, ಮಾಜಿ ವಿಧಾನಪರಿಷತ್ ಸದಸ್ಯ ಡಿ.ಎಸ್. ವೀರಯ್ಯ ಅವರಿಗೆ ಟಿಕೆಟ್ ನೀಡಬೇಕೆಂದು ಕರ್ನಾಟಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಒಕ್ಕೂಟ ಬಿಜೆಪಿ ಹೈಕಮಾಂಡ್ ಗೆ ಒತ್ತಾಯಿಸಿದೆ.

ಬಜೆಟ್ ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಕೆ ವಿ ಪ್ರಭಾಕರ್ ಅವರಿಗೆ ವಿಪ್ರ ಪತ್ರಕರ್ತರಿಂದ ಸನ್ಮಾನ

ಬೆಂಗಳೂರು : ಪತ್ರಕರ್ತರು ಮತ್ತು ಪತ್ರಿಕೆಗೆ ಸಂಬಂಧಿಸಿದ ಯಾವುದೇ ವೃತ್ತಿಯ ಸಮಸ್ಯೆಗಳಿದ್ದರೂ ಕೂಡ ನಾನು ಸ್ಪಂದಿಸಲು ಸದಾ ಸಿದ್ದ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್ ಪುನರುಚ್ಚರಿಸಿದರು.

ನಡೆದು ಬಂದ ಹಾದಿಯನ್ನು ನಾನು ಯಾವತ್ತೂ ಮರೆಯುವುದಿಲ್ಲ: ಕೆ.ವಿ.ಪ್ರಭಾಕರ್

ಕೋಲಾರ : ನಾನು ಮೊದಲು ಪತ್ರಕರ್ತರ ಪ್ರತಿನಿಧಿ. ಎಷ್ಟೇ ಉನ್ನತ ಸ್ಥಾನಕ್ಕೆ ಹೋದರೂ ನಾನು ನಡೆದು ಬಂದ ದಾರಿಯನ್ನು ಯಾವತ್ತೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.

ಬಿಜೆಪಿ ಸರ್ಕಾರದಂತೆಯೇ ರೈತರಿಗೆ ಪರಿಹಾರ ನೀಡಿ, ಇಲ್ಲ ಕುರ್ಚಿ ಬಿಡಿ: ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

ಕೋಲಾರ : ಬರ ಮತ್ತು ನೆರೆ ಸಂದರ್ಭದಲ್ಲಿ ಹಿಂದಿನ ಬಿಜೆಪಿ ಸರ್ಕಾರ ರೈತರಿಗೆ ಮೂರು, ನಾಲ್ಕು ಪಟ್ಟು ಅಧಿಕ ಪರಿಹಾರ ನೀಡಿತ್ತು. ಅದೇ ಮಾನದಂಡದಲ್ಲಿ ಸಿದ್ದರಾಮಯ್ಯ ಸರ್ಕಾರ ಪರಿಹಾರ ನೀಡಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ.

ಮುಂದಿನ ಬಜೆಟ್ ನಲ್ಲಿ ಉಳಿದ ಹೋಬಳಿಗಳಿಗೆ   ಮೊರಾರ್ಜಿ ವಸತಿ ಶಾಲೆ ಮಂಜೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಕೋಲಾರ: ಮುಂದಿನ ಬಜೆಟ್ ನಲ್ಲಿ ಉಳಿದ ಹೋಬಳಿಗಳಿಗೆ ಮೊರಾರ್ಜಿ ವಸತಿ ಶಾಲೆಗಳನ್ನು ಮಂಜೂರು ಮಾಡಲಾಗುವುದು ಹಾಗೂ ಮೊರಾರ್ಜಿ ವಸತಿ ಶಾಲೆಗಳು ಸೇರಿದಂತೆ ವಿವಿಧ ಹಾಸ್ಟೆಲ್ ಗಳ ಮೇಲುಸ್ತುವಾರಿ ಮಾಡಲು ಸಮಾಜ ಕಲ್ಯಾಣ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಚಿವರ ಸಮ್ಮುಖದಲ್ಲೇ ಕೆ.ಸಿ ವ್ಯಾಲಿ ನೀರಿನ ಗುಣಮಟ್ಟ ಪರಿಶೀಲನೆ

ಕೆ.ಸಿ ವ್ಯಾಲಿ ನೀರಿನ ಗುಣಮಟ್ಟದ ಬಗ್ಗೆ ಇದ್ದಂತಹ ಗ್ರಾಮಸ್ಥರ ಅನುಮಾನಗಳನ್ನ ಸಣ್ಣ ನೀರಾವರಿ ಮತ್ತು ವಿಜ್ಞಾನ ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜು ಅವರು ಐಐಎಸ್ಸ್ಸಿ ಮತ್ತು ಇಹೆಚ್ಇಆರ್ ವಿಜ್ಞಾನಿಗಳಿಂದ ಸ್ಥಳದಲ್ಲೇ ನೀರಿನ ಗುಣಮಟ್ಟ ಪರಿಶೀಲನೆಯ ಮೂಲಕ ಪರಿಹರಿಸಿದರು.

ಸೆಪ್ಟೆಂಬರ್ 12ರ ವರೆಗೆ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಸೆಪ್ಟೆಂಬರ್ 12 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಪವರ್ ಕಟ್ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದೆಯಾ ಕಾಂಗ್ರೆಸ್‍ ಸರ್ಕಾರ…?

ಬೆಂಗಳೂರು: ಮಳೆಯ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪವರ್ ಕಟ್ ಮಾಡಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿರುವ ಅಂಶ ಬೆಳಕಿಗೆ ಬಂದಿದೆ.

Translate »
Scroll to Top