ಚಿಕ್ಕಬಳ್ಳಾಪುರ

ಪ್ರಾಮಾಣಿಕ, ನಿಷ್ಕಲ್ಮಷ ಮನಸ್ಸಿನ ರಕ್ಷಾ ರಾಮಯ್ಯ ಅವರನ್ನು ಗೆಲ್ಲಿಸುವುದು ಪ್ರತಿಯೊಬ್ಬ ಕಾಂಗ್ರೆಸ್ಸಿಗರ ಗುರಿ – ಸಹಕಾರ ಸಚಿವ ಕೆ.ಎನ್. ರಾಜಣ್ಣ

ಚಿಕ್ಕಬಳ್ಳಾಪುರ: ನಮ್ಮದು ನುಡಿದಂತೆ ನಡೆದ ಸರ್ಕಾರವಾಗಿದ್ದು, ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಪ್ರಾಮಾಣಿಕ, ನಿಷ್ಕಲ್ಮಷ ಮನಸ್ಸಿನವರು. ಅವರನ್ನು ಗೆಲ್ಲಿಸುವುದು ಪ್ರತಿಯೊಬ್ಬ ಕಾಂಗ್ರೆಸ್ಸಿಗರ ಗುರಿಯಾಗಬೇಕು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಕರೆ ನೀಡಿದ್ದಾರೆ.

ಮೋದಿ ಸರ್ಕಾರ ಪ್ರತಿಯೊಬ್ಬರ ತಲೆ ಮೇಲೆ 15 ಲಕ್ಷ ಸಾಲದ ಹೊರೆ ಹೊರಿಸಿದೆ – ಬಡವರ ವಿರೋಧಿ ಸರ್ಕಾರ ಕಿತ್ತೊಗೆಯಲು ಸಜ್ಜಾಗಿ – ರಕ್ಷಾ ರಾಮಯ್ಯ

ಬಾಗೇಪಲ್ಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕಪು ಹಣ ನಿರ್ಮೂಲನೆ ಮಾಡಿ ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ 15 ಲಕ್ಷ ರೂಪಾಯಿ ಹಣ ಹಾಕುವುದಾಗಿ ನೀಡಿದ್ದ ಭರವಸೆ ಹುಸಿಯಾಗಿದೆ. ಇದಕ್ಕಿಂತ ಗಂಭೀರವಾದ ಪರಿಸ್ಥಿತಿ ಎಂದರೆ ಮೋದಿ ಸರ್ಕಾರ ಪ್ರತಿಯೊಬ್ಬರ ತಲೆಯ ಮೇಲೆ 15 ಲಕ್ಷ ರೂಪಾಯಿ ಸಾಲದ ಹೊರೆ ಹೊರೆಸಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಹೇಳಿದ್ದಾರೆ.

ತೂಬಗೆರೆಯ ವೆಂಕಟೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ವೀರಪ್ಪ ಮೊಯ್ಲಿ ಹಾಗೂ ರಕ್ಷಾ ರಾಮಯ್ಯ ಭಾಗಿ

ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯ ಟಿಕೆಟ್ ವಿಚಾರದಲ್ಲಿ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹಾಗೂ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಪರಸ್ಪರ ಮುಖಾಮುಖಿಯಾದರು.

ಭೋಗ ನಂದೀಶ್ವರ ಸೇರಿ ವಿವಿಧ ಶಿವನ ದೇವಾಯಗಳಿಗೆ ಭೇಟಿ ನೀಡಿದ ಎಂ.ಎಸ್. ರಕ್ಷಾ ರಾಮಯ್ಯ

ಚಿಕ್ಕಬಳ್ಳಾಪುರ : ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಅವರು ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಶಿವನ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಚಿಕ್ಕಬಳ್ಳಾಪುರದಲ್ಲಿ ಕ್ರಿಕೆಟ್ ಟೂರ್ನಿಗೆ ಚಾಲನೆ

ಚಿಕ್ಕಬಳ್ಳಾಪುರ : ಊಹೆ ಮಾಡಿಕೊಂಡು ಕಟ್ಟುಕಥೆ ಕಟ್ಟುವುದನ್ನು ನಿಲ್ಲಿಸಿದರೆ ಸಾಕಷ್ಟು ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಚಿಕ್ಕಬಳ್ಳಾಪುರ, ಬೆಂ. ಗ್ರಾಮಾಂತರ ಜಿಲ್ಲೆಯಲ್ಲಿ ಮಿಂಚಿನ ಸಂಚಾರ – ವಿವಿಧ ಕಾರ್ಯಕ್ರಮಗಳಲ್ಲಿ ರಕ್ಷಾ ರಾಮಯ್ಯ ಭಾಗಿ

ಚಿಕ್ಕಬಳ್ಳಾಪುರ : ಯುವ ಕಾಂಗ್ರೆಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್.‌ ರಕ್ಷಾ ರಾಮಯ್ಯ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿಂದು ಮಿಂಚಿನ ಸಂಚಾರ ನಡೆಸಿದರು. ವಿವಿಧ ಧಾರ್ಮಿಕ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ಭಾಗಿಯಾದರು.

ಮನುಷ್ಯನ ಬಾಹ್ಯ ಸೌಂದರ್ಯ ವೃದ್ಧಿಗೆ  ಸವಿತಾ ಸಮಾಜದ ಕೊಡುಗೆ ಮಹತ್ವದ್ದು – ಎಂ.ಎಸ್. ರಕ್ಷಾ ರಾಮಯ್ಯ

ಗೌರಿ ಬಿದನೂರು : ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಸವಿತಾ ಸಮಾಜದ ಶಕ್ತಿ ಮತ್ತು ಕುಲದೈವವಾದ ಭಗವಾನ್ “ಸವಿತಾ ಮಹರ್ಷಿ’ಯ ದೇವಸ್ಥಾನಕ್ಕೆ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಶಿಲಾನ್ಯಾಸ ನೆರವೇರಿಸಿದರು.

ಕ್ರೀಡೆ ಯುವ ಜನಾಂಗದ ಬದುಕಿನ ಭಾಗವಾಗಬೇಕು – ಎಂ.ಎಸ್ ರಕ್ಷಾ ರಾಮಯ್ಯ

ದಾಸನಪುರ : ಕ್ರೀಡೆ ಯುವ ಜನಾಂಗದ ಬದುಕಿನ ಭಾಗವಾಗಬೇಕು. ಕ್ರೀಡೆ ಮನುಷ್ಯನಲ್ಲಿ ಮಹತ್ವದ ಪರಿವರ್ತನೆ ತರುತ್ತದೆ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಹೇಳಿದ್ದಾರೆ.

ಕಂದವಾರದ ಶ್ರೀ ರಾಮ ದೇವಸ್ಥಾನದಲ್ಲಿ ವಿಶೇಷ ಪೂಜೆ

ಕಂದವಾರ : ಚಿಕ್ಕಬಳ್ಳಾಪುರ ಜಿಲ್ಲೆಯ ಕಂದವಾರದ ಸರ್ಕಾರಿ ಶಾಲೆ ಬಳಿ ಇರುವ ಶ್ರೀ ರಾಮ ದೇವಸ್ಥಾನದಲ್ಲಿಂದು ವೈಭವದಿಂದ ರಾಮ ದೇವರಿಗೆ ಪೂಜೆ ನೆರವೇರಿತು.

ಚಿಕ್ಕಬಳ್ಳಾಪುರದ ವಿವಿಧ ದೇವಾಲಯಗಳಲ್ಲಿ ಪೂಜೆ ಸಲ್ಲಿಕೆ : ಭಗವಾನ್ ರಾಮ ಎಲ್ಲರ ಆದರ್ಶ ಪುರುಷ – ಎಂ.ಎಸ್. ರಕ್ಷಾ ರಾಮಯ್ಯ

ಚಿಕ್ಕಬಳ್ಳಾಪುರ : ಅಯೋಧ್ಯೆಯಲ್ಲಿ ಭಗವಾನ್ ಶ್ರೀ ರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಮಹೋತ್ಸವ ಅಂಗವಾಗಿ ಯುವ ಕಾಂಗ್ರೆಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗ ಎಂ.ಎಸ್. ರಕ್ಷಾ ರಾಮಯ್ಯ ಅವರು ಚಿಕ್ಕಬಳ್ಳಾಪುರದ ವಿವಿಧ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದರು.

Translate »
Scroll to Top