ಸೌಲಭ್ಯ ಕಾಣದ ಕುಂದಲಗುರ್ಕಿ ಶಾಲೆ
ಚಿಕ್ಕಬಳ್ಳಾಪುರ ; ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಕುಂದಲಗುರ್ಕಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸೂಕ್ತ ನಿರ್ವಹಣೆ ಇಲ್ಲದೆ ಅವಸಾನದಂಚಿಗೆ ತಲುಪಿದೆ. ಶಾಲೆಯಲ್ಲಿ ಪ್ರಸ್ತುತ ಮೂಲ ಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಎಸ್ಡಿಎಂಸಿ ಕಮಿಟಿಯನ್ನು ಪರಿಗಣಿಸದೆ ಏಕಪಕ್ಷೀಯವಾಗಿ ನಿರ್ಧಾರಗಳು ತೆಗೆದುಕೊಂಡ ಶಿಕ್ಷಕಿ ವಿಜಯಕುಮಾರಿ ತಾಲ್ಲೂಕಿನ ಕುಂದಲಗುರ್ಕಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರು ಬೇಜವಬ್ದಾರಿಯಿಂದ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಸರ್ವಾಧಿಕಾರಿ ಧೋರಣೆ ನಡೆಸುತ್ತಿದ್ದಾರೆ. ಇವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮೇಲಾಧಿಕಾರಿಗಳಿಗೆ ದೂರು ಸಲ್ಲಿಸಿದರೂ ಇದುವರೆವಿಗೂ ಯಾವುದೇ …