ಚಿಕ್ಕಮಗಳೂರು

ಭೂಕುಸಿತದಿಂದ ರಸ್ತೆ ಸಂಚಾರ ಸ್ಥಗಿತ : ಕಂದಾಯ ಸಚಿವರ ಭೇಟಿ, ಪರಿಶೀಲನೆ

ಚಿಕ್ಕಮಗಳೂರು : ಚಿಕ್ಕಮಗಳೂರಿನ ಮುಳ್ಳಯ್ಯನಗಿರಿಯಿಂದ ಬಾಬಾ ಬುಡನ್ ಗಿರಿಯ 6 ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕವಿಕಲ್ಗಂಟಿ ಎಂಬ ಸ್ಥಳದಲ್ಲಿ ಭೂಕುಸಿತದಿಂದಾಗಿ ಬಂದ್ ಆಗಿತ್ತು. ಅಲ್ಲದೆ, ಕೆಲವೆಡೆ ರಸ್ತೆಯೂ ಕಿತ್ತುಹೋಗಿತ್ತು. ಈ ಸಂಬಂಧ ಸಚಿವ ಕೃಷ್ಣ ಬೈರೇಗೌಡ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು.

ತರೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿಗೆ ಒಂದು ಲಕ್ಷ ಮತ ಬೀಳುತ್ತದೆ:  ಸಿ.ಎಂ ಭರವಸೆ

ಚಿಕ್ಕಮಗಳೂರು: ವಾಜಪೇಯಿಯವರ ಇಂಡಿಯಾ ಶೈನಿಂಗ್ ಎನ್ನುವ ಸುಳ್ಳು ಪ್ರಚಾರ ಸೋತ ಹಾಗೆಯೇ ಮೋದಿಯವರ ವಿಕಸಿತ ಭಾರತ ಎನ್ನುವ ಸುಳ್ಳಿನ ಪ್ರಚಾರಕ್ಕೂ ಸೋಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಬೃಹತ್ ಪ್ರಜಾಧ್ವನಿ-2 ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದರು.

ಬಾಬಾ ಬುಡನ್ ಗಿರಿಯಲ್ಲಿ ಗೋರಿ ದ್ವಂಸ ಪ್ರಕರಣವನ್ನು ರೀ ಓಪನ್ : ಸುಳ್ಳು

ಬೆಂಗಳೂರು : ಕೆಲವು ದೃಶ್ಯ ಮಾಧ್ಯಮಗಳಲ್ಲಿ ಬಾಬಾಬುಡನ್ ಗಿರಿ ಯಲ್ಲಿ ಗೋರಿ ದ್ವಂಸ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎನ್ನುವ ಸುದ್ದಿ ಪ್ರಸಾರವಾಗುತ್ತಿದ್ದು ಇದು ಅಪ್ಪಟ ತಪ್ಪು ಮಾಹಿತಿ ಹಾಗೂ ಸುಳ್ಳಿನಿಂದ ಕೂಡಿದ್ದಾಗಿದೆ.

ಸೆಪ್ಟೆಂಬರ್ 12ರ ವರೆಗೆ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಸೆಪ್ಟೆಂಬರ್ 12 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಪವರ್ ಕಟ್ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದೆಯಾ ಕಾಂಗ್ರೆಸ್‍ ಸರ್ಕಾರ…?

ಬೆಂಗಳೂರು: ಮಳೆಯ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪವರ್ ಕಟ್ ಮಾಡಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿರುವ ಅಂಶ ಬೆಳಕಿಗೆ ಬಂದಿದೆ.

ಕಾವೇರಿ ಸರ್ವಪಕ್ಷ ಸಭೆಯಲ್ಲಿ ಸರಕಾರಕ್ಕೆ ಚಾಟಿ ಬೀಸಿದ ಹೆಚ್.ಡಿ.ಕುಮಾರಸ್ವಾಮಿ

: ನೆರೆ ರಾಜ್ಯವು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದಾಕ್ಷಣ ರಾಜ್ಯ ಸರಕಾರ ನೀರು ಹರಿಸುವ ನಿರ್ಧಾರ ಕೈಗೊಳ್ಳುವ ಬದಲು ತಮಿಳುನಾಡು ಅರ್ಜಿಗೆ ಪ್ರತಿಯಾಗಿ ಕೂಡಲೇ ತಕರಾರು ಅರ್ಜಿ ಸಲ್ಲಿಸಬೇಕಿತ್ತು. ಈ ವಿಷಯದಲ್ಲಿ ಸರಕಾರದಿಂದ ಲೋಪವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಮಾತುಗಳಲ್ಲಿ ಹೇಳಿದರು.

ಆನೆ ಕಾರ್ಯಪಡೆ ಗುಂಪು ಹೆಚ್ಚಳ, ರೇಡಿಯೋ ಕಾಲರ್ ಅಳವಡಿಕೆಗೆ ಆದೇಶ

ಆಗಸ್ಟ್ 13ರಿಂದ ಇಲ್ಲಿಯವರೆಗೆ ಕಾಡಾನೆಗಳ ದಾಳಿಯಿಂದ ಐವರು ಮೃತಪಟ್ಟಿರುವ ಬಗ್ಗೆ ತೀವ್ರ ಆಘಾತ ಮತ್ತು ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ಕಾಡಂಚಿನಲ್ಲಿರುವ ಜನರಿಗೆ ಈ ಸಂಬಂಧ ಹೆಚ್ಚಿನ ಜಾಗೃತಿ ಮೂಡಿಸಲು ಮತ್ತು ಮುನ್ನೆಚ್ಚರಿಕಾ ಕ್ರಮ ವಹಿಸಲು ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಚಾರ್ಮಾಡಿ ಘಾಟಿಯಲ್ಲಿ ಮುಂದುವರಿದ ಪ್ರವಾಸಿಗರ ಪುಂಡಾಟ

ಚಾರ್ಮಾಡಿ: ಘಾಟಿ ಪರಿಸರದಲ್ಲಿನ ತಾತ್ಕಾಲಿಕ ಜಲಪಾತಗಳಲ್ಲಿ ನೀರಿನ ಧುಮ್ಮಿಕ್ಕುವಿಕೆ ಕ್ಷೀಣಗೊಳ್ಳುತ್ತಿದ್ದರೂ ಕೂಡ ಪ್ರವಾಸಿಗರ ಮೋಜು, ಮಸ್ತಿ,ಪುಂಡಾಟ ಮುಂದುವರಿದಿದೆ.

ಹಸ್ತಕ್ಕೆ ಆಪರೇಷನ್ ಮಾಡಲು ಗೊತ್ತಿದೆ : ಸಿ.ಟಿ.ರವಿ

ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರವು ಅತಿಯಾಗಿ ವರ್ತಿಸಿದರೆ ಹಸ್ತಕ್ಕೆ ಆಪರೇಷನ್ ಹೇಗೆ ಮಾಡಬೇಕೆಂದು ನಮಗೆ ಗೊತ್ತಿದೆ ಎಂದು ಬಿಜೆಪಿ ಹಿರಿಯ ಮುಖಂಡ, ಮಾಜಿ ಸಚಿವ ಸಿ.ಟಿ.ರವಿ ಅವರು ಎಚ್ಚರಿಸಿದರು.

ಉದುರುತ್ತಿರುವ ಕಾಫಿ ಫಸಲು, ಬೆಳೆಗಾರರು ಕಂಗಾಲು.

ಭಾರಿ ಮಳೆಯಿಂದ ಉದುರುತ್ತಿರುವ ಕಾಫಿ ಫಸಲು, ತೀವ್ರ ಸಂಕಷ್ಟದ ಪರಿಸ್ಥಿತಿಯಲ್ಲಿ ಕೊಡಗಿನ ಕಾಫಿ ಬೆಳೆಗಾರರು

Translate »
Scroll to Top