ಚಿತ್ರದುರ್ಗ

ಕಳೆದ ಮೂರು ತಿಂಗಳಿಂದ ರೈತರಿಗೆ ಆತಂಕ ತಂದಿಟ್ಟಿದ್ದ ಚಿರತೆ ಸೆರೆಯಾಗಿದೆ

ಚಿಕ್ಕನಾಯಕನಹಳ್ಳಿ: ಕಳೆದ ಮೂರು ತಿಂಗಳಿಂದ ರೈತರಿಗೆ ಆತಂಕ ತಂದಿಟ್ಟಿದ್ದ ಚಿರತೆ ಇಂದು ಸೆರೆಯಾಗಿದೆ
ಚಿಕ್ಕನಾಯಕನಹಳ್ಳಿ ತಾಲೂಕು ಶೆಟ್ಟಿಕೆರೆ ಹೋಬಳಿ ಅಗಸ್ರಳ್ಳಿ ಗ್ರಾಮದಲ್ಲಿ ಕಳೆದ ಮೂರು ತಿಂಗಳಿಂದ ಮೂರು ಚಿರತೆಗಳು ಓಡಾಡಿಕೊಂಡಿದ್ದು ಸುಮಾರು 30ಕ್ಕೂ ಹೆಚ್ಚು ಕುರಿ ನಾಯಿಗಳನ್ನು ತಿನ್ನುವ ಮೂಲಕ ರೈತರಲ್ಲಿ ಆತಂಕ ನಿರ್ಮಾಣವಾಗಿತ್ತು.

ವಕೀಲ ಮತ್ತು ಬಿಜೆಪಿ ಮುಖಂಡ ದೇವರಾಜೇಗೌಡ ಬಂಧನ

ಚಿತ್ರದುರ್ಗ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ವಕೀಲ ಮತ್ತು ಬಿಜೆಪಿ ಮುಖಂಡ ಜಿ. ದೇವರಾಜೇಗೌಡರನ್ನು ಹಿರಿಯೂರು ಗ್ರಾಮಾಂತರ ಪೋಲಿಸರು ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣದಲ್ಲಿ ರಾತ್ರಿ ಬಂಧಿಸಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು.
ಇಲ್ಲಿ ನಡೆದ ಪ್ರಜಾಧ್ವನಿ-2 ಯಾತ್ರೆಯಲ್ಲಿ ಬೃಹತ್ ಜನಸಮಾವೇಶದಲ್ಲಿ ಮಾತನಾಡಿದರು.

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ

ಚಿತ್ರದುರ್ಗ: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು.
ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ಈಗ ಹೇಳಿ ಮೋದಿ ಯಾರ ಪರ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶ್ನಿಸಿದರು.

ಮುರುಘಾ ಶ್ರೀ ಮತ್ತೆ ಜೈಲಿಗೆ: ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ಆದೇಶ

ಚಿತ್ರದುರ್ಗ: ಫೋಕ್ಸೋ ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿರುವ ಚಿತ್ರದರ್ಗೆದ ಮುರುಘಾ ಮಠದ ಸ್ವಾಮೀಜಿ ಅವರ ಜಾಮೀನು ರದ್ದುಗೊಳಿಸಿ, ನಾಲ್ಕು ತಿಂಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಸುಪ್ರೀಂಕರ್ಟ್ ಆದೇಶಿಸಿದೆ. ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಸೂಚನೆ ಕೂಡ ನೀಡಿದೆ. ಜೊತೆಗೆ ವಿಶೇಷ ಕರ್ಟ್ುನಲ್ಲಿ ಸಂತ್ರಸ್ತ ಮಕ್ಕಳ ವಿಚಾರಣೆಗೆ ‘ಸುಪ್ರೀಂ’ ಆದೇಶಿಸಿದೆ. ಇನ್ನು ೪ ತಿಂಗಳಲ್ಲಿ ತನಿಖೆ ಪರ್ಣಗಗೊಳ್ಳದಿದ್ದರೆ ಬಂಧನದ ಅವಧಿಯನ್ನು ಇನ್ನೆರಡು ತಿಂಗಳ ಕಾಲ ವಿಸ್ತರಣೆ ಮಾಡಬಹುದು.

ಮುನ್ನೆಲೆಗೆ ಬಂದ ಚಿತ್ರದುರ್ಗ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಅವರ ಜಾತಿ ವಿಚಾರ; ಕಾರಜೋಳ ಅವರನ್ನು ಬೆಂಬಲಿಸುವಂತೆ ಮಾದಿಗ ದಂಡೋರ ಸಂಘಟನೆ

ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿರುವ ಚಂದ್ರಪ್ಪ ಅವರ ಜಾತಿ ವಿಚಾರ ಇದೀಗ ಮುನ್ನೆಲೆಗೆ ಬಂದಿದೆ. ಎಲ್ಲರೂ ತಿಳಿದುಕೊಂಡಂತೆ ಅವರು ಮಾದಿಗ ಜಾತಿಗೆ ಸೇರಿದವರಲ್ಲ. ಹೀಗಾಗಿ ಅವರ ಜಾತಿ ವಿಚಾರದ ಬಗ್ಗೆ ಇದೀಗ ಕ್ಷೇತ್ರದಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಚಂದ್ರಪ್ಪ ಅವರ ಜಾತಿ ವಿಚಾರ ಕಾಂಗ್ರೆಸ್ ಗೆ ಒಳ ಏಟಿನ ಭೀತಿ ಸೃಷ್ಟಿಸಿದೆ.

ಚಿತ್ರದುರ್ಗ ಜಿಲ್ಲೆಯೊಂದಿಗೆ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರಿಗೆ ಕರುಳಬಳ್ಳಿ ಸಂಬಂಧವಿದೆ

ಚಿತ್ರದುರ್ಗ: ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದಾಗ ಚಿತ್ರದುರ್ಗದ ಸರ್ವಾಂಗೀಣ ಅಭಿವೃದ್ಧಿಗಾಗಿ ಸುಮಾರು 600 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಯೋಜನೆಗಳನ್ನು ಮಂಜೂರು ಮಾಡಿಸಿದ್ದಾರೆ. ಜಿಲ್ಲೆಯಲ್ಲಿ ಶಿಕ್ಷಣ, ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ ಎಂದು ಚಿತ್ರದುರ್ಗ ಬಿಜೆಪಿ ಜಿಲ್ಲಾಧ್ಯಕ್ಷ ಎ ಮುರಳಿಧರ ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯೊಂದಿಗೆ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರಿಗೆ ಕರುಳಬಳ್ಳಿ ಸಂಬಂಧವಿದೆ

ಚಿತ್ರದುರ್ಗ: ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದಾಗ ಚಿತ್ರದುರ್ಗದ ಸರ್ವಾಂಗೀಣ ಅಭಿವೃದ್ಧಿಗಾಗಿ ಸುಮಾರು 600 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಯೋಜನೆಗಳನ್ನು ಮಂಜೂರು ಮಾಡಿಸಿದ್ದಾರೆ. ಜಿಲ್ಲೆಯಲ್ಲಿ ಶಿಕ್ಷಣ, ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ ಎಂದು ಚಿತ್ರದುರ್ಗ ಬಿಜೆಪಿ ಜಿಲ್ಲಾಧ್ಯಕ್ಷ ಎ ಮುರಳಿಧರ ತಿಳಿಸಿದ್ದಾರೆ.

ನಾಯಕನಹಟ್ಟಿ ದೊಡ್ಡ ರಥೋತ್ಸವ ಪೂರ್ವ ಸಿದ್ಧತಾ ಸಭೆ

ನಾಯಕನಹಟ್ಟಿ : ಬರಗಾಲದ ಹಿನ್ನಲೆಯಲ್ಲಿ, ಭಕ್ತಾದಿಗಳ ಮನವಿಯಂತೆ ಈ ಬಾರಿ ನಾಯಕನಹಟ್ಟಿಯ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಹಾಕಲಾಗುವ, ಅಂಗಡಿ ಹಾಗೂ ವಾಣಿಜ್ಯ ವ್ಯಾಪಾರ ಮಳಿಗೆಗಳ ಜಕಾತಿ ವಸೂಲಿ ಮಾಡುವುದಿಲ್ಲ. ಅಧಿಕಾರಿಗಳು ಕುಡಿಯುವ ನೀರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಯೋಜನಾ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ಲಂಚಕ್ಕಾಗಿ ಪೀಡಿಸಿ ಹಲ್ಲೆ ಮಾಡಿರುವ ಪಾನಮತ್ತ ಭೂ ವಿಜ್ಞಾನಿ ಮಧುಸೂಧನ್ ರನ್ನು ವಜಾಗೊಳಿಸದಿದ್ದರೆ ಉಗ್ರ ಹೋರಾಟ

ಬೆಂಗಳೂರು : ಚಿತ್ರದುರ್ಗ ಜಿಲ್ಲೆಯ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‌ ಜಿಲ್ಲಾಧ್ಯಕ್ಷರಿಗೆ ಲಂಚಕ್ಕಾಗಿ ಪೀಡಿಸಿ ಮಾರಾಣಾಂತಿಕ ಹಲ್ಲೆ ನಡೆಸಿ ಅಮಾನವೀಯವಾಗಿ ವರ್ತಿಸಿರುವ ಮತ್ತು ಪಾನಮತ್ತರಾಗಿ ಕರ್ತವ್ಯ ಲೋಪ ಎಸಗಿರುವ ಭೂ ವಿಜ್ಞಾನಿ ಮಧುಸೂಧನ್ ಅವರನ್ನು ಕೂಡಲೇ ಸೇವೆಯಿಂದ ವಜಾಗೊಳಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಪೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಸಂಘಟನೆ ಎಚ್ಚರಿಕೆ ನೀಡಿದೆ.

Translate »
Scroll to Top