ತುಮಕೂರು

ತಪ್ಪು ಮಾಹಿತಿ ನೀಡಿದ ಅಧಿಕಾರಿಗಳು : ಗರಂ ಆದ ಸಚಿವ ಪರಮೇಶ್ವರ್

ತುಮಕೂರು : ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗೆ ಸಂಬಂಧಿಸಿದಂತೆ ಶೇ.59.51ರಷ್ಟು ಮಾತ್ರ ತೆರಿಗೆ ಸಂಗ್ರಹಿಸಲಾಗಿದ್ದು, ಬಾಕಿ ಇರುವ ಆಸ್ತಿ ತೆರಿಗೆ, ಅಂಗಡಿ ಮಳಿಗೆಗಳ ಬಾಡಿಕೆ ವಸೂಲಾತಿಯನ್ನು ಇನ್ನೆರಡು ತಿಂಗಳೊಳಗಾಗಿ ಮಾಡಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು.

ಓದುವ ಹವ್ಯಾಸ ಬೆಳೆಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ

ತುಮಕೂರು: ಉತ್ತಮ ಭವಿಷ್ಯಕ್ಕಾಗಿ ವಿದ್ಯಾರ್ಥಿಗಳು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕೆಂದು
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಕರೆ ನೀಡಿದರು.

ಅನುಮತಿಯಿಲ್ಲದೆ ಸಭೆಗೆ ಅನಧಿಕೃತ ಗೈರು ಹಾಜರಾದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟೀಸ್

ತುಮಕೂರು: ಅನುಮತಿಯಿಲ್ಲದೆ ಕೆಡಿಪಿ ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟೀಸ್ ನೀಡಬೇಕೆಂದು ಹಾಜರಾಗುವಂತೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಿ.ಪರಮೇಶ್ವರ ಅವರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಅವರಿಗೆ ಸೂಚನೆ ನೀಡಿದರು.

ತುಮಕೂರು ರೈತರಿಗೆ ಉಂಡೇ ಕೊಬ್ಬರಿ ಖರೀದಿಗೆ ಸಂಬಂಧಪಟ್ಟ ಮೊತ್ತ ಪಾವತಿ: ಕೇಂದ್ರ ಸಚಿವ ವಿ. ಸೋಮಣ್ಣ

ತುಮಕೂರು: ೨೦೨೪ನೇ ಸಾಲಿನಲ್ಲಿ ತುಮಕೂರು ಜಿಲ್ಲೆಯ ಸುಮಾರು ೨೭೦೦೦ ರೈತರಿಂದ ಒಟ್ಟು ೩,೧೫,೦೦೦ ಕ್ವಿಂಟಲ್ ಉಂಡೆ ಕೊಬ್ಬರಿಯನ್ನು ಕನಿಷ್ಟ ಬೆಂಬಲ ಬೆಲೆಯಡಿಯಲ್ಲಿ ಖರೀದಿಸಲಾಗಿತ್ತು.
ಈ ಸಂಬಂಧ ಒಟ್ಟು ಬಾಬ್ತು ರೂ.೩೭೮ ಕೋಟಿಗಳನ್ನು ತುಮಕೂರಿನ ಕೊಬ್ಬರಿ ಬೆಳೆಗಾರರಿಗೆ ಪಾವತಿಸಬೇಕಾಗಿತ್ತು. ಸುಮಾರು ೨೪೬೦೦ ರೈತರಿಗೆ ಈ ಬಾಬ್ತು ನೇರವಾಗಿ ಡಿಬಿಟಿ ಮೂಲಕ ರೈತರ ಖಾತೆಗೆ ಪಾವತಿಸಲಾಗಿದೆಯೆಂದು ಕೇಂದ್ರ ಸಚಿವ ವಿ. ಸೋಮಣ್ಣ ಅವರು ಮಾಹಿತಿ ನೀಡಿದ್ದಾರೆ.

ಅಗತ್ಯವೆನಿಸಿದರೆ ಯಡಿಯೂರಪ್ಪರನ್ನು ಸಿಐಡಿಯವರು ಬಂಧಿಸುತ್ತಾರೆ: ಜಿ ಪರಮೇಶ್ವರ್​

ತುಮಕೂರು: ಪೋಕ್ಸೋ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಬಂಧನವಾಗಲಿದೆಯೇ ಎಂಬ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಅಗತ್ಯವಿದ್ದರೆ ಸಿಐಡಿಯವರು ಯಡಿಯೂರಪ್ಪರನ್ನು ಬಂಧಿಸಲಿದ್ದಾರೆ. ಯಡಿಯೂರಪ್ಪ ಬಂದು ನೋಟಿಸ್ಗೆ ಉತ್ತರ ನೀಡಬೇಕಾಗುತ್ತದೆ ಎಂದರು.

ಪತ್ನಿ ಕತ್ತು ಕತ್ತರಿಸಿ, ಚರ್ಮ ಸುಲಿದ ಪ್ರಕರಣ; ನನ್ನ ಸೇವಾವಧಿಯಲ್ಲಿ ಇಂತಹ ಭೀಭತ್ಸ ಹತ್ಯೆ ನೋಡಿರಲಿಲ್ಲ:  ಇನ್‌ಸ್ಪೆಕ್ಟರ್‌

ತುಮಕೂಕು: ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗ ಪಟ್ಟಣದಲ್ಲಿ ಓರ್ವ ವ್ಯಕ್ತಿ ತನ್ನ ಪತ್ನಿಯನ್ನು ಕೊಲೆ ಮಾಡಿ, ಆಕೆಯ ತಲೆಯನ್ನು ಕಡಿದು ಚರ್ಮ ಸುಲಿದ ಭೀಕರ ಘಟನೆ ನಡೆದಿದೆ.

ಕ್ಷುಲ್ಲಕ ಕಾರಣಕ್ಕೆ ಸೈನಿಕನ ಮೇಲೆ ಹಲ್ಲೆ

ಕೊರಟಗೆರೆ : ಸೈನಿಕ ನೋರ್ವ ರಾಜೆ ನಿಮಿತ್ತ ಊರಿಗೆ ಬಂದ ಸಂದರ್ಭದಲ್ಲಿ ರಸ್ತೆಯಲ್ಲಿ ಹಾದು ಹೋಗುವಾಗ ಕ್ಷುಲ್ಲಕ ಕಾರಣಕ್ಕೆ ದಾರಿ ಬಿಡಿ ಎಂಬುವ ಮಾತಿಗೆ ಕುಪಿತಗೊಂಡ ಯುವಕರ ದಂಡು ಏಕಾಏಕಿ ಸೈನಿಕನ ಮೇಲೆ ಎರಗಿ ಮಧ್ಯದ ಬಾಟಲ್ ನಲ್ಲಿ ತಲೆಗೆ ಹೊಡೆದು ಮಾರಣಾಂತಕ ಹಲ್ಲೇ ನಡೆಸಿದ ಘಟನೆಯೂಂದು ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.

ತುಮಕೂರು: ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ

ತುಮಕೂರು: ತುಮಕೂರು ಜಿಲ್ಲೆಯಲ್ಲಿ ಪಾಪಿ ತಂದೆಯಿಂದಲೇ ಮಗಳ ಮೇಲೆ ಪೈಶಾಚಿಕ ಕೃತ್ಯ ನಡೆದಿದೆ. ಹೆತ್ತ ಮಗಳ ಮೇಲೆಯೇ ಕಾಮುಕ ತಂದೆ ಆತ್ಯಾಚಾರ ನಡೆಸಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹಿಪ್ಪೆತೋಪು ಬಡವಾಣೆಯಲ್ಲಿ ನಡೆದಿದೆ.

ಗ್ರಾಮ ಪಂಚಾಯಿತಿ ಅಧ್ಯಕ್ಷ ಲೋಕಾಯುಕ್ತ ಬಲೆಗೆ

ತುಮಕೂರು: ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಎಲೆರಾಂಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರಶೇಖರಯ್ಯ ತುಮಕೂರು ಲೋಕಾಯುಕ್ತ ಬಲೆಗೆ. ಅಡಿಕೆ ಪಟ್ಟೆ ತಟ್ಟೆ ತಯಾರಿಸುವ ಪ್ಯಾಕ್ಟರಿ ಪರವಾನಗಿಯ ಕೆಲಸ ಮಾಡಿಕೊಡಲು 20 ಸಾವಿರ ಹಣದ ಬೇಡಿಕೆ ಇಟ್ಟಿದ್ದ ಅದ್ಯಕ್ಷ ಹಾಗೂ ಪಿಡಿಒ.ಪಿಡಿಒ ಹಾಗೂ ಅದ್ಯಕ್ಷ ಇಬ್ಬರು ಲೋಕಾಯುಕ್ತ ಬಲೆಗೆ. ಪಿಡಿಒ ಕಿಶೋರ್ ಲಾಲ್ ಸಿಂಗ್ ಹಾಗೂ ಅದ್ಯಕ್ಷ ಚಂದ್ರಶೇಖರಯ್ಯ ಎಲೆ ರಾಂಪುರ ಗ್ರಾಮದ ಆರ್ ನಾಗೇಶ್ ರವರ ಬಳಿಕೆಲಸ ಮಾಡಲು ಇಪ್ಪತ್ತು ಸಾವಿರ ಹಣ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

Translate »
Scroll to Top