ತುಮಕೂರು

ಕನ್ನಡಿಗರಿಗೆ ಇಷ್ಟೆಲ್ಲಾ ಅನ್ಯಾಯವಾದರೂ ಬಿಜೆಪಿಯ ಸಂಸದರು ಈ ವಿಚಾರಗಳ ಬಗ್ಗೆ ಪ್ರಸ್ತಾಪ ಮಾಡಿದ್ದಾರೆಯೇ?ಮಾತನಾಡದಿದ್ದರೆ  ಲೋಕಸಭೆಗೆ ಯಾಕೆ  ಹೋಗಬೇಕು: ?*ಮುಖ್ಯಮಂತ್ರಿ  ಸಿದ್ದರಾಮಯ್ಯ

ತುಮಕೂರು: ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದ ಅನ್ಯಾಯವಾದರೂ ಒಂದು ದಿನ ಬಿಜೆಪಿಯ ಸಂಸದರು ಈ ವಿಚಾರಗಳ ಬಗ್ಗೆ ಪ್ರಸ್ತಾಪ ಮಾಡಿದ್ದಾರೆಯೇ? ಮಾತನಾಡ ಡಿದ್ದರೆ ಇವರು ಲೋಕಸಭೆಗೆ ಯಾಕೆ ಹೋಗಬೇಕು? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ತುಮಕೂರು ಲೋಕಸಭಾ ಚುನಾವಣೆಯ ತಮ್ಮ ಪಕ್ಷದ ಅಭ್ಯರ್ಥಿಯಾದ ಮುದ್ಧುಹನುಮೇಗೌಡ ಅವರ ಪರ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ನಂತರ ತಮ್ಮ ಅಭ್ಯರ್ಥಿಯ ಪರ ಮತದಾರರಲ್ಲಿ ಮತಯಾಚನೆ ಮಾಡಿ ಮಾತನಾಡಿದರು.

ಕೊಬ್ಬರಿ ಶೆಡ್‌ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಗುಬ್ಬಿ : ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಕೊಬ್ಬರಿ ಶೆಡ್ಡು, ಟ್ರ್ಯಾಕ್ಟರ್ ಹಾಗೂ ದ್ವಿಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ್ದರಿಂದ ಸುಟ್ಟು ಕರಕಲಾದ ಘಟನೆ ತಾಲ್ಲೂಕಿನ ನಿಟ್ಟೂರು ಹೋಬಳಿ ಎನ್.ರಾಂಪುರದಲ್ಲಿ ಬುಧವಾರ ತಡರಾತ್ರಿ ನಡೆದಿದೆ.
ರೈತ ಮಹಿಳೆ ಶಿವಗಂಗಮ್ಮನವರು ಕುಟುಂಬ ಸಮೇತ ತೋಟದಲ್ಲಿ ವಾಸವಿದ್ದು, ಮನೆಯ ಸಮೀಪದಲ್ಲಿಯೇ ಕಾಯಿ ತುಂಬಲು ಶೆಡ್ಡು ನಿರ್ಮಿಸಿಕೊಂಡಿದ್ದರು. ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿಯನ್ನು ನಂದಿಸಿದ್ದು ಅಷ್ಟರೊಳಗೆ ಭಾಗಶಃ ಸುಟ್ಟು ಹೋಗಿದೆ.

ಕಾಂಗ್ರೆಸ್ ಮುಖಂಡರಿಂದ ಜೆಡಿಎಸ್  ಕಾರ್ಯಕರ್ತನ ಮೇಲೆ ಹಲ್ಲೆ

ಕುಣಿಗಲ್: ಜೆಡಿಎಸ್ ಕಾರ್ಯಕರ್ತ ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ಮಂಜುನಾಥ್, ಎನ್.ಡಿ.ಎ ಅಭ್ಯರ್ಥಿ ಡಾ|| ಮಂಜುನಾಥ್ ಪರವಾಗಿ ಪ್ರಚಾರ ಮಾಡುತ್ತಿದ್ದು, ಈ ಬಗ್ಗೆ ಬೆದರಿಕೆ ಹಾಕಿದ್ದ ಕಾಂಗ್ರೆಸ್ ಮುಖಂಡರು ಅಂಚೆಪಾಳ್ಯಕ್ಕೆ ಬರುವಂತೆ ಕರೆದು ಹಲ್ಲೆ ನಡೆಸಿರುವ ಘಟನೆ ಬುಧವಾರ ರಾತ್ರಿ ಅಂಚೆಪಾಳ್ಯ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ಮೋದಿ ಕೈ ಬಲಪಡಿಸಲು ಸೋಮಣ್ಣರನ್ನು ಗೆಲ್ಲಿಸಿ’

ತುಮಕೂರು: ಕ್ಷೇತ್ರದ ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಉತ್ಸಾಹ ಕಂಡು ಹುಮ್ಮಸ್ಸು ಬಂದಿದೆ. ಎನ್.ಡಿ.ಎ ಅಭ್ಯರ್ಥಿ ಸೋಮಣ್ಣ ಅವರು ಎರಡು ಲಕ್ಷಗಳ ಮತಗಳ ಅಂತರದಿಂದ ಚುನಾಯಿತರಾಗಿ ಲೋಕಸಭೆ ಪ್ರವೇಶಿ ಸುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ತಾಲ್ಲೂಕಿನ ಕೆಸ್ತೂರಿನಲ್ಲಿ ಗುರುವಾರ ನಡೆದ ಬಿಜೆಪಿ, ಜೆಡಿಎಸ್ ಪಕ್ಷಗಳ ಸಮಾವೇಶದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ದೇವೇಗೌಡರ ನಡುವೆ ಆತ್ಮೀಯತೆ ಇದೆ. ಈ ಹಾಲಿ ಹಾಗೂ ಮಾಜಿ ಪ್ರಧಾನಿಗಳ ಆಶೀ ರ್ವಾದ ಸೋಮಣ್ಣರಿಗೆ ಸಿಕ್ಕಿದೆ, ಎರಡೂ ಪಕ್ಷಗಳ ಕಾರ್ಯಕರ್ತರ ಬೆಂಬಲ ದೊರಕಿದೆ. ಇದರೊಂದಿಗೆ ಸೋಮಣ್ಣ ಚುನಾವಣೆಯಲ್ಲಿ ಜಯಗಳಿಸುತ್ತಾರೆ, ಸೋಮಣ್ಣ ಎಂದರೆ ಅಭಿವೃದ್ಧಿ, ಅಭಿ ವೃದ್ಧಿ ಎಂದರೆ ಸೋಮಣ್ಣ ಎಂದು ಹೇಳಿದರು.

ದುಡಿಯುವ ಕೈಗಳಿಗೆ ಉದ್ಯೋಗ ಮೇಳ ಉದ್ಘಾಟಿಸಿದ ಸಿದ್ದಲಿಂಗಸ್ವಾಮಿಗಳು

ತುಮಕೂರು : ಉದ್ಯೋಗ ಬಯಸಿ ಬರುವ ಯುವಕರು ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ, ಸಂವಹನ ಕಲೆ, ಮಾನವೀಯ ಗುಣಗಳು ಮತ್ತು ಅವರು ಸಂಸ್ಥೆಗೆ ಹೇಗೆ ಬೆನ್ನೆಲುಬಾಗಿ ಇರುತ್ತಾರೆ ಎಂದು ಉದ್ಯೋಗ ನೀಡುವ ಸಂಸ್ಥೆ ಬಯಸುತ್ತದೆ, ಎಂಬ ಹಿತವಚನವನ್ನು ನುಡಿದರು ತುಮಕೂರಿನ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಸಿದ್ಧಲಿಂಗ ಸ್ವಾಮಿಗಳು.

ಶ್ರೀರಾಮ ದೇವರಿಗೆ ವಿಶೇಷ ಪೂಜೆ

ತುಮಕೂರು: ಅಯೋಧ್ಯೆಯಲ್ಲಿ ಸೋಮವಾರ ನಡೆದ ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ತುಮಕೂರು ಗ್ರಾಮಾಂತರದ ಬೆಳ್ಳಾವಿ ಹೋಬಳಿ ಬುಗುಡನಹಳ್ಳಿ ಗ್ರಾಮದ ಶ್ರೀ ವೀರಾಂಜನೇಯಸ್ವಾಮಿ ದೇವಸ್ಥಾನದಲ್ಲಿ ಶ್ರೀರಾಮ ದೇವರ ವಿಶೇಷ ಪೂಜಾ ಕಾರ್ಯಕ್ರಮ ಮತ್ತು ಸಮುದಾಯ ಭವನ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

ಉತ್ತಮ ಆರೋಗ್ಯಕ್ಕೆ ಸಿರಿಧಾನ್ಯಗಳು ಅತ್ಯಗತ್ಯ – ಗೃಹ ಸಚಿವ ಡಾ: ಜಿ. ಪರಮೇಶ್ವರ

ತುಮಕೂರು : ರೈತರು ತಾವು ಬೆಳೆದ ಸಿರಿಧಾನ್ಯಗಳನ್ನು ಹಾಗೆಯೇ ಮಾರಾಟ ಮಾಡದೆ ಮೌಲ್ಯವರ್ಧನೆ ಮಾಡಿ ಉತ್ತಮ ವಾಣಿಜ್ಯ ಬೆಲೆಗೆ ಮಾರಾಟ ಮಾಡುವಂತಾಗಬೇಕು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ್ ಅವರು ಹೇಳಿದರು.

ಮಕ್ಕಳ ವಿದ್ಯಾಭ್ಯಾಸಕ್ಕೆ ದೊರಕುವ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು

ಮಧುಗಿರಿ : ಇಲಾಖೆ ಯಾವುದೇ ಇರಲಿ ತಾಲೂಕಿನ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ದೊರಕು ವಂತಹ ಎಲ್ಲಾ ಸೌಲಭ್ಯಗಳನ್ನು ಅಧಿಕಾರಿಗಳು ಕಲ್ಪಿಸಿ ಕೊಡಲು ಮುಂದಾಗಬೇಕೆಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಹಕಾರಿ ಸಚಿವ ಕೆ.ಎನ್ ರಾಜಣ್ಣ ಸೂಚಿಸಿದರು.

ಭಾರತದಲ್ಲೇ ಮೊದಲ ಭಾರಿ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕೊರಟಗೆರೆ: ಆರೋಗ್ಯ ಪ್ರತಿಯೊಬ್ಬರಿಗೂ ಅತ್ಯವಶ್ಯಕ. ಬಡಕುಟುಂಬಗಳಿಗೆ ಅನುಕೂಲವಾಗಲೆಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕೊರಟಗೆರೆ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿ.ಪಂ ಸಿಇಓ ಪ್ರಭು ತಿಳಿಸಿದರು.

Translate »
Scroll to Top