ತುಮಕೂರು

ಪ್ರಾಥಮಿಕ ಆರೋಗ್ಯ ಕೇಂದ್ರ ಮೀರಾಸಾಬಿ ಹಳ್ಳಿಯಲ್ಲಿ ವಿಶ್ವ ಸೊಳ್ಳೆ  ದಿನಾಚರಣೆ

1897ರ ಆಗಸ್ಟ್ 20ರಂದು ಬ್ರಿಟಿಷ್ ಸೇನೆಯ ಸರ್ಜನ್ ಸರ್ ರೊನಾಲ್ಡ್ ರೋಲ್ಸ್ ಎನ್ನುವ ಜೀವವಿಜ್ಞಾನಿಯು ಜನರಿಗೆ ಮೃತ್ಯುಕೂಪವೆನ್ನಿಸುವ ಮಲೇರಿಯಾ ರೋಗವು ಪ್ಯಾರಸೈಟ್ ಮೂಲಕ ಹರಡಲು ಅನಾಫೆಲಿಸ್ ಎನ್ನುವ ಹೆಣ್ಣು ಸೊಳ್ಳೆಯು ಕಾರಣವೆಂದು ಜಗತ್ತಿಗೆ ವಿವರಿಸಿದ ದಿನವಾಗಿದೆ. ಈ ಸೊಳ್ಳೆಯು ಇಷ್ಟೊಂದು ಭೀಕರ, ಆಘಾತಕಾರಿ ವ್ಯಾಧಿಯನ್ನು ಹರಡುತ್ತದೆ ಎಂಬ ಕಲ್ಪನೆಯು ಜನರಿಗೆ ಅದುವರೆಗೂ ಇರಲಿಲ್ಲ. ಹೀಗೆ ಅರಿವನ್ನು ಮೂಡಿಸಿದ ಆ ವಿಜ್ಞಾನಿಯ ನೆನಪಿಗಾಗಿ ಆಗಸ್ಟ್ 20 ವಿಶ್ವ ಸೊಳ್ಳೆಗಳ ದಿವಸವೆಂದು ಆಚರಿಸಲಾಗುತ್ತದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ತಗ್ಗಿದ ವರುಣಾ

ಕೆ.ಆರ್.ಎಸ್ ಡ್ಯಾಂನ ಒಳವಹರಿವು ಬಾರಿ ಇಳಿಕೆ.
17,455 ಕ್ಯೂಸೆಕ್ ಗೆ ಇಳಿದ ಡ್ಯಾಂನ ಒಳಹರಿವು.
ನಿನ್ನೆ 32 ಸಾವಿರ ಇದ್ದ ಒಳಹರಿವು.

ಬೆಂಗಳೂರಿನಲ್ಲಿ 38 ನೇ ರಾಜ್ಯ ಮಟ್ಟದ ಟೇಕ್ವಾಂಡೋ ಪಂದ್ಯಾವಳಿ

ಚಿತ್ರದುರ್ಗದಲ್ಲಿ ಕರ್ನಾಟಕ ಟೇಕ್ವಾಂಡೋ ಅಸೋಸಿಯೇಷನ್ ನ 38ನೇ ರಾಜ್ಯ ಮಟ್ಟದ ಸಬ್ಜ್ಯೂನಿಯರ್, ಜ್ಯೂನಿಯರ್ ಮತ್ತು ಸೀನಿಯರ್ ಟೇಕ್ವಾಂಡೋ ಪಂದ್ಯಾವಳಿ ಯಶಸ್ವಿಯಾಗಿ ಮುಕ್ತಾಯವಾಗಿದೆ.

ಸಂಭ್ರಮ – 2023: ಸರಳಾದೇವಿ ಕಾಲೇಜ್ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ದ್ವೀತಿಯಸ್ಥಾನ.

ಬಳ್ಳಾರಿ: ತುಮಕೂರಿನ ಶ್ರೀ ಸಿದ್ದಾರ್ಥ ಮಾಧ್ಯಮ ಅಧ್ಯಯನ ಕೇಂದ್ರದಲ್ಲಿ ಎರಡು ದಿನಗಳ ಕಾಲ ನಡೆದ ರಾಜ್ಯ ಮಟ್ಟದ ಸಮಾರಂಭ ಸಂಭ್ರಮದಲ್ಲಿ ಬಳ್ಳಾರಿಯ ಸರಳಾದೇವಿ ಕಾಲೇಜಿನ ಪತ್ರಿಕೋದ್ಯಮ ವಿದ್ಯಾರ್ಥಿಗಳು ಭಾಗವಹಿಸಿ, ವರದಿಗಾರಿಕೆ, ನುಡಿಚಿತ್ರ ಬರಹ ಹಾಗೂ ಛಾಯಾಚಿತ್ರ ಸ್ಪರ್ಧೆಗಳಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಪೌರ ಕಾರ್ಮಿಕರನ್ನು ಖಾಯಂಗೊಳಸಲು  ಪೌರಕಾರ್ಮಿಕರ ಮಹಾ ಸಂಘ ಆಗ್ರಹ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರು ಹಾಗೂ ಮೇಲ್ವಿಚಾರಕರನ್ನು ಖಾಯಂಗೊಳಿಸುವ ಕುರಿತು ರಾಜ್ಯ ಬೆಜಟ್ ನಲ್ಲಿ ಯಾವುದೇ ಪ್ರಸ್ತಾಪ ಮಾಡಿಲ್ಲ. ವಿಧಾನಮಂಡಲ ಅಧಿವೇಶನದಲ್ಲಿ ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾ ಸಂಘ ಆಗ್ರಹಿಸಿದೆ.

ನವದುರ್ಗಾಧಾಮದ 6ನೇ ವಾರ್ಷಿಕೋತ್ಸವ ಅದ್ದೂರಿ ಆಚರಣೆ

ತುಮಕೂರು: ಮಧುಗಿರಿ ತಾಲ್ಲೂಕಿನ ನಿಟ್ಟರಹಳ್ಳಿ ಅಭಯಹಸ್ತೆ ಆದಿಲಕ್ಷಿ ಸಂಸ್ಥಾನ ಮತ್ತು ವಿಶ್ವಕರ್ಮ ಸಂಪನ್ಮೂಲ ಚಾರಿಟಬಲ್ ಟ್ರಸ್ಟ್ ಹಾಗೂ ನಿಜಶರಣ ಕಮ್ಮಾರ ಕಲ್ಲಯ್ಯ ಮಠದಿಂದ ಜುಲೈ 1 ಮತ್ತು 2ರಂದು ನವದುರ್ಗಾಧಾಮದ 6ನೇ ವಾರ್ಷಿಕೋತ್ಸವ, ಮಹಾಚಂಡಿಕಾ ಹೋಮ ಮತ್ತು ನವದುರ್ಗಾನುಷ್ಠಾನ ಕಾರ್ಯಕ್ರಮ ಆಯೋಜಿಸಲಾಗಿದೆ.

ಪಾವಗಡ ಸೋಲಾರ್ ಪಾರ್ಕ್‌ಗೆ ಡಿಕೆಶಿ, ಜಾರ್ಜ್ ಭೇಟಿ

ತುಮಕೂರು : ಜಿಲ್ಲೆಯ ಪಾವಗಡ ತಾಲ್ಲೂಕು ತಿರುಮಣಿಯಲ್ಲಿರುವ ಏಷ್ಯಾದ ಅತಿದೊಡ್ಡ ಸೋಲಾರ್ ಪಾರ್ಕ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಲಾರಿ ಕಾರು ಮುಖಾಮುಖಿ ಡಿಕ್ಕಿ : ಇಬ್ಬರು ಸಾವು

ಕೊರಟಗೆರೆ : ಲಾರಿ ಹಾಗೂ ಎರ್ಟಿಗಾ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೆ ಮೃತಪಟ್ಟು 5 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊರಟಗೆರೆ ತಾಲೂಕಿನ ಜಟ್ಟಿಗ್ರಾಹಾರದ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ಲಾರಿ ತಡೆದು ಹಣ ವಸೂಲಿ : ASI ಸೇರಿ ಇಬ್ಬರು ಪೊಲೀಸರು ಅಮಾನತು

ತುಮಕೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದ ಓರ್ವ ಎಎಸ್ಐ ಸೇರಿ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ.

Translate »
Scroll to Top