ಬಳ್ಳಾರಿ

ಶಾಸಕ ಜನಾರ್ದನರೆಡ್ಡಿಯವರಿಗೆ ಭವ್ಯ, ಭರ್ಜರಿ ಸ್ವಾಗತ

ಬಳ್ಳಾರಿ: ಬಿಜೆಪಿಯ ಪ್ರಮುಖ ಮತ್ತು ಪ್ರಭಾವಿ ಧುರೀಣ, ಗಂಗಾವತಿ ಶಾಸಕ ಗಾಲಿ ಜನಾರ್ದನರೆಡ್ಡಿಯವರು ಇಂದು ಸಂಜೆ ಬಳ್ಳಾರಿ ನಗರಕ್ಕೆ ಆಗಮಿಸಿದಾಗ ಅವರ ಬೆಂಬಲಿಗರು, ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಅದ್ದೂರಿ, ಭವ್ಯ ಸ್ವಾಗತ ನೀಡಿ, ಆತ್ಮೀಯತೆಯಿಂದ ಬರಮಾಡಿಕೊಂಡರು.

ದರ್ಶನ್ ಗೆ ಮತ್ತೊಂದು ಸಂಕಷ್ಟ | ಐಟಿ ಅಧಿಕಾರಿಗಳಿಂದ ಬಳ್ಳಾರಿ ಜೈಲಿನಲ್ಲಿ ವಿಚಾರಣೆ

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಲಕ್ಷಾಂತರ ರೂಗಳ ಹಣದ ವಹಿವಾಟು ನಡೆದಿರುವ ಹಿನ್ನಲೆಯಲ್ಲಿ ಬಳ್ಳಾರಿಯ ಸೆಂಟ್ರಲ್ ಜೈಲಿನಲ್ಲಿರುವ ನಟ ದರ್ಶನ್ ನನ್ನು ಆದಾಯ ತೆರಿಗೆ ಇಲಾಖೆ(ಐಟಿ) ಅಧಿಕಾರಿಗಳು ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದಾರೆ.

ಬಳ್ಳಾರಿ ‘ದಾಸ’ನಾದ ನಟ ದರ್ಶನ್

ಬಳ್ಳಾರಿ: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ, ಕನ್ನಡ ಚಿತ್ರರಂಗದ ಜನಪ್ರಿಯ ನಾಯಕ ನಟ ದರ್ಶನ್ ಅವರನ್ನು ಬಳ್ಳಾರಿಯ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ಗುರುವಾರ ಬೆಳಿಗ್ಗೆ ೧೦ ಗಂಟೆಗೆ `ದರ್ಶನ್’ರನ್ನು ಬಂಧೀಖಾನೆ ಇಲಾಖೆ ಅಧಿಕಾರಿಗಳು, ಸಕಲ ಭದ್ರತೆಯೊಂದಿಗೆ ಬಳ್ಳಾರಿಗೆ ಕರೆ ತಂದಿದ್ದಾರೆ.

ರಾಬರ್ಟ್ ಬ್ರೂಸ್ ಫುಟ್ ಸಂಗನಕಲ್ಲು ಪ್ರಾಕ್ತನ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ

ಬಳ್ಳಾರಿ : ನಗರದ ಡಾ.ರಾಜ್ ಕುಮಾರ್ ರಸ್ತೆಯ ರಾಬರ್ಟ್ ಬ್ರೂಸ್ ಫುಟ್ ಸಂಗನಕಲ್ಲು ಪ್ರಾಕ್ತನ ವಸ್ತು ಸಂಗ್ರಹಾಲಯಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಗುರುವಾರ ಭೇಟಿ ನೀಡಿ ವೀಕ್ಷಣೆ ಮಾಡಿದರು.

ಬಳ್ಳಾರಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಕಂದಾಯ ಸಚಿವ ಕೃಷ್ಣ ಭೈರೇಗೌಡ

ಬಳ್ಳಾರಿ,ಆ.15: ಭಾರತದ 78 ನೇ ಸ್ವಾತಂತ್ರೋತ್ಸವದ ಅಂಗವಾಗಿ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ಧ್ವಜಾರೋಹಣ ನೆರವೇರಿಸಿದರು.

ಹೊಸಪೇಟೆ ಬೈಪಾಸ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್|ಸಂಚಾರಿ ಪೊಲೀಸ್‌ರಿಲ್ಲದೆ ಸವಾರರ ಪರದಾಟ

ಬಳ್ಳಾರಿ : ಬಳ್ಳಾರಿ ನಗರದ ಹೊರವಲಯದ ಹೊಸಪೇಟೆ ಬೈಪಾಸ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿ ವಾಹನ ಸವಾರರು ಪರದಾಡುವ ಪರಿಸ್ಥಿತಿ ಏರ್ಪಟ್ಟಿದೆ. ವಾಹನ ದಟ್ಟಣೆ ನಿರ್ವಹಿಸಲು ಸಂಚಾರಿ ಪೊಲೀಸ್ರು ಕೂಡಾ ಇಲ್ಲದ ಕಾರಣ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಿ ಸಂಚಾರ ಅಸ್ತವ್ಯಸ್ತವಾಗಿತ್ತು.

ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯಲ್ಲಿ ಎರಡು ದಿನಗಳ ‘ಅಂತರ್‌ವಿಭಾಗೀಯ ಯುವಜನೋತ್ಸವ-2024’

ಬಳ್ಳಾರಿ : ಸಾಂಸ್ಕೃತಿಕ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರಲು, ಪಠ್ಯೇತರ ಚಟುವಟಿಕೆಗಳನ್ನು ಉತ್ತೇಜಿಸಲು ಪೂರಕವಾಗಿದ್ದು, ವಿಶ್ವವಿದ್ಯಾಲಯದ ಸಾಂಸ್ಕೃತಿಕ ವೇದಿಕೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಿಸಲು ಸೂಕ್ತವಾಗಿವೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಮಾಜಿ ಅಧ್ಯಕ್ಷರು ಹಾಗೂ ಸಾಹಿತಿಗಳಾದ ಸಿದ್ದರಾಮ ಕಲ್ಮಠ ಅವರು ಹೇಳಿದರು.

ಶಾಲಾ ಮಕ್ಕಳು ಶಿಕ್ಷಣದ ಜೊತೆಗೆ ಆರೋಗ್ಯ ಕಾರ್ಯಕ್ರಮಗಳ ಅರಿವು ಹೊಂದಬೇಕು

ಬಳ್ಳಾರಿ : ಮಕ್ಕಳು ಶಾಲೆಯಲ್ಲಿ ಶಿಕ್ಷಣ ಪಡೆಯುವುದಲ್ಲದೇ ಆರೋಗ್ಯ ಕಾರ್ಯಕ್ರಮಗಳ ಶಿಕ್ಷಣದ ಅರಿವು ಹೊಂದಬೇಕು. ಈ ಮೂಲಕ ವಿದ್ಯಾರ್ಥಿಗಳು ಎಲ್ಲಾ ವಿಷಯವನ್ನು ತಿಳಿದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಹೇಳಿದರು.

ಸಿಎಂ ಸಿದ್ದರಾಮಯ್ಯ ಬೆಂಬಲಿಸಿ ಬೃಹತ್ ಪ್ರತಿಭಟನೆ ಮೆರವಣಿಗೆ

ಬಳ್ಳಾರಿ : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಷಡ್ಯಂತ್ರ, ಮುಖ್ಯಮಂತ್ರಿಗಳಿಗೆ ಸಂಬಮಧವೇ ಇಲ್ಲದ ಮುಡಾ ಪ್ರಕರಣದಲ್ಲಿ ಅವರ ಹೆಸರು ಸಿಲುಕಿಸುವ ವಿಪಕ್ಷಗಳ ಹುನ್ನಾರ ಖಂಡಿಸಿ, ಬಳ್ಳಾರಿಯಲ್ಲಿಂದು ಕರ್ನಾಟಕ ಶೋಷಿತ ಸಮುದಾಯಗಳ ಮಹಾಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಆಶ್ರಯದಲ್ಲಿ ಸಾವಿರಾರು ಜನರು ಬೃಹತ್ ಪ್ರತಿಭಟನೆ ನಡೆಸಿ ಸಿಎಂ ಸಿದ್ದರಾಮಯ್ಯನವರಿಗೆ ನೈತಿಕ ಬೆಂಬಲ ಸೂಚಿಸಿದರು.

ಎಜುಕಾನ್-2024: ಎರಡನೇ ದಿನದ ಶೈಕ್ಷಣಿಕ ಸಮಾವೇಶದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬಳ್ಳಾರಿ : ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ಶೈಕ್ಷಣಿಕ ಅಭಿವೃದ್ಧಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಶೇ.25 ರಷ್ಟು ಅನುದಾನ ಮೀಸಲಿರಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದರು.

Translate »
Scroll to Top