ಬೆಳಗಾವಿ

‘ಫ್ರೂಟ್ಸ್’ ಮಾದರಿಯಲ್ಲೇ ಆಧಾರ್ ಮತ್ತು ಪಹಣಿ ಲಿಂಕ್ ಮಾಡುವ ಕೆಲಸ ಆಂದೋಲನದ ಮಾದರಿಯಲ್ಲಿ ಆಗಬೇಕು: ಕೃಷ್ಣ ಬೈರೇಗೌಡ

ಬೆಳಗಾವಿ : ಹಣ ದುರ್ಬಳಕೆ ಹಾಗೂ ಅಕ್ರಮ ಪ್ರಕರಣಗಳನ್ನು ನಿಯಂತ್ರಿಸಲು “ಫ್ರೂಟ್ಸ್” ಮಾದರಿಯಲ್ಲೇ ಆಧಾರ್ ಕಾರ್ಡ್ ಮತ್ತು ಪಹಣಿ ಲಿಂಕ್ ಮಾಡುವ ಕೆಲಸ ಆರಂಭವಾಗಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದರು.

ತಾಯ್ನಾಡಿಗಾಗಿ ಸಂಗೊಳ್ಳಿ ರಾಯಣ್ಣನ ನಡೆಸಿದ ಹೋರಾಟ ನಮಗೆಲ್ಲಾ ಮಾದರಿ: ಸಿ.ಎಂ.ಸಿದ್ದರಾಮಯ್ಯ

ಸಂಗೊಳ್ಳಿ : ಬ್ರಿಟೀಷರ ವಿರುದ್ಧ ಹೋರಾಡಿ ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದು ಕಾಂಗ್ರೆಸ್. ಆದರೆ ಇಂದು ದೇಶಭಕ್ತರಂತೆ ಫೋಜು ಕೊಡುವವರು ಬ್ರಿಟೀಷರ ವಿರುದ್ಧ ಏಕೆ ಹೋರಾಡಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು.

ಗಡಿ ಭಾಗದ  865 ಗ್ರಾಮಗಳಲ್ಲಿ  ಆರೋಗ್ಯ ವಿಮೆ ಜಾರಿಗೆ ಮುಂದಾದ ಮಹಾರಾಷ್ಟ್ರ ಸರ್ಕಾರ

ಬೆಳಗಾವಿ : ಕರ್ನಾಟಕದ ಗಡಿ ಭಾಗದ 865 ಗ್ರಾಮಗಳಲ್ಲಿ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಜಾರಿ ಮಾಡಲು ಮುಂದಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾರಾಷ್ಟ್ರ ಕರ್ನಾಟಕದೊಳಗೆ ಬರಬಾರದು ಎಂದು ಮುಖ್ಯ ಕಾರ್ಯದರ್ಶಿಗಳು ಈಗಾಗಲೇ ಮಹಾರಾಷ್ಟ್ರದವರಿಗೆ ಸೂಚಿಸಿದ್ದಾರೆ ಎಂದು ತಿಳಿಸಿದರು.

ಸ್ಟಾರ್ಟ್‌ಅಪ್‌ಗಳ ಉತ್ತೇಜನಕ್ಕೆ’ಪ್ರಾಶಸ್ತ್ಯದ ಸಾರ್ವಜನಿಕ ಸಂಗ್ರಹಣೆ ನೀತಿ’: ಪ್ರಿಯಾಂಕ್‌ ಖರ್ಗೆ 

ಬೆಳಗಾವಿ: ಸ್ಥಳೀಯ ನವೋದ್ಯಮಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ‘ಪ್ರಾಶಸ್ತ್ಯದ ಸಾರ್ವಜನಿಕ ಸಂಗ್ರಹಣೆ ನೀತಿ’ ರೂಪಿಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಬೆಳಗಾವಿ: ಅಮಾನವೀಯ ಕೃತ್ಯದ ಮಾಹಿತಿ ಸಂಗ್ರಹಿಸಿದ ಬಿಜೆಪಿ ಸತ್ಯಶೋಧನಾ ಸಮಿತಿ

ಬೆಂಗಳೂರು: ಸಂಸದರಾದ ಶ್ರೀಮತಿ ಅಪರಾಜಿತಾ ಸಾರಂಗಿ, ಶ್ರೀಮತಿ ಸುನಿತಾ ದುಗ್ಗಲ್, ಶ್ರೀಮತಿ ರಂಜಿತಾ ಕೋಲಿ, ಶ್ರೀಮತಿ ಲಾಕೆಟ್ ಚಟರ್ಜಿ ಅಲ್ಲದೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಆಶಾ ಲಾಕ್ರಾ ಅವರ ನಿಯೋಗವು ಬೆಳಗಾವಿಯಲ್ಲಿ ಮಹಿಳೆ ಮೇಲಿನ ದೌರ್ಜನ್ಯ, ಬೆತ್ತಲಾಗಿಸಿ ಕಂಬಕ್ಕೆ ಕಟ್ಟಿ ಥಳಿಸಿದ ಘಟನೆಯ ಮಾಹಿತಿ ಸಂಗ್ರಹಿಸಿತು.

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧ

ಬೆಳಗಾವಿ : ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬದ್ಧವಾಗಿದ್ದು, ಪ್ರತ್ಯೇಕ ರಾಜ್ಯದ ಬೇಡಿಕೆ ಸಲ್ಲದು ಹಾಗೂ ಅದು ತಾರತಮ್ಯ ನಿವಾರಣೆಗೆ ಪರಿಹಾರವೂ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರಾಯಚೂರು ಮಾವಿನಕೆರೆ ಸಮಗ್ರ ಅಭಿವೃದ್ಧಿಗೆ ಯೋಜನೆ: ಸಚಿವ ಎನ್ ಎಸ್ ಬೋಸರಾಜು

ಬೆಳಗಾವಿ: ರಾಯಚೂರು ಮಾವಿನ ಕೆರೆಯ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು ಎಂದು ಮಾನ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಬೋಸರಾಜು ಹೇಳಿದ್ದಾರೆ.

ಅತೀ ಶೀಘ್ರದಲ್ಲಿ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪನೆಗೆ ಚಿಂತನೆ : ಸಚಿವ ಬಿ. ನಾಗೇಂದ್ರ

ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲು ನಮ್ಮ ಸರ್ಕಾರ ಸದಾ ಸಿದ್ಧವಾಗಿದೆ
ಬೆಳಗಾವಿ, ಅಳಿವಂಚಿನಲ್ಲಿರುವ ಕ್ರೀಡೆಗಳನ್ನು ಅಂತರ್ ರಾಷ್ಟ್ರೀಯ ಮಟ್ಟಕ್ಕೆ ಕೊಂಡೋಯ್ಯಲು ನಮ್ಮ ಸರ್ಕಾರ ಈಗಾಗಲೇ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮುಖ್ಯವಾಹಿನಿಗೆ ತರುತ್ತಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ತಿಳಿಸಿದರು.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತ ಚರ್ಚೆ

1. ನಂಜುಂಡಪ್ಪನವರ ವರದಿಯ ಅನುಷ್ಠಾನ ಹಾಗೂ ಅದರ ಫಲಶ್ರುತಿಯನ್ನು ಅಧ್ಯಯನ ಮಾಡಲು ನುರಿತ ಅರ್ಥಶಾಸ್ತçಜ್ಞರೊಬ್ಬರ ಅಧ್ಯಕ್ಷತೆಯಲ್ಲಿ ಹೈಪವರ್ [ಉನ್ನತಾಧಿಕಾರ ಸಮಿತಿ] ಕಮಿಟಿಯನ್ನು ರಚಿಸಲಾಗುವುದು
ನಂಜುಂಡಪ್ಪ ವರದಿ ಸಲ್ಲಿಕೆಯಾಗಿ 21 ವರ್ಷಗಳಾದವು. ನಂಜುಂಡಪ್ಪನವರ ವರದಿಯನ್ನಾಧರಿಸಿ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮೂಲಕ ಇದುವರೆಗೆ 61330 ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಿದೆ. ಸುಮಾರು 42000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ.

ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಹಿಂತೆಗೆತ ಪ್ರಕರಣ ವಿಧಾನಸಭೆಯಲ್ಲಿ ಪ್ರತಿಧ್ವನಿ

ಬೆಳಗಾವಿ : ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಹಿಂಪಡೆದ ಸರಕಾರದ ಕ್ರಮವನ್ನು ಪ್ರತಿಪಕ್ಷದ ನಾಯಕ ಆರ್. ಅಶೋಕ್ ವಿಧಾನಸಭೆಯಲ್ಲಿ ಶುಕ್ರವಾರ ತರಾಟೆಗೆ ತೆಗೆದುಕೊಂಡರು.

Translate »
Scroll to Top