ಬೆಂಗಳೂರು ಬಂದ್ಗೆ ಬಿಜೆಪಿ ಬೆಂಬಲ : ಸಿ.ಟಿ.ರವಿ
ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಇರುವಾಗ, ಮಂಡ್ಯದ ರೈತರ ಸಮಸ್ಯೆ ಅರ್ಥ ಮಾಡಿಕೊಳ್ಳದೆ, ಬೆಂಗಳೂರಿನ ಕುಡಿಯುವ ನೀರಿನ ಪರಿಸ್ಥಿತಿಯನ್ನೂ ಅರ್ಥ ಮಾಡದೆ ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸುತ್ತಿರುವುದು ಖಂಡನೀಯ. ಈ ಸಂಬಂಧ ಮಂಗಳವಾರ ನಡೆಯುವ ಬೆಂಗಳೂರು ಬಂದ್ಗೆ ಬಿಜೆಪಿ ಬೆಂಬಲ ಕೊಡಲಿದೆ ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಪ್ರಕಟಿಸಿದರು.