ಮೈಸೂರು

ಬೆಂಗಳೂರು ಬಂದ್‍ಗೆ ಬಿಜೆಪಿ ಬೆಂಬಲ : ಸಿ.ಟಿ.ರವಿ

ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಇರುವಾಗ, ಮಂಡ್ಯದ ರೈತರ ಸಮಸ್ಯೆ ಅರ್ಥ ಮಾಡಿಕೊಳ್ಳದೆ, ಬೆಂಗಳೂರಿನ ಕುಡಿಯುವ ನೀರಿನ ಪರಿಸ್ಥಿತಿಯನ್ನೂ ಅರ್ಥ ಮಾಡದೆ ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸುತ್ತಿರುವುದು ಖಂಡನೀಯ. ಈ ಸಂಬಂಧ ಮಂಗಳವಾರ ನಡೆಯುವ ಬೆಂಗಳೂರು ಬಂದ್ಗೆ ಬಿಜೆಪಿ ಬೆಂಬಲ ಕೊಡಲಿದೆ ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಪ್ರಕಟಿಸಿದರು.

6ನೇ ಗ್ಯಾರಂಟಿಯಾಗಿ ಮದ್ಯಭಾಗ್ಯ; ಸರಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಟೀಕಾಪ್ರಹಾರ

ಮನೆಮನೆಗೂ ಮದ್ಯಭಾಗ್ಯ ನೀಡುವ ಮೂಲಕ ರಾಜ್ಯ ಕಾಂಗ್ರೆಸ್ ಸರಕಾರವು ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ಕರ್ನಾಟಕವನ್ನು ಕುಡುಕರ ತೋಟವನ್ನಾಗಿ ಮಾಡಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾವೇರಿಗಾಗಿ ಕಾನೂನು ಸಂಘರ್ಷಕ್ಕೆ ಇಳಿದ ಮಂಡ್ಯದ ಇಬ್ಬರೂ ರೈತರು

ಕಾವೇರಿ ನೀರಿಗಾಗಿ ನಾಡಿನ ಹಿತರಕ್ಷಣೆಗೆ ಹೋರಾಡುತ್ತಿರುವ ರೈತರು ಮತ್ತು ಸರ್ಕಾರದ ಹೋರಾಟಕ್ಕೆ ಮಂಡ್ಯ ಜಿಲ್ಲೆಯ ಇಬ್ಬರೂ ರೈತರು ಕೈ ಜೋಡಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸುವ ಮೂಲಕ ಕಾನೂನು ಸಂಘರ್ಷಕ್ಕೆ ಇಳಿದಿದ್ದಾರೆ.

ಬಿಜೆಪಿಯಿಂದ ಕಾವೇರಿ ಜನಜಾಗೃತಿ ಯಾತ್ರೆ : ಬಸವರಾಜ ಬೊಮ್ಮಾಯಿ

ಕಾವೇರಿ ಜಲಾನಯನ ಪ್ರದೇಶದ ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು ಮತ್ತು ಹಾಸನ ಜಿಲ್ಲೆಗಳ ಎಲ್ಲ ತಾಲ್ಲೂಕುಗಳಲ್ಲಿ ಕಾವೇರಿ ಜನಜಾಗೃತಿ ಯಾತ್ರೆಯನ್ನು ಕೈಗೊಳ್ಳಲಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಕಟಿಸಿದರು.

ಪವರ್ ಕಟ್ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದೆಯಾ ಕಾಂಗ್ರೆಸ್‍ ಸರ್ಕಾರ…?

ಬೆಂಗಳೂರು: ಮಳೆಯ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪವರ್ ಕಟ್ ಮಾಡಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿರುವ ಅಂಶ ಬೆಳಕಿಗೆ ಬಂದಿದೆ.

ಬನ್ನೇರುಘಟ್ಟ, ಮೈಸೂರು ಮೃಗಾಲಯ ಅಭಿವೃದ್ಘಿಗೆ ಮಾಸ್ಟರ್ ಪ್ಲಾನ್ ಗೆ ಖಂಡ್ರೆ ಸೂಚನೆ

ಮೈಸೂರಿನಲ್ಲಿರುವ ಜಗದ್ವಿಖ್ಯಾತ ಶ್ರೀ ಚಾಮರಾಜೇಂದ್ರ ಮೃಗಾಲಯ ಮತ್ತು ಬೆಂಗಳೂರು ಹೊರ ವಲಯ ಬನ್ನೇರುಘಟ್ಟದಲ್ಲಿರುವ ಮೃಗಾಲಯಗಳ ಸಮಗ್ರ ಅಭಿವೃದ್ಧಿಗಾಗಿ ಮಹಾ ಯೋಜನೆ (ಮಾಸ್ಟರ್ ಪ್ಲಾನ್) ರೂಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ಹಾಗೂ ಕುಡಿಯುವ ನೀರು ಅಗತ್ಯ ರಕ್ಷಣೆಗೆ ನಾವು ಬದ್ಧ

ಬೆಂಗಳೂರು: “ತಮಿಳುನಾಡು 24 ಸಾವಿರ ಕ್ಯೂಸೆಕ್ ನೀರು ಬಿಡಲು ಪಟ್ಟು ಹಿಡಿದಿತ್ತು. ಈಗಿನ ಪರಿಸ್ಥಿತಿಯಲ್ಲಿ ಇಷ್ಟು ನೀರು ಬಿಡಲು ಅಸಾಧ್ಯ ಎಂದು ನಮ್ಮ ಅಧಿಕಾರಿಗಳು ವಾದ ಮಂಡಿಸಿದ್ದಾರೆ. ನಾವು 3 ಸಾವಿರ ಕ್ಯೂಸೆಕ್ ನೀರು ಬಿಡುವುದಾಗಿ ಹೇಳಿದೆವು. ಪರಿಣಾಮ ಪ್ರಾಧಿಕಾರ 5 ಸಾವಿರ ಕ್ಯೂಸೆಕ್ ನೀರು ಬಿಡಲು ನಿರ್ದೇಶಿಸಿದೆ. ನಾವು ಅವರ ನಿರ್ಧಾರ ಗೌರವಿಸುತ್ತೇವೆ. ಅವರು ನಮ್ಮ ಆಣೆಕಟ್ಟುಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅಧ್ಯಯನ ಮಾಡಲಿ ಎಂದು ಮನವಿ ಮಾಡಿದ್ದೇವೆ. ಅವರು ಬಂದು ಪರಿಶೀಲನೆ ಮಾಡಿ ವಾಸ್ತವಾಂಶ ಅರಿಯಲಿ.

ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆ ಗೃಹಲಕ್ಷ್ಮಿಗೆ ಮೈಸೂರಿನಲ್ಲಿ ಅದ್ದೂರಿ  ಚಾಲನೆ

:ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು : ಚುನಾವಣಾ ಪ್ರಣಾಳಿಕೆಯನ್ನು ಸಮರ್ಪಕವಾಗಿ ಜಾರಿಮಾಡಬೇಕಿರುವುದು ಯಾವುದೇ ಸರ್ಕಾರದ ರಾಜಧರ್ಮ. ಅದರಂತೆ ನಮ್ಮ ಸರ್ಕಾರ ಗೃಹಲಕ್ಮೀ ಯೋಜನೆಯನ್ನು ಜಾರಿ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು .

ಖ್ಯಾತ ಸಂಗೀತ ನಿರ್ದೇಶಕ  ಹಂಸಲೇಖರಿಂದ ದಸರಾ ಉದ್ಘಾಟನೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವವನ್ನು ನಾಡಿನ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರ ಮೂಲಕ ಈ ಬಾರಿಯ ಉದ್ಘಾಟಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು.

Translate »
Scroll to Top