ಮಕ್ಕಳಲ್ಲಿ ನೀರಿನ ಉಳಿತಾಯದ ಅರಿವು ಮೂಡಿಸುವ ಕಾರ್ಯಕ್ರಮಗಳ ಆಯೋಜನೆಗೆ ಚಿಂತನೆ
ಬೆಂಗಳೂರು: ನೀರಿನ ಬಳಕೆ ಮತ್ತು ಸಂರಕ್ಷಣೆಯ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಇಸ್ರೇಲ್ ದೇಶ ಹಲವಾರು ಪರಿಣಾಮಕಾರಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ, ಉತ್ತಮ ಫಲಿತಾಂಶವನ್ನು ಕಂಡುಕೊಂಡಿದೆ. ಇದೇ ಮಾದರಿಯಲ್ಲಿ ರಾಜ್ಯ ಅಂತರ್ಜಲ ಅಭಿವೃದ್ದಿ ನಿರ್ದೇಶನಾಲಯದ ಅಡಿಯಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಚಿಂತನೆ ನಡೆಸುವುದಾಗಿ ಮಾನ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್. ಎಸ್ ಬೋಸರಾಜು ತಿಳಿಸಿದರು.