ಶಿವಮೊಗ್ಗ

ಶಿವಮೊಗ್ಗ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ : ಮೆರವಣಿಗೆಯಲ್ಲಿ ಭಾಗಿ

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾದ ಗೀತಾ ಶಿವರಾಜ್ ಕುಮಾರ್ ಬೃಹತ್ ಮೆರವಣಿಗೆಯಲ್ಲಿ ಬಂದು ನಾಮಪತ್ರ ಸಲ್ಲಿಸುವ ಮೊದಲು ಒಂದು ಸೆಟ್ ನ ನಾಮಪತ್ರ ಸಲ್ಲಿಸಿದ್ದಾರೆ.
ನಂತರ ಮಾಧ್ಯಮಗಳಿಗೆ ಮಾತನಾಡಿದ ಅಭ್ಯರ್ಥಿ ಗೀತ ಈ ಬಾರಿ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ. ಗ್ಯಾರೆಂಟಿಯಿಂದಾಗಿ ಜನ ಕಾಂಗ್ರೆಸ್ ಗೆ ಮತಹಾಕಲಿದ್ದಾರೆ. ಹೋದಕಡೆಯಲ್ಲ ಮಹಿಳೆಯರು ಹೆಚ್ಚಿನ ಒಲವು ತೋರುತ್ತಿದ್ದಾರೆ ಎಂದರು.
ಡಿಸಿಎಂ ಡಿಕೆ ಶಿವಕುಮಾರ್ ಶಿವಮೊಗ್ಗಕ್ಕೆ ಬಂದ ಮೇಲೆ ಮತ್ತೊಂದು ಸೆಟ್ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದರು.

ಯುವಕ ಯುವತಿಯರು ಭ್ರಮ‌ನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ ತುಂಬುವ ಸಲುವಾಗಿ ಯುವನಿಧಿ: ಸಿ.ಎಂ.ಸಿದ್ದರಾಮಯ್ಯ ಘೋಷಣೆ

ಶಿವಮೊಗ್ಗಕ್ಕೆ ಇಂದು ಐತಿಹಾಸಿಕ ದಿನ: ಸಿಎಂ
ಯಾವ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂಥ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಎಂದು ವಿವೇಕಾನಂದರು ಘೋಷಿಸಿದ್ದರು: ಸಿಎಂ ಸಿದ್ದರಾಮಯ್ಯ

ಗ್ಯಾರಂಟಿಗಳ ಮೂಲಕ ಜನರಿಗೆ ಆರ್ಥಿಕ, ಸಾಮಾಜಿಕ ಶಕ್ತಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಶಿವಮೊಗ್ಗ : ಬಡವರು ಹಾಗೂ ಮಧ್ಯಮ ವರ್ಗದವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬಿ ಮುಖ್ಯವಾಹಿನಿಗೆ ಬರುವಂತಾಗಬೇಕೆಂಬ ಉದ್ದೇಶದಿಂದ ಸಾರ್ವತ್ರಿಕ ಮೂಲ ಆದಾಯದ ತತ್ವದಂತೆ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಜಾರಿ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಯುವನಿಧಿ ಕಾರ್ಯಕ್ರಮಕ್ಕೆ ಪೂರ್ವಭಾವಿ ಸಭೆ ನಡೆಸಿದ ವೈದ್ಯಕೀಯ ಸಚಿವ ಶರಣಪ್ರಕಾಶ್ ಪಾಟೀಲ್

ಶಿವಮೊಗ್ಗ : ರಾಜ್ಯ ಸರ್ಕಾರದ ಬಹುನಿರೀಕ್ಷಿತ ಯುವನಿಧಿ ಯೋಜನೆಯ ಉದ್ಘಾಟನೆಯನ್ನು ಜನಪರ ಕಾರ್ಯಕ್ರಮವನ್ನಾಗಿ ರೂಪಿಸಲು ಅಧಿಕಾರಿಗಳಿಗೆ ವೈದ್ಯಕೀಯ ಶಿಕ್ಷಣ ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಶೌಚಗುಂಡಿಗೆ ಮಕ್ಕಳನ್ನು ಇಳಿಸಿದ ಪ್ರಕರಣ ಅಧ್ಯಯನಕ್ಕೆ ಬಿಜೆಪಿ ಸಮಿತಿ: ವಿಜಯೇಂದ್ರ

ಬೆಂಗಳೂರು: ಕೋಲಾರ ಜಿಲ್ಲೆಯ ಮಾಲೂರಿನ ಸಮೀಪದ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿನಿಲಯದ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಸ್ವಚ್ಛಗೊಳಿಸಿದ ಘಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಖಂಡಿಸಿದ್ದಾರೆ. ಈ ಘಟನೆಯ ವಸ್ತುಸ್ಥಿತಿ ಅಧ್ಯಯನಕ್ಕೆ ರಾಜ್ಯ ಸಮಿತಿಯನ್ನು ರಚಿಸಿ ಅವರು ಆದೇಶ ಹೊರಡಿಸಿದ್ದಾರೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.

ಶೇ 80 ಕಮಿಷನ್‍ನ ಕಾಂಗ್ರೆಸ್ ಸರಕಾರಕ್ಕೆ ಪ್ರಜ್ಞಾವಂತ ಮತದಾರರಿಂದ ತಕ್ಕ ಪಾಠ: ವಿಜಯೇಂದ್ರ ವಿಶ್ವಾಸ

ಬೆಂಗಳೂರು: ಗುಡುಗು, ಸಿಡಿಲು, ಮಳೆ, ಬಿರುಗಾಳಿ ಏನೇ ಬಂದರೂ ಪಕ್ಷದ ಹಿರಿಯರಾದ ಯಡಿಯೂರಪ್ಪ, ಈಶ್ವರಪ್ಪ ಮತ್ತಿತರ ರಾಜ್ಯದ ಎಲ್ಲ ಹಿರಿಯರ ಆಶೀರ್ವಾದ, ಕಾರ್ಯಕರ್ತರ ನೆರವಿನಿಂದ ಬಿಜೆಪಿ ಎಂಬ ವಿಮಾನವನ್ನು ಸೇಫ್ ಆಗಿ ಲ್ಯಾಂಡ್ ಮಾಡಲಿದ್ದೇನೆ ಎಂದು ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರನವರು ತಿಳಿಸಿದರು.

ಮುಂದಿನ 3 ವರ್ಷಗಳಲ್ಲಿ 3 ಸಾವಿರ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳ ಸ್ಥಾಪನೆ : ಸಚಿವ ಎಸ್. ಮಧು ಬಂಗಾರಪ್ಪ

ಶಿವಮೊಗ್ಗ : ರಾಜ್ಯದಲ್ಲಿ ಮುಂದಿನ ಮೂರು ವರ್ಷಗಳಲ್ಲಿ 3 ಸಾವಿರ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳನ್ನು ತೆರೆಯುವ ಉದ್ದೇಶ ಹೊಂದಲಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್. ಮಧು ಬಂಗಾರಪ್ಪ ಹೇಳಿದರು.

ನಾಡಿನ ಹೆಮ್ಮೆಯ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಶತಮಾನೋತ್ಸವ ಸಂಭ್ರಮ

ಬೆಂಗಳೂರು: ನಾಡಿನ ಕೈಗಾರಿಕಾ ವಲಯದಲ್ಲಿ ತನ್ನದೇ ಆದ ಹೆಗ್ಗುರುತುಗಳನ್ನು ಮೂಡಿಸಿ ಮುನ್ನಡೆಯುತ್ತಿರುವ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಶತಮಾನೋತ್ಸವ ಸಂಭ್ರಮದಲ್ಲಿದ್ದು, ನವೆಂಬರ್ 4 ಮತ್ತು 5 ರಂದು ಎರಡು ದಿನಗಳ ಕಾಲ ಶಿವಮೊಗ್ಗ ಜಿಲ್ಲೆ ಭದ್ರಾವತಿಯ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ ಆವರಣದಲ್ಲಿ ಶತಮಾನೋತ್ಸವ ಸಮಾರಂಭ ನಡೆಯಲಿದೆ.

ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ವಿತರಕರನ್ನು ಪರಿಗಣಿಸುವಂತೆ ಮನವಿ

ಶಿವಮೊಗ್ಗ ಜಿಲ್ಲೆಯಲ್ಲಿ ನೀಡುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಈ ಸಾಲಿನಿಂದ ಪತ್ರಿಕಾ ವಿತರಕರನ್ನು ಪ್ರಶಸ್ತಿಗೆ ಪರಿಗಣಿಸುವಂತೆ ಕೋರಿ ಜಿಲ್ಲಾಧಿಕಾರಿ ಸೆಲ್ವಮಣಿಯವರಿಗೆ ಮನವಿ ಒಕ್ಕೂಟದಿಂದ ಮನವಿ ಸಲ್ಲಿಸಿದರು.

ಖಾಸಗಿ ನ್ಯೂಸ್ ವೆಬ್‍ ಪೋರ್ಟಲ್‍ ಲೋಕಾರ್ಪಣೆಗೊಳಿಸಿದ ಸಂತೋಷ್ ಹೆಗ್ಡೆ

ಬೆಂಗಳೂರು : ಹೊಸನಗರ ತಾಲ್ಲೂಕು ಕೋಡೂರಿನ ಪತ್ರಕರ್ತರಾದ ಗಣೇಶ ಕೆ. ಅವರ ಸಂಪಾದಕತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಪ್ರಕಟಗೊಳ್ಳುತ್ತಿರುವ ನ್ಯೂಸ್ ಪೋಸ್ಟ್ಮಾರ್ಟಮ್ ಮಾಸಪತ್ರಿಕೆ ಹಾಗೂ ಕಳೆದ ಒಂದೂವರೆ ವರ್ಷಗಳಿಂದ ಪ್ರಸಾರವಾಗುತ್ತಿರುವ ನ್ಯೂಸ್ ಪೋಸ್ಟ್ಮಾರ್ಟಮ್ ನ್ಯೂಸ್ ಯುಟ್ಯೂಬ್ ಚಾನೆಲ್ಲಿನ ಡೈಲಿ ನ್ಯೂಸ್ ವೆಬ್ ಪೋರ್ಟಲ್ನ್ನು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಲೋಕಾರ್ಪಣೆಗೊಳಿಸಿದರು.

Translate »
Scroll to Top