ವಿಜಯನಗರ

ಎರಡನೇ ಬೆಳೆಗೂ ನೀರು ಸಿಗತ್ತೆ: ರೈತ ಕುಲಕ್ಕೆ ಸಿಎಂ ಭರವಸೆ

ಹೊಸಪೇಟೆ: ಒಂದೇ ವಾರದಲ್ಲಿ ತುಂಗಭದ್ರ ಜಲಾಶಯಕ್ಕೆ ಗೇಟ್ ಅಳವಡಿಸಿ 20 ಟಿಎಂಸಿ ನೀರು ಉಳಿಸಿದ ತಜ್ಞರಿಗೆ ರೈತರ ಪರವಾಗಿ ಧನ್ಯವಾದ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಎರಡನೇ ಬೆಳೆಗೂ ನೀರು ಸಿಗತ್ತದೆ ಎಂದು ರೈತ ಕುಲಕ್ಕೆ ಭರವಸೆ ನೀಡಿದರು.

ಜಲಾಶಯ ಗೇಟ್ ದುರಸ್ತಿ ಕಾರ್ಯ ತ್ವರಿತವಾಗಿ ಮುಗಿಸಲು ಸೂಚನೆ

ಹೊಸಪೇಟೆ : ತುಂಗಭದ್ರಾ ಜಲಾಶಯ ಗೇಟ್ ನ ದುರಸ್ತಿಯನ್ನು ತ್ವರಿತವಾಗಿ ಮುಗಿಸಲು ಸಂಬಂಧಪಟ್ಟವರಿಗೆ ಸೂಚಿಸಲಾಗಿದ್ದು, ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ತುಂಗಭದ್ರಾ ಡ್ಯಾಂ ಸುರಕ್ಷತೆಗೆ ರಾಜ್ಯ ಸರ್ಕಾರ ಆದ್ಯತೆ

ಬೆಂಗಳೂರು: ತುಂಗಾಭದ್ರಾ ಅಣೆಕಟ್ಟೆಯ 19ನೇ ಕ್ರಸ್ಟ್ಗೇಟ್ನ ಸರಪಳಿ ತುಂಡಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪ-ಪ್ರತ್ಯಾರೋಪಗಳು ಮೇರೆ ಮೀರಿದ್ದು, ಸರ್ಕಾರ ಸದ್ಯಕ್ಕೆ ಡ್ಯಾಂನ ಸುರಕ್ಷತೆಗೆ ಆದ್ಯತೆ ನೀಡುವುದಾಗಿ ಹೇಳುತ್ತಿದೆ.

ತುಂಗಭದ್ರಾ ಜಲಾಶಯಕ್ಕೆ ಡಿಕೆಶಿ ಭೇಟಿ

ವಿಜಯನಗರ : ಹೊಸಪೇಟೆಯ ತುಂಗಭದ್ರಾ ಜಲಾಶಯದ 19ನೇ ಗೇಟ್ ಕೊಚ್ಚಿ ಹೋಗಿರುವ ಹಿನ್ನೆಲೆ ಇಂದು ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಡಿಸಿಎಂ ಡಿಕೆಶಿ ಅವರು, ಗೇಟ್ ದುರಸ್ತಿಗೆ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಟಿಬಿ ಡ್ಯಾಂ‌ನ ಕ್ರಸ್ಟ್ ಗೇಟ್ ಡ್ಯಾಮೇಜ್ | ಡಿಸಿಎಂ ಡಿಕೆ ಶಿವಕುಮಾರ್ ತುರ್ತ ಸಭೆ

ಹೊಸಪೇಟೆ: ಟಿಬಿ ಡ್ಯಾಂನ ಕ್ರಸ್ಟ್ ಗೇಟ್ ಡ್ಯಾಮೇಜ್ ಆಗಿರುವ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ತುರ್ತ ಸಭೆ ಕರೆಯಲಾಗಿದೆ.
ಡ್ಯಾಂ ವೀಕ್ಷಣೆ ಬಳಿಕ ಡಿಕೆ ಶಿವಕುಮಾರ್ ತುರ್ತು ಸಭೆ ನಡೆಸಲಿದ್ದಾರೆ. ಸಭೆಗೂ ಮುನ್ನ ಡ್ಯಾಂ ನ ಸಂಪೂರ್ಣ ವರದಿಯನ್ನು ಡಿಸಿಎಂ ಡಿಕೆ ಶಿವಕುಮಾರ್ ಪಡೆಯಲಿದ್ದಾರೆ.

ಟಿಬಿ ಡ್ಯಾಂನ 19ನೇ ಗೇಟ್ ಚೈನ್ ಲಿಂಕ್ ಕಟ್ | ನದಿಗೆ ಅಪಾರ ಪ್ರಮಾಣದ ನೀರು

ಹೊಸಪೇಟೆ: ತುಂಗಭದ್ರಾ ಜಲಾಶಯದ 19 ನೇ ಕ್ರಸ್ಟ್ ಗೇಟ್ ನ ಚೈನ್ ಲಿಂಕ್ ಕಟ್ಟಾಗಿ ಗೇಟ್ ಮೂಲಕ ಅಪಾರ ಪ್ರಮಾಣದ ನೀರು, ನದಿ ಪಾತ್ರಕ್ಕೆ ಹರಿಯುತ್ತಿದೆ. ಕ್ರಸ್ಟ್ಗೇಟ್ನ ಚೈನ್ಲಿಂಕ್ನ ವೆಲ್ಡಿಂಗ್ ಬಿಟ್ಟುಕೊಂಡಿರುವುದರಿಂದ ಗೇಟ್ ಸಂಪೂರ್ಣ ಕುಸಿದಿದೆ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶನಿವಾರ ತಡ ರಾತ್ರಿ ಈ ಘಟನೆ ನಡೆದಿದೆ.

TB ಡ್ಯಾಂ ಭರ್ತಿ:ಜಲಾಶಯ ವೀಕ್ಷಣೆಗೆ ಪ್ರವಾಸಿಗರ ದಂಡು!

ಹೊಸಪೇಟೆ: ಕಲ್ಯಾಣ ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯದ ಎಲ್ಲಾ 33 ಗೇಟ್‌ಗಳನ್ನು ತೆರೆದು ನದಿಗೆ 1,47,516 ಕ್ಯುಸೆಕ್ ನೀರು ಹರಿಸಿರುವ ಹಿನ್ನೆಲೆಯಲ್ಲಿ ಜಲಾಶಯದ ವೀಕ್ಷಣೆಗೆ ಜನರು ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ. ಇನ್ನೂ ಹಂಪಿಯಲ್ಲೂ ಪ್ರವಾಸಿಗರು ಹೆಚ್ಚಿದ್ದಾರೆ.

ತುಂಗಭದ್ರಾ ಜಲಾಶಯ ಹೆಚ್ಚಿದ ಒಳ ಹರಿವು: ಯಾವುದೇ ಕ್ಷಣ ನದಿಗೆ ನೀರು

ಹೊಸಪೇಟೆ: ತುಂಗಭದ್ರಾ ಜಲಾಶಯದ ಒಳಹರಿವು 1ಲಕ್ಷ 12 ಸಾವಿರ ಕ್ಯುಸೆಕ್ ನಷ್ಟಿದ್ದು ಈ ಹಿನ್ನೆಲೆಯಲ್ಲಿ ಯಾವ ಕ್ಷಣದಲ್ಲಿಯಾದರೂ ನದಿಗೆ ನೀರು ಹರಿ ಬಿಡಲಾಗುವುದು ಎಂದು ತುಂಗಭದ್ರಾ ಮಂಡಳಿ ಅಲರ್ಟ್ ಸಂದೇಶ ರವಾನಿಸಿದೆ.

ಜಲಾಶಯಕ್ಕೆ ಹೆಚ್ಚಿದ ಒಳಹರಿವು : ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಿದ ಟಿಬಿ ಮಂಡಳಿ

ಹೊಸಪೇಟೆ : ತುಂಗಭದ್ರಾ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾದುದರಿಂದ ಯಾವುದೇ ಕ್ಷಣದಲ್ಲಾದರೂ ನದಿಗೆ ನೀರು ಬಿಡುವ ಸಾಧ್ಯತೆಗಳಿರುವುದರಿಂದ ನದಿ ಪಾತ್ರದ ಜನರು ಎಚ್ಚರದಿಂದಿರಬೇಕು ಎಂದು ತುಂಗಭದ್ರಾ ಆಡಳಿತ ಮಂಡಳಿ ಸಂದೇಶ ರವಾನಿಸಿದೆ.

Translate »
Scroll to Top