ಕಲ್ಬುರ್ಗಿ

ಬಿಜೆಪಿಯನ್ನು ಸೋಲಿಸಲು ನಮ್ಮ ಭರವಸೆಗಳೇ ನಮಗೆ ‘ಬ್ರಹ್ಮಾಸ್ತ್ರ’

ಕಲಬುರಗಿ: ಕನಾಟಕ ರ್ಕಾ ರದ ಐದು ಭರವಸೆಗಳು ಮತ್ತು ಅಖಿಲ ಭಾರತ ಮಟ್ಟದಲ್ಲಿ ಕಾಂಗ್ರೆಸ್ ನೀಡಿದ ಐದು ನ್ಯಾಯ ಹಾಗೂ ೨೫ ಭರವಸೆಗಳು ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ‘ಬ್ರಹ್ಮಾಸ್ತ್ರ’ ಆಗಲಿವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕರಜು್ರನ ರ್ಗೆ ಹೇಳಿದ್ದಾರೆ.

ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ವಿಶ್ವಾಸ: 5 ಗ್ಯಾರಂಟಿ ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ:ಮುಖ್ಯಮಂತ್ರಿ ಸಿದ್ದರಾಮಯ್ಯ 

ಕಲಬುರಗಿ: 5 ಗ್ಯಾರಂಟಿ ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ ಎಂದು ನಂಬಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕಲಬುರಗಿ ನಗರದ ಗ್ರ್ಯಾಂಡ್ ಹೋಟೆಲ್ ನಲ್ಲಿ 2024ರ ಎರಡನೇ ಹಂತದ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಇಂದು ಮಾಧ್ಯಮಗೋಷ್ಠಿ ನೆಡೆಸಿ ಮಾತನಾಡಿದರು.

ರಾಜ್ಯದ ಜನರ ಹಕ್ಕು ಪಡೆಯಲು ದೆಹಲಿಯಲ್ಲಿ ಪ್ರತಿಭಟನೆ ನಡೆಸಬೇಕಾಯ್ತು, ಸುಪ್ರೀಂಕೋರ್ಟ್ ಬಾಗಿಲು ತಟ್ಟಬೇಕಾಯ್ತು: ಸಿ.ಎಂ

ಕಲಬುರಗಿ: ಸುಪ್ರೀಂ ಕೋರ್ಟಿನ ಸೂಚನೆಯ ಮೇರೆಗೆ ಕೇಂದ್ರ ಸರ್ಕಾರ 3464 ಕೋಟಿ ರೂ. ಬರ ಪರಿಹಾರ ನೀಡುತ್ತಿದ್ದು, ಇದು ರಾಜ್ಯ ಸರ್ಕಾರ ಸಲ್ಲಿಸಿದ ಮನವಿಯ ಕಾಲು ಭಾಗವೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ಇಂದು ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಕೇಂದ್ರದಿಂದ ರಾಜ್ಯಕ್ಕೆ ಬರಪರಿಹಾರ ಬಿಡುಗಡೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಎನ್ ಡಿ ಆರ್ ಎಫ್ ಮಾರ್ಗಸೂಚಿಯಂತೆ ರಾಜ್ಯ 18,172 ಕೋಟಿ ರೂ. ಪರಿಹಾರ ಕೇಳಿದ್ದೇವೆ, 35 ಸಾವಿರ ಕೋಟಿ ರೂ. ಬೆಳೆ ನಷ್ಟವಾಗಿದ್ದು, 48 ಲಕ್ಷ ಹೆಕ್ಟೆರ್ ಪ್ರದೇಶದಲ್ಲಿ ಬೆಳೆನಷ್ಟವಾಗಿದೆ. ಆದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ವಿತ್ತ ಮಂತ್ರಿ ನಿರ್ಮೆಲಾ ಸೀತಾರಾಂ ಅವರು ರಾಜ್ಯ ವಿಳಂಬವಾಗಿ ಮನವಿ ಸಲ್ಲಿಸಿದೆ ಎಂದು ಸುಳ್ಳು ಹೇಳಿದ್ದಾರೆ ಎಂದರು.

ಹತ್ತು ವರ್ಷದಲ್ಲಿ ಮೋದಿ ಏನು ಅಭಿವೃದ್ದಿ ಮಾಡಿದ್ದಾರೆ ಹೇಳಲಿ – ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ.

ಕಲಬುರಗಿ: ಕಲಬುರಗಿಯಲ್ಲಿ ಏಮ್ಸ್ ಸ್ಥಾಪಿಸಿ ಎಂದು ಮೋದಿಗೆ ಮನವಿ ಮಾಡಿದೆ ಆದರೆ ತಿರಸ್ಕಾರ ಮಾಡಿದರು

ಮೋದಿ ಅವರು ಇಲ್ಲಿಗೆ ಬಂದು ಹೋಗಿದ್ದಾರೆ ತಮ್ಮ ಹತ್ತು ವರ್ಷಗಳ ಅವಧಿಯಲ್ಲಿ ಈ ಭಾಗಕ್ಕೆ ಏನು ಕೊಟ್ಟಿದ್ದಾರೆ ಹೇಳಬೇಕಿತ್ತು ಎಂದು ರಾಜ್ಯ ಸಭೆ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ನಾಮಪತ್ರ ಸಲ್ಲಿಸಿದ ನಂತರ ಎನ್ ವಿ ಕಾಲೇಜು ಮೈದಾನದಲ್ಲಿ ನಡೆದ ಸಾರ್ವಜನಿಕ ಸಮಾರಂಭ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಗ್ರಾಮ ಪಂಚಾಯತಿಗಳು ಕಡ್ಡಾಯವಾಗಿ ಬಜೆಟ್‌ ಮಂಡಿಸಲು ರಾಜ್ಯದ ಎಲ್ಲ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ ಪ್ರಿಯಾಂಕ್‌ ಖರ್ಗೆ ಪತ್ರ

ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳೂ ಮುಂದಿನ ಆರ್ಥಿಕ ವರ್ಷದಲ್ಲಿ ವಿವಿಧ ಬಾಬ್ತುಗಳಡಿ ಲಭ್ಯವಾಗುವ ಅನುದಾನ ಹಾಗೂ ಕೈಗೊಳ್ಳಬೇಕಾದ ಅಭಿವೃದ್ಧಿ ಯೋಜನೆಗಳನ್ನೊಳಗೊಂಡಂತೆ ಗ್ರಾಮ ಪಂಚಾಯತಿ ಆಯವ್ಯಯ (ಪಂಚಾಯತ್‌ ಬಜೆಟ್) ಕಡ್ಡಾಯವಾಗಿ ತಯಾರಿಸಿ ಮಾರ್ಚ್‌ 10ನೆ ತಾರೀಕಿನ ಒಳಗೆ ಗ್ರಾಮ ಪಂಚಾಯತಿ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಳ್ಳಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.

ಬಿಜೆಪಿ ನಾಯಕರಿಗೆ ಮಾನ, ಮರ್ಯಾದೆ ಇದ್ದರೆ ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರ್ಗಿ: “ಬಿಜೆಪಿ ನಾಯಕರಿಗೆ ಮಾನ, ಮರ್ಯಾದೆ ಇದ್ದರೆ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.

ಕಲಬುರಗಿಯಲ್ಲಿ ಫೆ. 25 ರಂದು ಕೋಲಿ ಸಮಾಜದ ಬೃಹತ್ ಸಮಾವೇಶ

ಬೆಂಗಳೂರು : ಕೋಲಿ ಸಮಾಜ ರಾಜಕೀಯ, ಸಾಮಾಜಿಕವಾಗಿ ಸಂಘಟಿತರಾಗಲು ಕಲಬುರಗಿಯಲ್ಲಿ ಈ ತಿಂಗಳ 25 ರಂದು ರಾಜ್ಯಮಟ್ಟದ ಬೃಹತ್ ಜನಜಾಗೃತಿ ಸಮಾವೇಶ ನಡೆಸುತ್ತಿದ್ದು, ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ನಿರ್ಣಯ ಅಂಗೀಕರಿಸಲಾಗುವುದು ಎಂದು ಕೋಲಿ ಸಮಾಜದ ರಾಜ್ಯ ಗೌರವಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ತಿಳಿಸಿದರು.

ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಮಂತ್ರಿ ನರೇಂದ್ರ ಮೋದಿ

ಕಲಬುರಗಿ : ಮಹಾರಾಷ್ಟ್ರದ ಸೋಲಾಪುರದಲ್ಕಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ನವದೆಹಲಿಯಿಂದ ಇಂಡಿಯನ್ ಏರ್ ಪೋರ್ಸ್ ವಿಶೇಷ ವಿಮಾನದ ಮೂಲಕ ಶುಕ್ರವಾರ ಬೆಳಿಗ್ಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ರಾಜ್ಯ ಶಿಷ್ಟಾಚಾರದಂತೆ ವಿಮಾನ ನಿಲ್ದಾಣದಲ್ಲಿ ಸ್ವಾಗತ ಕೋರಲಾಯಿತು.

ಜಾಗತಿಕ ಆವಿಷ್ಕಾರ ಮೈತ್ರಿ ರೂಪಿಸುವ ಕರ್ನಾಟಕ

ಕಲ್ಬುರ್ಗಿ : ದೇಶೀಯ ಮತ್ತು ಅಂತಾರಾಷ್ಟ್ರೀಯ ಕಂಪೆನಿಗಳ ಪಾಲುದಾರಿಕೆಯಲ್ಲಿ ಕರ್ನಾಟಕ ಸರ್ಕಾರ ಜಾಗತಿಕ ಆವಿಷ್ಕಾರ ಮೈತ್ರಿಯನ್ನು ರಚಿಸುವ ಅಥವಾ ರೂಪಿಸುವ ಪ್ರಕ್ರಿಯೆಯಲ್ಲಿದೆ ಎಂದು ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಶ್ರೀ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Translate »
Scroll to Top