ಪೌರ ಕಾರ್ಮಿಕರನ್ನು ಖಾಯಂಗೊಳಸಲು ಪೌರಕಾರ್ಮಿಕರ ಮಹಾ ಸಂಘ ಆಗ್ರಹ
ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರು ಹಾಗೂ ಮೇಲ್ವಿಚಾರಕರನ್ನು ಖಾಯಂಗೊಳಿಸುವ ಕುರಿತು ರಾಜ್ಯ ಬೆಜಟ್ ನಲ್ಲಿ ಯಾವುದೇ ಪ್ರಸ್ತಾಪ ಮಾಡಿಲ್ಲ. ವಿಧಾನಮಂಡಲ ಅಧಿವೇಶನದಲ್ಲಿ ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾ ಸಂಘ ಆಗ್ರಹಿಸಿದೆ.