ತುಮಕೂರು

ಜೆ.ಡಿ.ಎಸ್. ಬಗ್ಗೆ ಸಾಫ್ಟ್ ಕಾರ್ನರ್ ಇಲ್ಲ

ತುಮಕೂರು : ಜೆ.ಡಿ.ಎಸ್. ಬಗ್ಗೆ ಸಾಫ್ಟ್ ಇಲ್ಲ. ಕಾರ್ನರ್ ರೂ ಇಲ್ಲ. ಅವರ ರಾಜಕಾರಣ ಅವರು ಮಾಡುತ್ತಾರೆ ನಮ್ಮ ರಾಜಕಾರಣ ನಾವು ಮಾಡುತ್ತೇವೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಚಿಕ್ಕನಾಯಕನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಇತ್ತೀಚೆಗೆ ಹೆಚ್.ಡಿ.ಕುಮಾರಸ್ವಾಮಿ ಅವರು ಬಿ.ಜೆ.ಪಿ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿದ್ದಾರೆ ಎಂಬ ಪ್ರಶ್ನೆಗೆ ಅವರು ಈ ರೀತಿ ಉತ್ತರಿಸಿದರು. ಸಂಸದ ಹೆಚ್.ಡಿ. ದೇವೇಗೌಡರು ತಮಗೆ ಕರೆ ಮಾಡಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ದೇವೇಗೌಡರು ನಮ್ಮ ಹಿರಿಯರು. ನನಗೆ ಕರೆ …

ಜೆ.ಡಿ.ಎಸ್. ಬಗ್ಗೆ ಸಾಫ್ಟ್ ಕಾರ್ನರ್ ಇಲ್ಲ Read More »

ಜೀವನದಲ್ಲಿ ಮೂರು ಬಾರಿ ಸಿದ್ಧಗಂಗಾ ಮಠಕ್ಕೆ ಬಂದಿದ್ದೇನೆ

ತುಮಕೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿ, ಜೀವನದಲ್ಲಿ ಮೂರು ಬಾರಿ ಸಿದ್ಧಗಂಗಾ ಮಠಕ್ಕೆ ಬಂದಿದ್ದೇನೆ, ಇಲ್ಲಿಗೆ ಬಂದಾಗಲೆಲ್ಲ ಉತ್ಸಾಹ ಹೆಚ್ಚಿಸಿಕೊಂಡು ಹೋಗುತ್ತೇನೆ ಎಂದು ಹೇಳಿದರು. ದೇಶ ಸಂಸ್ಕೃತಿಯ ತವರೂರು, ಜ್ಯೋತಿರ್ಲಿಂಗಗಳು, ಪುರಾಣಗಳು ಇವೆ, ಪುಣ್ಯ ಸ್ಥಳಗಳು ಇವೆ ಆದರೆ ಶಿವಕುಮಾರ ಸ್ವಾಮೀಗಳು ತಮ್ಮ ಸೇವೆಯಿಂದ ಪುಣ್ಯಕ್ಷೇತ್ರವನ್ನು ಮಾಡಿದರು ಎಂದು ಹೇಳಿದರು. ಅಟಲ್ ಜೀ ಇಲ್ಲಿಗೆ ಬಂದಾಗ ಉತ್ತರದಲ್ಲಿ ಗಂಗಾ ದಕ್ಷಿಣದಲ್ಲಿ ಸಿದ್ಧಗಂಗಾ ಎಂದಿದ್ದರು, ಗಂಗಾದಲ್ಲಿ ಮುಳುಗಿದರೆ ಪಾಪ ಹೋಗುತ್ತದೆ, ಸಿದ್ಧಗಂಗೆಗೆ ಬಂದರೆ ಜನ್ಮಜನ್ಮಾಂತರದ …

ಜೀವನದಲ್ಲಿ ಮೂರು ಬಾರಿ ಸಿದ್ಧಗಂಗಾ ಮಠಕ್ಕೆ ಬಂದಿದ್ದೇನೆ Read More »

ಗದ್ದುಗೆಗೆ ವಿಶೇಷ ಪೂಜೆ, ಕಂಚಿನ ಪ್ರತಿಮೆ ಮೆರವಣಿಗೆ

ತುಮಕೂರು : ಡಾ.ಶ್ರೀ ಶಿವಕುಮಾರ ಶ್ರೀಗಳ 115ನೇ ಜನ್ಮದಿನೋತ್ಸವದ ಹಿನ್ನೆಲೆಯಲ್ಲಿ ಸಿದ್ಧಗಂಗಾ ಮಠದಲ್ಲಿ ಹಬ್ಬದ ವಾತಾವರಣ ಕಳೆಗಟ್ಟಿದೆ ನಡೆನಾಡಿದ ದೇವರು, ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠದ ಡಾ ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತ್ಯೋತ್ಸವದಲ್ಲಿ ಸಹಸ್ರಾರು ಭಕ್ತರು ಭಾಗಿಯಾಗುತ್ತಿದ್ದಾರೆ. ಇತ್ತ ಇನ್ನೊಂದೆಡೆ ಗದ್ದುಗೆಗೆ ವಿಶೇಷ ಪೂಜೆ, ಅಭಿಷೇಕ, ನೆರವೇರಿಸಲಾಗುತ್ತಿದೆ. ಬೆಳಿಗ್ಗೆ ಐದು ಗಂಟೆಯಿಂದಲೇ ವಿವಿಧ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಅಭಿಷೇಕ ನಡೆದಿವೆ.‌ಸಿದ್ಧಲಿಂಗ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನಡೆದವು. ಶ್ರೀಗಳ ಗದ್ದುಗೆಗೆ …

ಗದ್ದುಗೆಗೆ ವಿಶೇಷ ಪೂಜೆ, ಕಂಚಿನ ಪ್ರತಿಮೆ ಮೆರವಣಿಗೆ Read More »

ಶ್ರೀ ಶ್ರೀ ಶ್ರೀ ಡಾ. ಶಿವಕುಮಾರ ಸ್ವಾಮೀಜಿ ಅವರ 115 ನೇ ಜಯಂತ್ಯೋತ್ಸವ ಸಂದರ್ಭದಲ್ಲಿ ರಾಹುಲ್ ಗಾಂಧಿ ಭೇಟಿ

ತುಮಕೂರು : ನಡೆದಾಡುವ ದೇವೆರೆಂದೇ ಪ್ರಸಿದ್ಧರಾಗಿದ್ದ ತ್ರಿವಿಧ ದಾಸೋಹಿ ತುಮಕೂರಿನ ಶ್ರೀ ಸಿದ್ದಗಂಗಾ ಮಠದ ಲಿಂಗಕ್ಯ ಪರಮಪೂಜ್ಯ ಶ್ರೀ ಶ್ರೀ ಶ್ರೀ ಡಾ. ಶಿವಕುಮಾರ ಸ್ವಾಮೀಜಿ ಅವರ 115 ನೇ ಜಯಂತ್ಯೋತ್ಸವ ಸಂದರ್ಭದಲ್ಲಿ ಅವರ ಗದ್ದುಗೆಗೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಗುರುವಾರ ಭೇಟಿ ನೀಡಿ ನಮಿಸಿದರು. ಮಠಾಧೀಶರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, …

ಶ್ರೀ ಶ್ರೀ ಶ್ರೀ ಡಾ. ಶಿವಕುಮಾರ ಸ್ವಾಮೀಜಿ ಅವರ 115 ನೇ ಜಯಂತ್ಯೋತ್ಸವ ಸಂದರ್ಭದಲ್ಲಿ ರಾಹುಲ್ ಗಾಂಧಿ ಭೇಟಿ Read More »

ತಿಗಳರನ್ನು ಪ್ರವರ್ಗ-1ಕ್ಕೆ ಸೇರಿಸಲು ಪ್ರಾಮಾಣಿಕ ಪ್ರಯತ್ನ

ತುಮಕೂರು,ಮಾ, 28 : ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ತಿಗಳ ಸಮುದಾಯವನ್ನು ಪ್ರವರ್ಗ-1ಕ್ಕೆ ಸೇರಿಸಬೇಕೆಂಬ ಬೇಡಿಕೆಯನ್ನು ಮುಖ್ಯಮಂತ್ರಿಗಳು ಮತ್ತು ಹಿಂದುಳಿದ ವರ್ಗಗಳ ಆಯೋಗದ ಗಮನಕ್ಕೆ ತಂದು, ಸೂಕ್ತ ನ್ಯಾಯ ಒದಗಿಸಿಕೊಡಲು ಪ್ರಯತ್ನಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಸೋಮವಾರದಂದು ಇಲ್ಲಿ ಏರ್ಪಡಿಸಿದ್ದ ಅಗ್ನಿಕುಲ ತಿಗಳ ಸಮುದಾಯದ ಮೂಲಪುರುಷ ಅಗ್ನಿ ಬನ್ನಿರಾಯಸ್ವಾಮಿ ಜಯಂತಿಯಲ್ಲಿ ಮಾತನಾಡಿದ ಅವರು, `ತಿಗಳ ಸಮುದಾಯವೂ ಸೇರಿದಂತೆ ಹಿಂದುಳಿದ ಜಾತಿಗಳ ಅಭಿವೃದ್ಧಿಗೆಂದು ಸರಕಾರವು ಈ ವರ್ಷದ ಬಜೆಟ್ಟಿನಲ್ಲಿ 400 ಕೋಟಿ ರೂ.ಗಳನ್ನು …

ತಿಗಳರನ್ನು ಪ್ರವರ್ಗ-1ಕ್ಕೆ ಸೇರಿಸಲು ಪ್ರಾಮಾಣಿಕ ಪ್ರಯತ್ನ Read More »

ಪಾವಗಡ ತಾಲೂಕು ಪಳವಳ್ಳಿ ಕಟ್ಟೆ ಬಸ್ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಐದು

ತುಮಕೂರು,,ಮಾ,19 : ಈ ಬಗ್ಗೆ ಅವರು, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಅವರೊಂದಿಗೆ ಮಾತನಾಡಿದ್ದು, ಬಸ್ ಅಪಘಾತದ ಲ್ಲಿ ೨೧ ಮಂದಿ ತೀವ್ರ ಗಾಯಗೊಂಡು, ವಿವಿಧ ಆಸ್ಪತ್ರೆಗಳಲ್ಲಿ, ಚಿಕಿತ್ಸೆ ಕೊಡಿಸಲಾಗುತ್ತಿದೆ, ಎಂದು ತಿಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡವರ ಪೈಕಿ ಕೆಲವು ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ, ಬೆಂಗಳೂರಿನ ಆಸ್ಪತ್ರೆಗೂ ಸಹ ಸೇರಿಸಲಾಗಿದೆ, ಎಂದಿದ್ದಾರೆ. ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಪಳವಳ್ಳಿಕಟ್ಟೆ ಗ್ರಾಮದಲ್ಲಿ ನಡೆದ ಭೀಕರ ಬಸ್ ಅಪಘಾತದ ಸುದ್ದಿ ತಿಳಿದ ಗೃಹ ಸಚಿವರು, ಜಿಲ್ಲಾಡಳಿತ ದೊಂದಿಗೆ ಸತತ ಸಂಪರ್ಕದಲ್ಲಿದ್ದು, …

ಪಾವಗಡ ತಾಲೂಕು ಪಳವಳ್ಳಿ ಕಟ್ಟೆ ಬಸ್ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಐದು Read More »

ಪಾವಗಡ ರಸ್ತೆ ಅಪಘಾತ; ಮೃತರ ಕುಟುಂಬಕ್ಕೆ ಡಿ.ಕೆ. ಶಿವಕುಮಾರ್ ಸಾಂತ್ವನ

ತುಮಕೂರು,ಮಾ,19 : ಜಿಲ್ಲೆಯ ಪಾವಗಡ ತಾಲೂಕಿನ ಪಾಲವಳ್ಳಿ ಕಟ್ಟೆ ಬಳಿ ಸಂಭವಿಸಿರುವ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಸಂತ್ರಸ್ತರ ಕುಟುಂಬಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಾಂತ್ವನ ಹೇಳಿದ್ದಾರೆ. ಅಪಘಾತದಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ಸಿಗಬೇಕು. ಜತೆಗೆ ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಾಗಿರುವ ಎಲ್ಲರಿಗೂ ಉಚಿತ ಚಿಕಿತ್ಸೆ ಸಿಗಬೇಕು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬದ ಸದಸ್ಯರಿಗೆ ನೋವು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಶಿವಕುಮಾರ್ ಅವರು …

ಪಾವಗಡ ರಸ್ತೆ ಅಪಘಾತ; ಮೃತರ ಕುಟುಂಬಕ್ಕೆ ಡಿ.ಕೆ. ಶಿವಕುಮಾರ್ ಸಾಂತ್ವನ Read More »

ಬಸ್ ಪಲ್ಟಿ: ಐವರ ಸಾವು

ತುಮಕೂರು,ಮಾ,19 : ಖಾಸಗಿ ಬಸ್ ಪಲ್ಟಿಯಾಗಿ ಐವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಪಾವಗಡ ತಾಲ್ಲೂಕಿನ ಪಳವಳ್ಳಿ ಬಳಿ ನಡೆದಿದೆ.ವೈ.ಎನ್.ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಖಾಸಗಿ ಎಸ್ಎಲ್ ವಿ ಬಸ್ ಪಳವಳ್ಳಿ ಕೆರೆ ಬಳಿಯ ತಿರುವಿನಲ್ಲಿ ಪಲ್ಟಿಯಾಗಿದೆ. ಬಸ್ ಪಲ್ಟಿಯಾಗಿದ್ದರಿಂದ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇಪ್ಪತ್ತೈದಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಕೋವಿಡ್-19 ಸೋಂಕಿನಿಂದ ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳಿಗೆ ಪರಿಹಾರ ಧನ ನೀಡಲು ಸೂಚನೆ

ತುಮಕೂರು : ಸೋಂಕಿನಿಂದಾಗಿ ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳಿಗೆ ಸರ್ಕಾರದ ಪರಿಹಾರಧನವನ್ನು ನೀಡಬೇಕು ಎಂದು ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ ಸೂಚಿಸಿದರು.ತಮ್ಮ ಕಚೇರಿಯಲ್ಲಿಂದು ಮಕ್ಕಳ ರಕ್ಷಣಾ ಘಟಕಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಕೋವಿಡ್-೧೯ನಿಂದ ತಂದೆ-ತಾಯಿಯರಿಬ್ಬರನ್ನೂ ಕಳೆದುಕೊಂಡು ಅನಾಥರಾದ ಮಕ್ಕಳಿಗೆ ವಿಳಂಬ ಮಾಡದೇ ಕೂಡಲೇ ಪರಿಹಾರ ಧನವನ್ನು ತಲುಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಬಾಲನ್ಯಾಯ ಮಂಡಳಿಯಲ್ಲಿ ೭೨ ಪ್ರಕರಣಗಳು ದಾಖಲಾಗಿದ್ದು, ೧೩ ಪ್ರಕರಣಗಳನ್ನು ಈಗಾಗಲೇ ಇತ್ಯರ್ಥಗೊಳಿಸಲಾಗಿದೆ. ಸಾಕ್ಷಿಗಳ ಗೈರು ಹಾಜರಿ ಹಾಗೂ ಇನ್ನಿತರೆ …

ಕೋವಿಡ್-19 ಸೋಂಕಿನಿಂದ ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳಿಗೆ ಪರಿಹಾರ ಧನ ನೀಡಲು ಸೂಚನೆ Read More »

ಜಿಲ್ಲೆಯಲ್ಲಿ ತಾಯಿ ಮತ್ತು ಶಿಶು ಮರಣ ಪ್ರಮಾಣ ತಗ್ಗಿಸಿ

ತುಮಕೂರು, ಮಾರ್ಚ್ ,3 : ಜಿಲ್ಲೆಯ ಕೆಲವು ತಾಲೂಕುಗಳಲ್ಲಿ, ಹೆರಿಗೆ ಸಮಯದಲ್ಲಿ ತಾಯಿ – ಶಿಶು ಮರಣ ಪ್ರಮಾಣ ಹೆಚ್ಚಿದ್ದು ವಿಶೇಷ ಆರೋಗ್ಯ ಕಾಳಜಿ ವಹಿಸಿ, ಸಾವಿನ ಪ್ರಮಾಣವನ್ನು ತಗ್ಗಿಸಲು ತಕ್ಷಣ ಕ್ರಮ ಕೈಗೊಳ್ಳಬೇಕೆಂದು, ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ, ಶ್ರಿ ಆರಗ ಜ್ಞಾನೇಂದ್ರ, ನಿರ್ದೇಶಿಸಿದ್ದಾರೆ. ಸಚಿವರು ಇಂದು, ತುಮಕೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ತುಮಕೂರು ಜಿಲ್ಲಾ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು,” ಜಿಲ್ಲೆಯ ಕೆಲವು ತಾಲೂಕುಗಳಲ್ಲಿ, ತಾಯಿ – …

ಜಿಲ್ಲೆಯಲ್ಲಿ ತಾಯಿ ಮತ್ತು ಶಿಶು ಮರಣ ಪ್ರಮಾಣ ತಗ್ಗಿಸಿ Read More »

Translate »
Scroll to Top