ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡುವಂತೆ ಮನವಿ ಮಾಡಿದ ಡಾ.ಬಿ.ಆರ್.ಅಂಬೇಡ್ಕರ್ ದಲಿತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಶ್ರೀಧರಕಲಿವೀರ
ಬಳ್ಳಾರಿ: ೨೦೨೪ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಾಹ್ಯ ಬೆಂಬಲ ಇದೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ದಲಿತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಶ್ರೀಧರಕಲಿವೀರ ಹೇಳಿದರು. ನಗರದ ಖಾಸಗಿ ಹೋಟೆಲ್ನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಧರಕಲಿವೀರ ಅವರು, ರಾಜ್ಯಾದ ೨೮ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಾಹ್ಯ ಬೆಂಬಲ ಸೂಚಿಸಿದ್ದು, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿದಂತೆ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯಥಿಗಳಿಗೆ ಮತ ನೀಡುವಂತೆ ಮನವಿ ಮಾಡಿದರು.