ಬಳ್ಳಾರಿ

ವಿಶ್ರೀಕೃವಿವಿ ಪ್ರಭಾರ ಕುಲಪತಿಯಾಗಿ ಪ್ರೊ. ತಿಪ್ಪೇರುದ್ರಪ್ಪ ಜೆ. ನೇಮಕ

ಬಳ್ಳಾರಿ: ಘನತೆವೆತ್ತ ರಾಜ್ಯಪಾಲರ ಸಚಿವಾಲಯದ ಅಧಿಸೂಚನೆ ಮೇರೆಗೆ, ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಯನ್ನಾಗಿ ಅನ್ವಯಿಕ ವಿಜ್ಞಾನ ನಿಕಾಯದ ಡೀನರಾದ ಪ್ರೊ. ತಿಪ್ಪೇರುದ್ರಪ್ಪ ಜೆ. ಅವರನ್ನು ನೇಮಕ ಮಾಡಲಾಗಿದೆ. ಪ್ರಭಾರ ಕುಲಪತಿಯಾಗಿದ್ದ ಪ್ರೊ. ವಿಜಯಕುಮಾರ ಬಿ. ಮಲಶೆಟ್ಟಿ ಅವರು ಅಧಿಕಾರವನ್ನು ಹಸ್ತಾಂತರ ಮಾಡಿದರು. ಪ್ರಭಾರ ಕುಲಪತಿಯಾಗಿದ್ದ ಪ್ರೊ. ವಿಜಯಕುಮಾರ ಬಿ. ಮಲಶೆಟ್ಟಿ ಯವರ ಅವಧಿ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರಭಾರ ಕುಲಪತಿಯಾಗಿ ಪ್ರೊ. ತಿಪ್ಪೇರುದ್ರಪ್ಪ ಜೆ. ಅವರು ಇಂದು ಅಧಿಕಾರ ಸ್ವೀಕರಿಸಿದರು.

ಬಳ್ಳಾರಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಮ್ಯಾರಥಾನ್ ಓಟಕ್ಕೆ  ಜಿಲ್ಲಾಧಿಕಾರಿಗಳಿಂದ ಚಾಲನೆ

ಬಳ್ಳಾರಿ: ಲೋಕಸಭಾ ಚುನಾವಣೆ ನಿಮಿತ್ಯ ಮತದಾರರಲ್ಲಿ ಮತದಾನದ ಮಹತ್ವ ಸಾರಲು ಹಾಗೂ ಮತದಾನಕ್ಕೆ ಪ್ರೇರೇಪಿಸುವ ಸಲುವಾಗಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಬಳ್ಳಾರಿ ನಗರದಲ್ಲಿ ಭಾನುವಾರ ಏರ್ಪಡಿಸಿದ ಮ್ಯಾರಥಾನ್ ಓಟಕ್ಕೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಪರವಾಗಿ ಸೂಚಕರು ನಾಮಪತ್ರ ಸಲ್ಲಿಕೆ

ಬಳ್ಳಾರಿ: ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಪರವಾಗಿ ಸೂಚಕರು ನಾಮಪತ್ರ ಸಲ್ಲಿಕೆ ಮಾಡಿದರು. ಈ ಸಂಧರ್ಭದಲ್ಲಿ ಮಾಜಿ ಶಾಸಕ ಜಿ.ಸೋಮಶೇಖರ್ ರೆಡ್ಡಿ, ರಾಜ್ಯ ಎಸ್ ಟಿ ಮೋರ್ಚಾದ ಅಧ್ಯಕ್ಷ ಬಂಗಾರು ಹನುಮಂತು, ವಿಜಯನಗರ ಜಿಲ್ಲೆಯ ಕಾರ್ಯದರ್ಶಿ ರಾಮಣ್ಣ, ವಿಜಯನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ಚನ್ನಬಸವನ ಗೌಡ ಅವರು ಉಪಸ್ಥಿತರಿದ್ದರು.

ಸ್ವತಂತ್ರ ಅಭ್ಯರ್ಥಿಯಾಗಿ ಅರುಣ್ ಹಿರೇಹಳ್  ನಾಮಪತ್ರ ಸಲ್ಲಿಕೆ

ಬಳ್ಳಾರಿ: ಜಿಲ್ಲಾ ಲೋಕಸಭಾ ಕ್ಷೆತ್ರಕ್ಕೆ ಸ್ವತಂತ್ರ ಅಭ್ಯರ್ಥಿಯಾಗಿ ಅರುಣ್ ಹಿರೇಹಾಳ್ ಇಂದು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

ಬಳ್ಳಾರಿ,ಏ.14: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿಶೇಷ ಘಟಕ ಅಡಿಯಲ್ಲಿ ಸಂವಿಧಾನದ ಹರಿಕಾರ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133 ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು.

ಬಿಜೆಪಿ ಮಹಿಳಾ ಮೋರ್ಚಾದಿಂದ ಮಾತೃ ಸಮಾವೇಶ

ಬಳ್ಳಾರಿ : ಬಿಜೆಪಿ ಮಹಿಳಾ ಮೋರ್ಚಾ ಘಟಕದ ವತಿಯಿಂದ ನಗರದ ಬಸವ ಭವನದಲ್ಲಿಂದು ಮಹಿಳಾ ಮಾತೃ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು.
ಸಮಾವೇಶದಲ್ಲಿ ಭಾಗಿಯಾದ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಲೋಕಸಭಾ ಅಭ್ಯರ್ಥಿ ಬಿ.ಶ್ರೀರಾಮುಲು ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ, ಕೇಂದ್ರದ ಬಿಜೆಪಿ ಸರ್ಕಾರದಿಂದ ಮಹಿಳೆಯರಿಗೆ ಅನೇಕ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಮಹಿಳಾ ಸಬಲೀಕರಣಕ್ಕೆ ಪ್ರಥಮ ಆದ್ಯತೆ ನೀಡಲಾಗಿದೆ. ಅಂತೆಯೇ ದೇಶದ ಶಾಂತಿ, ಸುಭದ್ರತೆಗಾಗಿ ಮೋದಿಯವನ್ನು ಮತ್ತೊಂದು ಅವಧಿಗೆ ಪ್ರಧಾನ ಮಂತ್ರಿಯನ್ನಾಗಿಸಬೇಕಿದೆ. ಈ ನಿಟ್ಟಿನಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ನನಗೆ ಮತ ನೀಡಿದಲ್ಲಿ ಮೋದಿಯವರ ಕೈ ಬಲಪಡಿಸಿದಂತಾಗುತ್ತದೆ ಎಂದು ತಿಳಿಸಿದರು.

ಬಿಸಿಲಿನ ಶಾಖಾಘಾತ : ನಿರ್ಜನ ಪ್ರದೇಶದಲ್ಲಿ ಒಬ್ಬರೇ ಓಡಾಡುವುದು ತಪ್ಪಿಸಿ

ಬಳ್ಳಾರಿ: ಜಿಲ್ಲೆಯಲ್ಲಿ ಬೇಸಿಗೆಯ ಬಿಸಿಲು ಪ್ರಖರವಾಗಿ ಕಂಡುಬರುತ್ತಿದ್ದು, ಬಿಸಿಲಿನ ಶಾಖಾಘಾತಕ್ಕೆ ಒಳಗಾಗುವ ಸಂಭವ ಹೆಚ್ಚಿದ್ದು, ನಿರ್ಜನ ಪ್ರದೇಶದಲ್ಲಿ ಸಾರ್ವಜನಿಕರು ಒಬ್ಬರೇ ಓಡಾಡುವುದನ್ನು ತಪ್ಪಿಸುವ ಮೂಲಕ ಬಿಸಿಲಿನ ಸೂರ್ಯಘಾತದ ಅನಾಹುತದಿಂದ ಪಾರಾಗಲು ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ವೈ.ರಮೇಶ ಬಾಬು ಕೋರಿದ್ದಾರೆ.             ಮಧ್ಯಾಹ್ನ 01 ರಿಂದ 04 ಗಂಟೆ ಅವಧಿಯಲ್ಲಿ ವಯೋವೃದ್ದರು, ಮಕ್ಕಳು, ಗರ್ಭಿಣಿ ಮತ್ತು ದೀರ್ಘಕಾಲಿನ ಖಾಯಿಲೆಗಳಿಗೆ ಔ?ಧಿ ಸೇವಿಸುವ ಪ್ರತಿಯೊಬ್ಬರು ಆದ? ನೆರಳಿನಲ್ಲಿ ಇರುವುದಕ್ಕೆ ಆದ್ಯತೆ ನೀಡಬೇಕು. …

ಬಿಸಿಲಿನ ಶಾಖಾಘಾತ : ನಿರ್ಜನ ಪ್ರದೇಶದಲ್ಲಿ ಒಬ್ಬರೇ ಓಡಾಡುವುದು ತಪ್ಪಿಸಿ Read More »

ನಾಳೆ ಬಳ್ಳಾರಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ

ಬಳ್ಳಾರಿ : ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶುಕ್ರವಾರ ಏ.12ರಂದು ಬಳ್ಳಾರಿ ನಗರಕ್ಕೆ ಆಗಮಿಸಲಿದ್ದು, ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಅವರು ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

ಬಳ್ಳಾರಿಯಲ್ಲಿ ಬಿಜೆಪಿ ಪರ ಪವನ್ ಕಲ್ಯಾಣ್ ಪ್ರಚಾರ

ಬಳ್ಳಾರಿ : ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಪರ ಪ್ರಚಾರ ಕಾರ್ಯ ನಡೆಸಲು ತೆಲುಗಿನ ಸ್ಟಾರ್ ನಟ ಹಾಗೂ ಜನಸೇನಾ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಪವನ್ ಕಲ್ಯಾಣ್ ಅವರು ಇದೇ ತಿಂಗಳ 17ರಂದು ಬಳ್ಳಾರಿಗೆ ಆಗಮಿಸಲಿದ್ದಾರೆ.

ಬಿಜೆಪಿ ಸಂಸ್ಥಾಪನಾ ದಿನ : ದ್ವಜವನ್ನು ಹಾರಿಸಿದ ಲಕ್ಷ್ಮೀ ಅರುಣಾ

ಬಳ್ಳಾರಿ : ಭಾರತೀಯ ಜನತಾ ಪಾರ್ಟಿಯ ಸಂಸ್ಥಾಪನ ದಿನವಾದ್ದರಿಂದ ಧ್ವಜಾರೋಹಣಕ್ಕೂ ಮುನ್ನ ಬಳ್ಳಾರಿಯ ತಮ್ಮ ನಿವಾಸದಲ್ಲಿ ಬಿಜೆಪಿಯ ಧ್ವಜವನ್ನು ಹಾರಿಸಿದ ಲಕ್ಷ್ಮೀ ಅರುಣಾ ಅವರು ಪಕ್ಷಕ್ಕೆ ಗೌರವ ಸೂಚಿಸಿದರು.

Translate »
Scroll to Top