ಬೀದರ್

ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ – ಈಶ್ವರ ಖಂಡ್ರೆ

ಜಿಲ್ಲೆಯ ಆಡಳಿತ ಸುಗಮವಾಗಿ ನಡೆಯಬೇಕು. ಜನರಿಗೆ ಸರ್ಕಾರಿ ಸೌಲಭ್ಯ, ಸೇವೆ ಯಾವುದೇ ಅಡ್ಡಿ ಇಲ್ಲದೆ ದೊರಕಬೇಕು. ತಾವು ಎಂದಿಗೂ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸಂಸದ ಭಗವಂತ ಖೂಬಾ ಅವರ ಹೆಸರು ಹೇಳದೆ ತಿರುಗೇಟು ನೀಡಿದ್ದಾರೆ.

ಗೊಂಡ ಸಮುದಾಯದ ಜಾತಿ ಪ್ರಮಾಣ ಪತ್ರ ಸಮಸ್ಯೆಗಳ ಕುರಿತು ಸಭೆ

ಬೆಂಗಳೂರು: ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕಲಬುರಗಿ, ಬೀದರ್, ಯಾದಗಿರಿ ಹಾಗೂ ಕೊಡಗು ಜಿಲ್ಲೆಗಳ ಗೊಂಡ ಸಮುದಾಯದವರಿಗೆ ಜಾತಿ ಸಿಂಧುತ್ವ ಪ್ರಮಾಣ ಪತ್ರ ನೀಡುವ ಸಂಬಂಧ ಎದುರಿಸುತ್ತಿರುವ  ಸಮಸ್ಯೆಗಳ ಕುರಿತು ಸಭೆ ಜರುಗಿತು.  ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಕಂದಾಯ ಸಚಿವರಾದ ಕೃಷ್ಣಬೈರೇಗೌಡ, ಈಶ್ವರ ಖಂಡ್ರೆ, ನಾಗೇಂದ್ರ,  ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಲಬುರಗಿ, ಬೀದರ್, ಯಾದಗಿರಿ ಹಾಗೂ ಕೊಡಗು ಜಿಲ್ಲೆಗಳ ಜಿಲ್ಲಾಧಿಕಾರಿಗಳು,  ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಡಾ: ರಾಕೇಶ್ …

ಗೊಂಡ ಸಮುದಾಯದ ಜಾತಿ ಪ್ರಮಾಣ ಪತ್ರ ಸಮಸ್ಯೆಗಳ ಕುರಿತು ಸಭೆ Read More »

ತಕರಾರು ಪ್ರಕರಣಗಳಿಗೆ ವೇಗ ನೀಡಲಾಗಿದೆ, ಜನರ ಅಲೆದಾಟಕ್ಕೂ ಬ್ರೇಕ್ ಹಾಕಲಾಗಿದೆ

ಜನ ಸಾಮಾನ್ಯರ ತಕರಾರು ಅರ್ಜಿಗಳನ್ನು ಕಳೆದ ಎರಡು ತಿಂಗಳಿನಿಂದ ಕಾಲಮಿತಿಯೊಳಗೆ ತ್ವರಿತ ವಿಲೇವಾರಿಗೊಳಿಸಲಾಗುತ್ತಿದೆ, ತಾಲೂಕು ಕಚೇರಿಗಳಿಗೆ ಜನರ ಅನಗತ್ಯ ಓಡಾಟಕ್ಕೂ ಇದೀಗ ಬ್ರೇಕ್ ಹಾಕಲಾಗಿದೆ. ಕಂದಾಯ ಇಲಾಖೆ ಅಧಿಕಾರಿಗಳ ೀ ಜನಪರ ಸೇವೆ ಹೀಗೆ ಮುಂದುವರೆಯಲಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

8 ಟೈರ್ ಪೈರೋಲಿಸಿಸ್ ಘಟಕ ಮುಚ್ಚಲು ಆದೇಶ ಈಶ್ವರ ಖಂಡ್ರೆ

ಬೀದರ್ ಜಿಲ್ಲೆಯ ಹುಮನಾಬಾದ್ ಕೈಗಾರಿಕಾ ಪ್ರದೇಶದಲ್ಲಿ ಕೆಲವು ಕಾರ್ಖಾನೆಗಳಿಂದ ಜಲ ಮೂಲಗಳಿಗೆ ವಿಷಕಾರಿ ತ್ಯಾಜ್ಯ ಸೇರಿ ಮಾಲಿನ್ಯವಾಗುತ್ತಿದ್ದ ಹಿನ್ನೆಲೆಯಲ್ಲಿ 8 ಟೈರ್ ಪೈರೋಲಿಸಿಸ್ ಘಟಕಗಳನ್ನು ಶಾಶ್ವತವಾಗಿ ಮುಚ್ಚಲು ಈಗಾಗಲೇ ಆದೇಶ ನೀಡಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಸರ್ಕಾರದ ಯೋಜನೆ ಜನರಿಗೆ ನೇರವಾಗಿ ತಲುಪಬೇಕು ಸಚಿವ‌ ತಂಗಡಗಿ

ಸರ್ಕಾರದ ಯೋಜನೆ ನೇರವಾಗಿ ಜನರಿಗೆ ತಲುಪಬೇಕು ಎಂಬ ನಿಟ್ಟಿನಲ್ಲಿ ‘ವಿಶ್ವಾಸ್’ ತಂತ್ರಾಂಶ ಹೊರ ತರಲಾಗಿದ್ದು, ಯೋಜನೆಯಿಂದ ಪಾರದರ್ಶಕತೆ ಇರಲಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದರು

ರಾಜಗೊಂಡರ ಕಲ್ಯಾಣಕ್ಕೆ  ಮುನ್ನುಡಿ ಬರೆದಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಬಿ.ನಾಗೇಂದ್ರ

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಬುಡಕಟ್ಟು ಜನರು ವಾಸವಿರುವ ಬೀದರ್ ನ ರಾಜಗೊಂಡ ಕಾಲೋನಿಗೆ ಯುವ ಸಬಲೀಕರಣ ಮತ್ತು ಕ್ರೀಡೆ

ಬೀದರ್ ಜಿಲ್ಲಾ ಕ್ರೀಡಾಂಗಣಕ್ಕೆ ಸಚಿವ ಬಿ.ನಾಗೇಂದ್ರ ಭೇಟಿ & ಪರಿಶೀಲನೆ

ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗಳ ಸಚಿವ ಬಿ.ನಾಗೇಂದ್ರ ಅವರು ಬುಧವಾರ ಬೀದರ್ ಜಿಲ್ಲೆಯ ಜಿಲ್ಲಾ ಕ್ರೀಡಾಂಗಣ ಹಾಗೂ ಜಿಲ್ಲಾ ಕ್ರೀಡಾ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಾಜಿ ಸಚಿವ ಎಂ.ಆರ್. ಸೀತಾರಾಂ ಅವರ ವಿಶೇಷ ಕರ್ತವ್ಯಾಧಿಕಾರಿಯಾಗಿದ್ದ ಎಂ.ಬಿ. ಲೋಕೇಶ್‌ ನಿಧನ

ಬಾಗಲಕೋಟೆಯ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜಿನ ರಿಜಿಸ್ಟ್ರಾರ್‌ ಹಾಗೂ ಮಾಜಿ ಸಚಿವ ಎಂ.ಆರ್. ಸೀತಾರಾಂ ಅವರ ವಿಶೇಷ ಕರ್ತವ್ಯಾಧಿಕಾರಿಯಾಗಿದ್ದ ಎಂ.ಬಿ. ಲೋಕೇಶ್‌ ನಿಧನರಾದರು.

ಪೌರ ಕಾರ್ಮಿಕರನ್ನು ಖಾಯಂಗೊಳಸಲು  ಪೌರಕಾರ್ಮಿಕರ ಮಹಾ ಸಂಘ ಆಗ್ರಹ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರು ಹಾಗೂ ಮೇಲ್ವಿಚಾರಕರನ್ನು ಖಾಯಂಗೊಳಿಸುವ ಕುರಿತು ರಾಜ್ಯ ಬೆಜಟ್ ನಲ್ಲಿ ಯಾವುದೇ ಪ್ರಸ್ತಾಪ ಮಾಡಿಲ್ಲ. ವಿಧಾನಮಂಡಲ ಅಧಿವೇಶನದಲ್ಲಿ ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾ ಸಂಘ ಆಗ್ರಹಿಸಿದೆ.

ಔರಾದ್ ನಲ್ಲಿ ಸಿಪೆಟ್ ಕಟ್ಟಡ ಕಾಮಗಾರಿಗೆ ಚಾಲನೆ

ಬೀದರ್ ಜಿಲ್ಲೆಯಲ್ಲಿ ಸಿಪೆಟ್ (ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಪ್ಲಾಸ್ಟಿಕ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿ) ಕೇಂದ್ರದ ಕಟ್ಟಡ ಕಾಮಗಾರಿಗೆ ಚಾಲನೆ ನೀಡುವ ಸಂಬಂಧ ಕೇಂದ್ರ ಸರ್ಕಾರದಲ್ಲಿ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವರಾಗಿರುವ ಭಗವಂತ ಖೂಬಾ ಹಾಗೂ ಭಾರಿ & ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಬುಧವಾರ ಸಮಾಲೋಚನೆ ನಡೆಸಿದರು.

Translate »
Scroll to Top