ಮೈಸೂರು

ಸಚಿವ ಸಂಪುಟ  ಉಪಸಮಿತಿ ಸಭೆಯ ನಂತರ  ರಾಜ್ಯದಲ್ಲಿ ಬರ ಘೋಷಣೆ ಬಗ್ಗೆ ತೀರ್ಮಾನ

ರಾಜ್ಯದಲ್ಲಿ ಬರದ ಛಾಯೆಯಿರುವ ಬಗ್ಗೆ ಸಚಿವ ಸಂಪುಟ ಉಪ ಸಮಿತಿಯ ಸಭೆ ಇಂದು ಅಥವಾ ನಾಳೆ ನಡೆಯಲಿದ್ದು, ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಮಾಡಿ, ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಆ.30ರಂದು ಗೃಹಲಕ್ಷ್ಮಿ ಯೋಜನೆಯ ಚಾಲನೆ ಅದ್ದೂರಿ ಕಾರ್ಯಕ್ರಮ

ಬಳ್ಳಾರಿ: ರಾಜ್ಯ ಸರ್ಕಾರದ 5 ಗ್ಯಾರಂಟಿಗಳಲ್ಲಿ ಮಹಾತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯು ಆ.30ರಂದು ರಾಜ್ಯ ಮಟ್ಟದ ಚಾಲನೆ ಕಾರ್ಯಕ್ರಮ ಮೈಸೂರಿನಲ್ಲಿ ನಡೆಯಲಿದ್ದು, ಕಾರ್ಯಕ್ರಮವನ್ನು ಮಹಾನಗರಪಾಲಿಕೆ, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯತ್ನ ವಾರ್ಡ್ ಮಟ್ಟದಲ್ಲಿ ಹಾಗೂ ಪ್ರತಿಯೊಂದು ಗ್ರಾಮ ಪಂಚಾಯತ್ ಮಟ್ಟದಲ್ಲಿ ಎಲ್.ಇ.ಡಿ ಅಥವಾ ಪ್ರೊಜೆಕ್ಟರ್ ಪರದೆಯ ಮೂಲಕ ಮಹಿಳೆಯರು ವೀಕ್ಷಣೆ ಮಾಡಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ ಎಂದು ಯುವ ಸಬಲೀಕರಣ, ಕ್ರೀಡೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ತಿಳಿಸಿದರು.

ಅಧಿನಾಯಕಿ : ಸ್ತ್ರೀ ಸಂವೇದನೆಯ ಏಕ ವ್ಯಕ್ತಿ ಪ್ರಯೋಗ

ಇದು ಆಧುನಿಕ ಮಹಿಳಾ ಕಾವ್ಯ. ಅನಾದಿ ಕಾಲದಿಂದಲೂ ಮಹಿಳೆಯರನ್ನು ನೋಡುವ, ಮಹಿಳೆಯರ ಸ್ವಾತಂತ್ರ್ಯ ಧಿಕ್ಕರಿಸುವ, ಮಹಿಳೆಯರನ್ನು ನಡೆಸಿಕೊಳ್ಳುವ ಕುರಿತಾದ ಒಂದು ಕಾವ್ಯ ರೂಪಕ ಅಧಿನಾಯಕಿ. ಒಂದೂಕಾಲು ಗಂಟೆಯ ಏಕ ವ್ಯಕ್ತಿ ಪ್ರದರ್ಶನದಲ್ಲಿ ಮಹಿಳಾ ಸಮಸ್ಯೆಗಳ ನಾನಾ ಮುಖಗಳು, ಹಲವಾರು ವ್ಯಾಖ್ಯಾನಗಳು, ಅನೇಕ ಆಯಾಮಗಳು ಅನಾವರಣಗೊಳ್ಳುತ್ತವೆ.

ಕಾವೇರಿ ಸರ್ವಪಕ್ಷ ಸಭೆಯಲ್ಲಿ ಸರಕಾರಕ್ಕೆ ಚಾಟಿ ಬೀಸಿದ ಹೆಚ್.ಡಿ.ಕುಮಾರಸ್ವಾಮಿ

: ನೆರೆ ರಾಜ್ಯವು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದಾಕ್ಷಣ ರಾಜ್ಯ ಸರಕಾರ ನೀರು ಹರಿಸುವ ನಿರ್ಧಾರ ಕೈಗೊಳ್ಳುವ ಬದಲು ತಮಿಳುನಾಡು ಅರ್ಜಿಗೆ ಪ್ರತಿಯಾಗಿ ಕೂಡಲೇ ತಕರಾರು ಅರ್ಜಿ ಸಲ್ಲಿಸಬೇಕಿತ್ತು. ಈ ವಿಷಯದಲ್ಲಿ ಸರಕಾರದಿಂದ ಲೋಪವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಮಾತುಗಳಲ್ಲಿ ಹೇಳಿದರು.

ಆನೆ ಕಾರ್ಯಪಡೆ ಗುಂಪು ಹೆಚ್ಚಳ, ರೇಡಿಯೋ ಕಾಲರ್ ಅಳವಡಿಕೆಗೆ ಆದೇಶ

ಆಗಸ್ಟ್ 13ರಿಂದ ಇಲ್ಲಿಯವರೆಗೆ ಕಾಡಾನೆಗಳ ದಾಳಿಯಿಂದ ಐವರು ಮೃತಪಟ್ಟಿರುವ ಬಗ್ಗೆ ತೀವ್ರ ಆಘಾತ ಮತ್ತು ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ಕಾಡಂಚಿನಲ್ಲಿರುವ ಜನರಿಗೆ ಈ ಸಂಬಂಧ ಹೆಚ್ಚಿನ ಜಾಗೃತಿ ಮೂಡಿಸಲು ಮತ್ತು ಮುನ್ನೆಚ್ಚರಿಕಾ ಕ್ರಮ ವಹಿಸಲು ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನೈಸ್ ರಸ್ತೆಯ ಯೋಜನೆಯನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು

ರಾಜ್ಯ ಸರ್ಕಾರ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೈವೇ ನಿರ್ಮಾಣ ಮಾಡಿರುವ ಹಿನ್ನೆಲೆಯಲ್ಲಿ ನೈಸ್ ರಸ್ತೆಯ ಅವಶ್ಯಕತೆಯಿಲ್ಲ ಹೀಗಾಗಿ ನೈಸ್ ಯೋಜನೆಯನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಟಿ.ಬಿ. ಜಯಚಂದ್ರ ಅವರು ಅಭಿಪ್ರಾಯ ಪಟ್ಟಿದ್ದಾರೆ.

ಆದಿವಾಸಿಗಳ ಸ್ಥಳದಲ್ಲಿಯೇ ವಿಶ್ವಬುಡಕಟ್ಟು ದಿನಾಚರಣೆ ಆಚರಿಸಿದ ನಾಗೇಂದ್ರ

ಹೆಚ್ಡಿಕೋಟೆ: ಬುಡಕಟ್ಟು ಜನರು ವಾಸಿಸುವ ಸ್ಥಳಕ್ಕೆ ತೆರಳಿದ ಸಚಿವ ಬಿ.ನಾಗೇಂದ್ರ ಅವರು, ಸಲ್ಲಿಯೇ ಅರ್ಥಪೂರ್ಣವಾಗಿ ವಿಶ್ವಬುಡಕಟ್ಟು ದಿನಾಚರಣೆಯನ್ನ ಆಚರಿಸಿದರು.

ಹೆಚ್.ಡಿ.ಕೋಟೆ ವಾಲ್ಮೀಕಿ ಭವನದ ಅಭಿವೃದ್ಧಿಗೆ ಕೋಟಿ ರೂ ಮುಂಜೂರು ಮಾಡಿದ ಸಚಿವ ಬಿ.ನಾಗೇಂದ್ರ

ಹೆಚ್.ಡಿ.ಕೋಟೆ: ಹೆಚ್.ಡಿ.ಕೋಟೆ ಪ್ರವಾಸದ ವೇಳೆ ಶಾಸಕ ಅನಿಲ್ ಚಿಕ್ಕ ಮಾದು ಅವರ ಜೊತೆ ಪಟ್ಟಣದಲ್ಲಿ ನಿರ್ಮಾಣ ಹಂತದಲ್ಲಿರುವ ವಾಲ್ಮೀಕಿ ಭವನಕ್ಕೆ ಬೇಟಿ ನೀಡಿದ ಪರಿಶಿಷ್ಟ ಪಂಗಡ ಹಾಗೂ ಕ್ರೀಡಾ ಸಚಿವ ಬಿ.ನಾಗೇಂದ್ರ ಅವರು ಪರಿಶೀಲಿಸಿದರು.

ಸಚಿವರಿಂದ ವೈಯಕ್ತಿಕ ಪರಿಹಾರ ವಿತರಣೆ

ನಾಲೆಗಳ ಬಳಿ ಅಪಘಾತ ಸ್ಥಳಗಳನ್ನು ಗುರುತಿಸಿ ತಡೆಗೋಡೆ ನಿರ್ಮಿಸಲು ರೈತರು, ಶಾಸಕರು, ಸಂಘಟನೆಗಳು ಒಟ್ಟಾಗಿ ಸೇರಿ ಚಿಂತಿಸಬೇಕಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.

ಕಾವೇರಿ ಜಲಾನಯನ ಪ್ರದೇಶದಲ್ಲಿ ತಗ್ಗಿದ ವರುಣಾ

ಕೆ.ಆರ್.ಎಸ್ ಡ್ಯಾಂನ ಒಳವಹರಿವು ಬಾರಿ ಇಳಿಕೆ.
17,455 ಕ್ಯೂಸೆಕ್ ಗೆ ಇಳಿದ ಡ್ಯಾಂನ ಒಳಹರಿವು.
ನಿನ್ನೆ 32 ಸಾವಿರ ಇದ್ದ ಒಳಹರಿವು.

Translate »
Scroll to Top