ರಾಯಚೂರು

ರಾಯಚೂರಿಗೆ ಟೆಕ್ಸ್‌ಟೈಲ್‌ ಪಾರ್ಕ್‌ ಪ್ರಸ್ತಾಪನೆ ಸಲ್ಲಿಸಲು ನಿರ್ಧಾರ: ಸಚಿವ ಎಂ.ಬಿ ಪಾಟೀಲ

ಬೆಂಗಳೂರು: ರಾಜ್ಯದ ಎಲ್ಲಾ ಹಳೇ ಕೈಗಾರಿಕಾ ಪ್ರದೇಶಗಳಲ್ಲಿ ಒಂದು ಬಾರಿ ಪೂರ್ಣ ಪ್ರಮಾಣದಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ದಿಪಡಿಸಿದ ನಂತರ ಆಯಾ ಕೈಗಾರಿಕಾ ಸಂಘಗಳ ಸುಪರ್ಧಿಗೇ ಅವುಗಳ ನಿರ್ವಹಣೆಯನ್ನು ಒಪ್ಪಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ದಿ ಸಚಿವರಾದ ಎಂ.ಬಿ ಪಾಟೀಲ ಭರವಸೆ ನೀಡಿದರು.

ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪರಿಶೀಲನಾ ಸಭೆ

ಮಾನ್ಯ ನಗರಾಭಿವೃದ್ಧಿ ಮತ್ತು ನಗರ ಯೋಜನ ಸಚಿವರಾದ ಶ್ರೀ ಬಿ.ಎಸ್. ಸುರೇಶ(ಬೈರತಿ) ಹಾಗೂ ಮಾನ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಶ್ರೀ ಎನ್. ಎಸ್.ಬೋಸ್ ರಾಜ್ ಅವರ ಸಹಯೋಗದಲ್ಲಿ ದಿನಾಂಕ 6-8-2023 ರಂದು ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಗರದಲ್ಲಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಕುರಿತು ಪರಿಶೀಲನಾ ಸಭೆ ನಡೆಸಿದರು.

ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಯ ಕಾರ್ಯಕ್ಕೆ ಕೇಂದ್ರಸರಕಾರದ ಮೇಲೆ ಒತ್ತಡ ಹೇರಲು ಸಚಿವ ಭಗವಂತ ಖೂಬಾ ಅವರಿಗೆ ಮನವಿ

ನವದೆಹಲಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೆಟಗರಿ – 3 ವಿಜ್ಞಾನ ಕೇಂದ್ರ, 8 ಮೀಟರ್ ಅಗಲದ ಟೈಪ್ – ಬಿ ಡಿಜಿಟಲ್ ಡೋಮ್ ಪ್ಲಾನೇಟೋರಿಯಮ್. ರಾಯಚೂರು ಜಿಲ್ಲೆಯಲ್ಲಿ 22.25 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕೆಟಗರಿ – 2, ಟೈಪ್ ಬಿ ವಿಜ್ಞಾನ ಕೇಂದ್ರ ಸ್ಥಾಪನೆ, ಯಾದಗಿರಿ ಜಿಲ್ಲೆಯಲ್ಲಿ ಟೈಪ್ ಬಿ ಕೆಟಗರಿ – 3 ವಿಜ್ಞಾನ ಕೇಂದ್ರ ಸ್ಥಾಪನೆಯ ಪ್ರಸ್ತಾಪಗಳನ್ನ ಕೇಂದ್ರ ಸರಕಾರ ಸಲ್ಲಿಸಲಾಗಿದೆ. ಈ ಪ್ರಸ್ತಾವನೆಗಳಿಗೆ ಶೀಘ್ರದಲ್ಲಿ ಒಪ್ಪಿಗೆ ನೀಡುವ ಭರವಸೆಯನ್ನ ಕೇಂದ್ರ ಸಚಿವರು ನೀಡಿದ್ದಾರೆ ಎಂದು ಮಾನ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಶ್ರೀ ಎನ್.ಎಸ್ ಬೋಸರಾಜು ತಿಳಿಸಿದರು.

ರಾಯಚೂರು ನಗರದ ಸಮಗ್ರ ಅಭಿವೃದ್ದಿಗಾಗಿ ಲಿಯಾ ಕನ್ಸಲ್ಟೆಂಟ್‌ ಪ್ರಾಥಮಿಕ ಹಂತದ ವರದಿ ಸಲ್ಲಿಕೆ

ರಾಯಚೂರು ನಗರದ ಇತಿಹಾಸ, ಪರಂಪರೆ, ಸಂಸ್ಕೃತಿ ಮತ್ತು ಭವಿಷ್ಯದ ಬೆಳವಣಿಗೆಗೆ ಯೋಜನಾಬದ್ದ ನೀಲಿನಕ್ಷೆಯನ್ನು ಒಳಗೊಂಡಂತಹ ಪ್ರಾಥಮಿಕ ಹಂತದ ಪರಿಷ್ಕೃತ ಮಾಸ್ಟರ್ ಪ್ಲಾನ್ ನ ಪ್ರಾಥಮಿಕ ಹಂತದ ವರದಿಯನ್ನು ಅಂತರಾಷ್ಟ್ರೀಯ ಲಿಯಾ (LEA) ಕನ್ಸಲ್ಟೆಂಟ್ಸ್ ನೀಡಿದ್ದಾರೆ. ಈ ವರದಿಯಲ್ಲಿ ಕೆಲವು ಬದಲಾವಣೆಗಳನ್ನು ಅಳವಡಿಸುವಂತೆ ಸೂಚಿಸಿದ್ದು, ಎರಡನೇ ವರದಿಯನ್ನ ಸನ್ಮಾನ್ಯ ಮುಖ್ಯಮಂತ್ರಿಗಳು, ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಅಂತಿಮಗೊಳಿಸಲಾಗುವುದು ಎಂದು ಮಾನ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹೇಳಿದರು.

ಕೆರೆಗಳ ಮೇಲೆ ಫ್ಲೋಟಿಂಗ್‌ ಸೋಲಾರ್‌ ಪ್ಯಾನೆಲ್‌ ಅಳವಡಿಸುವ ಸಾಧ್ಯತೆ

ಕೆರೆಗಳ ಮೇಲೆ ಫ್ಲೋಟಿಂಗ್ ಸೋಲಾರ್ ಪ್ಯಾನೆಲ್ ಅಳವಡಿಸುವ ಸಾಧ್ಯತೆಯ ಬಗ್ಗೆ ಚಿಂತನೆ: ಸಣ್ಣ ನೀರಾವರಿ ಸಚಿವ ಎನ್.ಎಸ್ ಭೋಸರಾಜ್

ಪೌರ ಕಾರ್ಮಿಕರನ್ನು ಖಾಯಂಗೊಳಸಲು  ಪೌರಕಾರ್ಮಿಕರ ಮಹಾ ಸಂಘ ಆಗ್ರಹ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರು ಹಾಗೂ ಮೇಲ್ವಿಚಾರಕರನ್ನು ಖಾಯಂಗೊಳಿಸುವ ಕುರಿತು ರಾಜ್ಯ ಬೆಜಟ್ ನಲ್ಲಿ ಯಾವುದೇ ಪ್ರಸ್ತಾಪ ಮಾಡಿಲ್ಲ. ವಿಧಾನಮಂಡಲ ಅಧಿವೇಶನದಲ್ಲಿ ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾ ಸಂಘ ಆಗ್ರಹಿಸಿದೆ.

ಆರ್.ಟಿ.ಇ. ಮತ್ತು ವೇತನಾನುದಾನ ಸಮಸ್ಯೆ ಬೇಡಿಕೆಗೆ ಸ್ಬಂದಿಸುವ ಭರವಸೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ 1995ರ ನಂತರ ಪ್ರಾರಂಭವಾದ ಖಾಸಗಿ ಕನ್ನಡ ಮಾಧ್ಯಮ ಶಾಲೆಗಳಿಗೆ ವೇತನಾನುದಾನ ಒದಗಿಸುವ ಕುರಿತಂತೆ ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರೊಂದಿಗೆ ಮಾತನಾಡಿ ಸಮಸ್ಯೆ ಪರಿಹರಿಸಲು ಪ್ರಯತ್ನಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದ್ದಾರೆ.

ಆರ್‌ಟಿಪಿಎಸ್, ವೈಟಿಪಿಎಸ್- ಕಾರ್ಮಿಕರ ಸಮಸ್ಯೆಗಳ ಕುರಿತು ಸುಧೀರ್ಘವಾಗಿ ಚರ್ಚೆ

ಇಂಧನ ಸಚಿವರಾದ ಕೆಜೆ ಜಾರ್ಜ್ ಅವರಿಂದ ಸಮಸ್ಯೆಗಳ ಇತ್ಯರ್ಥ‌ – ರವಿ ಬೋಸರಾಜು ರಾಯಚೂರು: ಯರಮರಸ್ ವಿದ್ಯುತ್ ಉತ್ಪಾದನಾ ಕೇಂದ್ರ (YTPS) ಹಾಗೂ ರಾಯಚೂರು ವಿದ್ಯುತ್ ಉತ್ಪಾದನಾ ಕೇಂದ್ರ ಸ್ಥಾಪನೆಗಾಗಿ‌ ಭೂಮಿ‌ ನೀಡಿದ ಕುಟುಂಬಗಳಿಗೆ  ಉದ್ಯೋಗ, ಕಳೆದ 30 ವರ್ಷಗಳಿಂದ ಯಾವುದೆ ಭದ್ರತೆಯಿಲ್ಲದೆ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಖಾಯಂ ನೇಮಕಾತಿ ಹಾಗೂ ಹೆಚ್ಚುವರಿ ವೇತನ ಸೇರಿ ಮೂಲಭೂತ ಸಮಸ್ಯಗಳಿಗೆ‌ ಇಂದನ ಸಚಿವರಾದ ಕೆ ಜೆ ಜಾರ್ಜ್ ಅವರಿಂದ ಇತ್ಯರ್ಥವಾಗಲಿವೆ ಎಂದು ಯುವ ಕಾಂಗ್ರೆಸ್ ರಾಜ್ಯ ಮುಖಂಡರಾದ ರವಿ …

ಆರ್‌ಟಿಪಿಎಸ್, ವೈಟಿಪಿಎಸ್- ಕಾರ್ಮಿಕರ ಸಮಸ್ಯೆಗಳ ಕುರಿತು ಸುಧೀರ್ಘವಾಗಿ ಚರ್ಚೆ Read More »

ರಾಯಚೂರಿನಲ್ಲಿ ಏಮ್ಸ್‌ ಸ್ಥಾಪನೆ: ಕೇಂದ್ರ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಯಚೂರಿನಲ್ಲಿ ಸ್ಥಾಪಿಸುವಂತೆ ಒತ್ತಾಯಿಸಿ ಕೇಂದ್ರ ಆರೋಗ್ಯ ಸಚಿವ ಮನ್‌ ಸುಖ್‌ ಮಾಂಡವೀಯ ಅವರಿಗೆ ಪತ್ರ ಬರೆದಿದ್ದಾರೆ.    ದೇಶದ ಮಹತ್ವಾಕಾಂಕ್ಷಿ ಜಿಲ್ಲೆಗಳಲ್ಲಿ ಒಂದಾಗಿರುವ ರಾಯಚೂರಿನಲ್ಲಿ ಆರೋಗ್ಯ, ಶಿಕ್ಷಣದ ಮಟ್ಟ ಮತ್ತು ತಲಾ ಆದಾಯವು ಇತರ ಪ್ರದೇಶಗಳಿಗಿಂತ ಕಡಿಮೆ ಇದೆ. ವಿಪರೀತ ಹವಾಗುಣದಿಂದಾಗಿ ಭೌಗೋಳಿಕವಾಗಿಯೂ ಪ್ರತಿಕೂಲ ವಾತಾವರಣ ಹೊಂದಿದೆ. ಈ ಎಲ್ಲ ಕಾರಣಗಳಿಂದಾಗಿ ರಾಯಚೂರಿನಲ್ಲಿ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳ ಅಗತ್ಯವಿದೆ. ಏಮ್ಸ್‌ ಸ್ಥಾಪನೆಯಿಂದ ಈ ಭಾಗದಲ್ಲಿ ವಿಶ್ವದರ್ಜೆಯ ವೈದ್ಯಕೀಯ ಸೌಲಭ್ಯ ಒದಗಿಸಿದಂತಾಗುತ್ತದೆ ಎಂದು ಮುಖ್ಯಮಂತ್ರಿಗಳು …

ರಾಯಚೂರಿನಲ್ಲಿ ಏಮ್ಸ್‌ ಸ್ಥಾಪನೆ: ಕೇಂದ್ರ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ Read More »

ಗ್ಯಾರೆಂಟಿ ಭಾಗ್ಯ: ಆಧಾರ್‌ ತಿದ್ದುಪಡಿಗೆ ಮುಗಿಬಿದ್ದ ಮಹಿಳೆಯರು

ಮಸ್ಕಿ: ರಾಜ್ಯ ಸರ್ಕಾರ ಚುನಾವಣಾ ಪೂರ್ವದಲ್ಲಿ ಭರವಸೆ ನೀಡಿದ್ದಂತೆ ಗೃಹ ಜ್ಯೋತಿ, ಗೃಹಲಕ್ಷ್ಮೀ, ಅನ್ನ ಭಾಗ್ಯ,ಯುವ ನಿಧಿ ಹಾಗೂ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಗ್ಯಾರಂಟಿ ಯೋಜನೆಗಳನ್ನು ಒಂದೊಂದೇ ಜಾರಿಗೆ ತರುತ್ತಿದೆ.

ಈ ನಡುವೆ ಗ್ಯಾರೆಂಟಿ ಭಾಗ್ಯಗಳಿಗೆ ಅಗತ್ಯ ದಾಖಲೆಗಳನ್ನು ನೀಡಲು ನಾಗರಿಕರು ಆಧಾರ್‌ ಕಾರ್ಡ್‌, ಕುಟುಂಬ ಪಡಿತರ ಚೀಟಿ, ಪಾನ್‌ ಕಾರ್ಡ್‌ ಮೊದಲಾದ ಅಗತ್ಯ ದಾಖಲೆಗಳನ್ನು ಸಿದ್ಧ ಪಡಿಸಿ ಕೊಳ್ಳಲು ಹಾತೊರೆಯುತ್ತಿರುವ ದೃಶ್ಯಗಳು ಸಾಮಾನ್ಯ ವಾಗಿವೆ.

Translate »
Scroll to Top