ವಿಜಯಾಪುರ

ಕಲ್ಯಾಣ ಕರ್ನಾಟಕದ ಉತ್ಸವ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿಗಳ ಭಾಷಣದ ವಿವರ

ಕಲ್ಯಾಣ ಕರ್ನಾಟಕ ವಿಮೋಚನೆಯ ಅಮೃತ ಮಹೋತ್ಸವ ಹಾಗೂ ಕಲ್ಯಾಣ ಕರ್ನಾಟಕಕ್ಕೆ ಸಂವಿಧಾನದಲ್ಲಿ ವಿಶೇಷ ಸ್ಥಾನಮಾನ ಕಲ್ಪಿಸುವ 371 (ಜೆ) ವಿಧಿ ಜಾರಿಯ ದಶಮಾನೋತ್ಸವದ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸಮಸ್ತ ಜನತೆಗೆ ಹೃತ್ಪೂರ್ವಕ ಶುಭಾಶಯಗಳು.

ಪವರ್ ಕಟ್ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದೆಯಾ ಕಾಂಗ್ರೆಸ್‍ ಸರ್ಕಾರ…?

ಬೆಂಗಳೂರು: ಮಳೆಯ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪವರ್ ಕಟ್ ಮಾಡಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿರುವ ಅಂಶ ಬೆಳಕಿಗೆ ಬಂದಿದೆ.

ಆಲಮಟ್ಟಿ ಕೆರೆಗಳಿಗೆ ನೀರು ತುಂಬಿಸಲು ಸಚಿವ ಎಂ.ಬಿ.ಪಾಟೀಲ ಸೂಚನೆ

ಮಹಾರಾಷ್ಟ್ರ ಮತ್ತು ನೆರೆಯ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಆಲಮಟ್ಟಿ ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚಾಗಿದ್ದು, ಜಲಾಶಯದಲ್ಲಿರುವ ನೀರನ್ನು ಕಾಲುವೆಗಳ ಮೂಲಕ ಕೆರೆಗೆ ನೀರು ತುಂಬಿಸುವ ಯೋಜನೆಯಡಿ ನೀರು ಹರಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ತಿಳಿಸಿದರು.

ಪೌರ ಕಾರ್ಮಿಕರನ್ನು ಖಾಯಂಗೊಳಸಲು  ಪೌರಕಾರ್ಮಿಕರ ಮಹಾ ಸಂಘ ಆಗ್ರಹ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರು ಹಾಗೂ ಮೇಲ್ವಿಚಾರಕರನ್ನು ಖಾಯಂಗೊಳಿಸುವ ಕುರಿತು ರಾಜ್ಯ ಬೆಜಟ್ ನಲ್ಲಿ ಯಾವುದೇ ಪ್ರಸ್ತಾಪ ಮಾಡಿಲ್ಲ. ವಿಧಾನಮಂಡಲ ಅಧಿವೇಶನದಲ್ಲಿ ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾ ಸಂಘ ಆಗ್ರಹಿಸಿದೆ.

ಶ್ರಮ ಸಂಸ್ಕೃತಿಗೆ ಅಂತರಾಷ್ಟ್ರೀಯ ಮನ್ನಣೆ ಗಿನ್ನಿಸ್ ಬುಕ್ ದಾಖಲೆಗೆ ಸೇರಿದ ಲಂಬಾಣಿ ಕಸೂತಿ

ವಿವಿಧ ಬಣ್ಣದ ಹಲವು ಸಣ್ಣ ತುಣುಕುಗಳನ್ನು ದಾರದಿಂದ ಹೊಲಿದು ಜೋಡಿಸಿ, ಅದರ ಮೇಲೆ ಕಸೂತಿ ಮಾಡುವ ಲಂಬಾಣಿ ಮಹಿಳೆಯರ ಕಲೆ, ಶ್ರಮ ಸಂಸ್ಕೃತಿಯ ಪ್ರತೀಕ. ಆದಿ ಕಾಲದ ಮಾನವನ ಸುಪ್ತ ಪ್ರಜ್ಞೆಯಲ್ಲಿ ಅರಳಿದ ಕಲೆಗಳು ಇಂದು ತಂತ್ರಜ್ಞಾನದ ಅತ್ಯುನ್ನತ ಮಟ್ಟ ತಲುಪಿವೆ. ತಾಂತ್ರಿಕ ಕಾಲಘಟ್ಟದಲ್ಲೂ ಲಂಬಾಣಿ ಮಹಿಳೆಯರು ಉಳಿಸಿ ಬೆಳಿಸಿಕೊಂಡು ಬಂದ ಕಸೂತಿ ಕಲೆ ಗಿನ್ನಿಸ್ ಬುಕ್ ಆಫ್ ರೆಕಾರ್ಡ್ ಸೇರುವ ಕ್ಷಣಕ್ಕೆ ಹಂಪಿಯಲ್ಲಿ ನಡೆಯುತ್ತಿರುವ ಜಿ-20 ಶೃಂಗಸಭೆ ಸಾಕ್ಷಿಯಾಗಿದೆ.

ಮುಖ್ಯಮಂತ್ರಿ ಸ್ಥಾನ ಸೇಲ್‌ಗೆ ಇಟ್ಟ ಹಾಗೆ ಪ್ರತಿಪಕ್ಷದ ನಾಯಕನ ಸ್ಥಾನವೋ ಸಹ ಸೇಲ್‌ಗೆ ಇಟ್ಟಿರಬಹುದು: ಬಿಜೆಪಿ ನಾಯಕರ ಕಾಲೆಳೆದ MBP

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಹಗುರವಾಗಿ ಮಾತನಾಡಬಾರದು. ಅವರಿಗೆ ನಮ್ಮ ಸರ್ಕಾರದ ಅಭಿವೃದ್ಧಿ ಬಗ್ಗೆ ಹೊಟ್ಟೆ ಉರಿಯಾಗಿದೆ. ಕೇಂದ್ರ ಸಚಿವರಾಗಿದ್ದಾರೆ. ಬಹಳ ತಿಳಿದುಕೊಂಡವರು ಈ ರೀತಿ ಮಾತನಾಡಬಾರದು ಎಂದು ಸಚಿವ ಎಂ.ಬಿ. ಪಾಟೀಲ್ ತಿರುಗೇಟು ನೀಡಿದರು.

ಗುರಿ ಮುಟ್ಟಲು ಸತತ ಪರಿಶ್ರಮ ಅಗತ್ಯ

ಬಳ್ಳಾರಿ : ನಮ್ಮ ನೆರೆಹೊರೆಯವರನ್ನು ಪ್ರೀತಿಯಿಂದ ಕಾಣುವುದರ ಜೊತೆಗೆ ಆಡಂಬರದ ಜೀವನಕ್ಕಿಂತ ಸಾಮಾನ್ಯನಾಗಿ ಜೀವಿಸಿದರೆ ಜೀವನದ ಬೆಲೆ ತಿಳಿಯುತ್ತದೆ ಎಂದು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ಕುಮಾರ್ ಬಂಡಾರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಶ್ರೀ ಸಿದ್ದಲಿಂಗೇಶ್ವರ ಕಮರಿಮಠದ ಜಾತ್ರಾ ಮಹೋತ್ಸವಕ್ಕೆ ಚಾಲನೆ

ವಿಜಯಪುರ : ಜಿಲ್ಲೆಯ ಬಬಲೇಶ್ವರ ತಾಲೂಕಿನ ಸುಕ್ಷೇತ್ರ ಸಂಗಾಪುರ ಗ್ರಾಮದಲ್ಲಿ ಇಂದು ಶ್ರೀ ಸಿದ್ದಲಿಂಗೇಶ್ವರ ಕಮರಿಮಠದ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದ ಸಿದ್ದರಾಮಯ್ಯ ಅವರು ಯಾತ್ರಿ ನಿವಾಸವನ್ನು ಲೋಕಾರ್ಪಣೆ ಮಾಡಿದರು. ಕ್ಷೇತ್ತದ ಶಾಸಕರೂ ಆಗಿರುವ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಮಠಾಧೀಶರಾದ ಶ್ರೀ ಅಭಿನವ ಸಿದ್ದಲಿಂಗ ಸ್ವಾಮೀಜಿ, ಮಾಜಿ ಸಚಿವರಾದ ಅಪ್ಪಾಜಿ ನಾಡಗೌಡ, ಶಾಸಕರಾದ ಆನಂದ ನ್ಯಾಮಗೌಡ, ಸುನಿಲ್ ಪಾಟೀಲ್, ಪ್ರಕಾಶ್ ರಾಥೋಡ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಜು ಅಲಗೂರು ಹಾಜರಿದ್ದರು.

ಸಚಿವ ಸಂಪುಟ ವಿಸ್ತರಣೆ: ಎಲ್ಲಾ ಭಾಗಗಳಿಗೂ ಪ್ರಾತಿನಿಧ್ಯಕ್ಕೆ ಪ್ರಯತ್ನ

ವಿಜಯಪುರ: ಸಚಿವ ಸಂಪುಟ ವಿಸ್ತರಣೆಯಾದಲ್ಲಿ ರಾಜ್ಯದ ಎಲ್ಲಾ ಭಾಗಗಳಿಗೆ ಆದಷ್ಟೂ ಪ್ರಾತಿನಿಧ್ಯ ನೀಡಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಜಯಪುರದ ಕೊಡಗಾನೂರ ಹೆಲಿಪ್ಯಾಡ್‍ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸಚಿವ ಸಂಪುಟ ವಿಸ್ತರಣೆಗೆ ವರಿಷ್ಠರು ಕರೆದಿಲ್ಲ. ದೆಹಲಿಯಲ್ಲಿ ನಿರ್ಣಯವಾದಾಗ ತಿಳಿಸಲಾಗುವುದು ಎಂದರು. ವಿಜಯಪುರದಲ್ಲಿ ಮೂರು ಶಾಸಕರಿದ್ದಾರೆ. ಯಾರಿಗೂ ಪ್ರಾತಿನಿಧ್ಯ ದೊರೆತಿಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಎಲ್ಲಾ ಜಿಲ್ಲೆಗಳಿಗೂ ಪ್ರಾತಿನಿಧ್ಯ ನೀಡಬೇಕು ಎಂದಿದೆ. ರಾಜಕೀಯ ಸ್ಥಿತಿಗತಿಯ ಮೇಲೆ ಕೆಲವು ನಿರ್ಣಯಗಳಾಗುತ್ತವೆ ಎಂದರು.

Translate »
Scroll to Top