ಶಿವಮೊಗ್ಗ

ಕಟುಕರ ರೀತಿ ಮಾತನಾಡುವುದು ಸರಿಯಲ್ಲ: ಸಚಿವ ವೆಂಕಟೇಶ್​ಗೆ ಆರಗ ಜ್ಞಾನೇಂದ್ರ ತಿರುಗೇಟು

ಶಿವಮೊಗ್ಗ: ಪಶು ಸಂಗೋಪನ ಇಲಾಖೆ ಸಚಿವ ವೆಂಕಟೇಶ್ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಗೃಹ ಸಚಿವ ಮತ್ತು ತೀರ್ಥಹಳ್ಳಿ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ, ಗೋವು ಕಡಿಯುವುದರಲ್ಲಿ ಸಾರ್ಥಕತೆ ಇಲ್ಲ. ಬದಲಿಗೆ ಗೋವು ಸಾಕುವುದರಲ್ಲಿ ಸಾರ್ಥಕತೆ ಇದೆ ಎಂದು ಹೇಳಿದ್ದಾರೆ.

ಬಾರ್ ಕ್ಯಾಷಿಯರ್​​ ಮರ್ಡರ್​ ಕೇಸ್ : ಆರೋಪಿಯ ಕಾಲಿಗೆ ಗುಂಡಿಕ್ಕಿ ಬಂಧಿಸಿದ ಪೊಲೀಸರು

ಶಿವಮೊಗ್ಗ: ಬಾರ್ ಕ್ಯಾಷಿಯರ್ ಮರ್ಡರ್ ಕೇಸ್ಗೆ ಸಂಬಂಧಿಸಿದಂತೆ ಕೊಲೆ ಆರೋಪಿ ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆಗೆ ಯತ್ನಿಸಿದ್ದು, ಕಾಲಿಗೆ ಫೈರಿಂಗ್ ಮಾಡಿ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಮೇ ೧೫ ರಿಂದ ಭದ್ರಾ ನಾಲೆಗಳಿಗೆ ನೀರು ಬಂದ್

ಶಿವಮೊಗ್ಗ : ಬೇಸಿಗೆ ಬೆಳೆಗಳಿಗಾಗಿ ಭದ್ರಾ ಅಚ್ಚುಕಟ್ಟು ನಾಲೆಗಳಲ್ಲಿ ಹರಿಸಲಾಗುತ್ತಿರುವ ನೀರನ್ನು ಮೇ ೧೫ ಕ್ಕೆ ನಿಲ್ಲಿಸಲಾಗುವುದು. ಹಾಗೂ ನೀರಿನ ಅವಶ್ಯಕತೆಗನುಸಾರವಾಗಿ ಮೇ ೨೦ ರವರೆಗೆ ಹೆಚ್ಚುವರಿಯಾಗಿ ನೀರು ಹರಿಸಲಾಗುವುದು ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ತೀರ್ಮಾನಿಸಿತು.ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಪವಿತ್ರಾ ರಾಮಯ್ಯ ಇವರ ಅಧ್ಯಕ್ಷತೆಯಲ್ಲಿ ಇಂದು ಮಲವಗೊಪ್ಪದ ಕಚೇರಿಯಲ್ಲಿ ನಡೆದ ೮೦ ನೇ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಅಧ್ಯಕ್ಷತೆ ವಹಿಸಿದ್ದ ಕಾಡಾ …

ಮೇ ೧೫ ರಿಂದ ಭದ್ರಾ ನಾಲೆಗಳಿಗೆ ನೀರು ಬಂದ್ Read More »

ಜನರು ತಮ್ಮ ಹಕ್ಕುಗಳನ್ನು ಕೇಳುವಾಗ ಗಟ್ಟಿಯಾಗಿ ಕೇಳಬೇಕು

ಶಿವಮೊಗ್ಗ: ಪೂಜ್ಯ ಶ್ರೀಗಳು ರಾಜ್ಯಾದ್ಯಂತ ಸಂಚರಿಸಿ ಭೋವಿ ಸಮಾಜವನ್ನು ಸಂಘಟಿಸುವ ಪ್ರಯತ್ನ ಮಾಡಿದ್ದಾರೆ. ಜೊತೆಗೆ ಸಮಾಜದ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಹಕ್ಕುಗಳ ಬಗೆಗೆ ಗಟ್ಟಿ ಧ್ವನಿ ಎತ್ತಿದ್ದಾರೆ. ಸಮಾಜದ ತಳ ಸಮುದಾಯಗಳ ಜನರು ತಮ್ಮ ಹಕ್ಕುಗಳನ್ನು ಕೇಳುವಾಗ ಗಟ್ಟಿಯಾಗಿ ಕೇಳಬೇಕು, ಆಗ ಮಾತ್ರ ನ್ಯಾಯ ಸಿಗುತ್ತದೆ. ಈ ಕೆಲಸವನ್ನು ಶ್ರೀಗಳು ಮಾಡುತ್ತಿದ್ದಾರೆ. ಅವರಿಗೆ ನನ್ನ ಧನ್ಯವಾದಗಳು. ನಮ್ಮದು ವೃತ್ತಿ ಆಧಾರಿತ ಜಾತಿ ವ್ಯವಸ್ಥೆ. ಕಲ್ಲಿನ ಕೆಲಸ ಮಾಡುವುದರಿಂದ ಭೋವಿ ಸಮಾಜವನ್ನು ಸ್ಥಳೀಯ ಭಾಷೆಯಲ್ಲಿ ವಡ್ಡರು ಎಂದು …

ಜನರು ತಮ್ಮ ಹಕ್ಕುಗಳನ್ನು ಕೇಳುವಾಗ ಗಟ್ಟಿಯಾಗಿ ಕೇಳಬೇಕು Read More »

ಗೌರವಿಸುವುದು, ಪ್ರೋತ್ಸಾಹಿಸುವುದು ಇವೆಲ್ಲ ಮಾನವೀಕ ಮೌಲ್ಯಗಳು

ಸೊರಬ: ಅಭಿನಂದಿಸುವುದು, ಗೌರವಿಸುವುದು, ಪ್ರೋತ್ಸಾಹಿಸುವುದು ಇವೆಲ್ಲ ಮಾನವೀಕ ಮೌಲ್ಯಗಳು. ಹಣದ ಮೌಲ್ಯಕ್ಕಿಂತ ಇಂತಹ ಮೌಲ್ಯಗಳು ಮನುಷ್ಯತ್ವವನ್ನು ಬೆಳೆಸುವ ಜೊತೆಗೆ ಪರಸ್ಪರ ಪ್ರೀತಿ ವಿಶ್ವಾಸವನ್ನು ಗಟ್ಟಿಗೊಳಿಸುತ್ತವೆ ಎಂದು ಸಾಗರ ಶಾಸಕ ಹಾಲಪ್ಪ ತಿಳಿಸಿದರು. ತಾಲ್ಲೂಕು ಚಂದ್ರಗುತ್ತಿ ಹೋಬಳಿ ಅಬಸಿ ಗ್ರಾಮದಲ್ಲಿ ಜೋಷಿಫೌಂಡೇಶನ್ ಮತ್ತು ನಮ್ ಸಮಾಚಾರ ಪಾಕ್ಷಿಕ ಪತ್ರಿಕೆ ಏರ್ಪಡಿಸಿದ್ದ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಮತ್ತು ಅಬಸಿ ಗ್ರಾಮದ ಆದರ್ಶ, ಅಭಿಮಾನಿ, ಸ್ವಾಭಿಮಾನಿ, ಸಾಧಕರಿಗೆ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ …

ಗೌರವಿಸುವುದು, ಪ್ರೋತ್ಸಾಹಿಸುವುದು ಇವೆಲ್ಲ ಮಾನವೀಕ ಮೌಲ್ಯಗಳು Read More »

ಸ್ಥಿತಪ್ರಜ್ಞೆ ಹಾಗೂ ಸಮಯಪ್ರಜ್ಞೆ ಬಹಳ ಮುಖ್ಯ

ಶಿವಮೊಗ್ಗ, : ಸರ್ಕಾರಿ ನೌಕರರಲ್ಲಿ ಸ್ಥಿತಪ್ರಜ್ಞೆ ಹಾಗೂ ಸಮಯಪ್ರಜ್ಞೆ ಬಹಳ ಮುಖ್ಯ. ದಕ್ಷತೆಯಿಂದ ನಿಗದಿತ ಸಮಯದೊಳಗೆ ಜನರಿಗೆ ಕೆಲಸ ಮಾಡಿಕೊಡಬೇಕು. ಪಟ್ಟಭದ್ರಹಿತಾಸಕ್ತಿಗಳು ಅಲ್ಲೋಲಕಲ್ಲೋಲ ಮಾಡಲು ಪ್ರಯತ್ನಿಸುತ್ತಾರೆ. ಅದರೆ ದಕ್ಷತೆ, ಪ್ರಾಮಾಣಿಕತೆ, ಕಾರ್ಯಕ್ಷಮತೆಯಿಂದ ಅವರಿಗೆ ಉತ್ತರ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಶಿವಮೊಗ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ಸರ್ವೋತ್ತಮ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಜವಾಬ್ದಾರಿ ಅರಿತು ಹುದ್ದೆಗೆ ನ್ಯಾಯ ಒದಗಿಸಿ:ದೇಶದಲ್ಲಿ ಅತ್ಯಂತ ದಕ್ಷ …

ಸ್ಥಿತಪ್ರಜ್ಞೆ ಹಾಗೂ ಸಮಯಪ್ರಜ್ಞೆ ಬಹಳ ಮುಖ್ಯ Read More »

ಅರಣ್ಯ ಇಲಾಖೆಗೆ ಸಂಬಂಧಿಸಿದಂತೆ ಮೇ ಮೊದಲ ವಾರದಲ್ಲಿ ವಿಶೇಷ ಸಭೆ

ಶಿವಮೊಗ್ಗ : ಅರಣ್ಯ ಇಲಾಖೆಗೆ ಸಂಬಂಧಿಸಿದ ವಿಚಾರಗಳನ್ನು ಕಾನೂನಾತ್ಮಕವಾಗಿ ಕೈಗೆತ್ತಿಕೊಳ್ಳಲು ಮೇ ಮೊದಲನೇ ವಾರದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಅಡ್ವೋಕೇಟ್ ಜನರಲ್ ಹಾಗೂ ಅಧಿಕಾರಿಗಳೊಂದಿಗೆ ವಿಶೇಷ ಸಭೆಯನ್ನು ಕರೆಯಲಾಗುವುದು ಎಂದು ಮುಖ್ಯಮಂತ್ರಿ. ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶಿವಮೊಗ್ಗದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ.ಮಾತನಾಡುತ್ತಿದ್ದರು. ಶಿವಮೊಗ್ಗ, ಚಿಕ್ಕಮಗಳೂರು,ದಕ್ಷಿಣ ಕನ್ನಡ, ಉತ್ತರ ಕನ್ನಡ , ಉಡುಪಿ, ಕೊಡಗು ಜಿಲ್ಲೆಗಳ ಮಲೆನಾಡು ಮತ್ತು ಅರೆ ಮಲೆನಾಡು ಪ್ರದೇಶಗಳ ಸಮಸ್ಯೆಗಳಿಗೆ ಕೆಲವು ಸ್ಪಷ್ಟನೆ ನೀಡಬೇಕು. ಕೆಲವು ಕಾನೂನಾತ್ಮಕ ಬದಲಾವಣೆಗಳನ್ನು ತರಬೇಕು. ಕೇಂದ್ರ ಸರ್ಕಾರ ನಿರ್ಣಯ …

ಅರಣ್ಯ ಇಲಾಖೆಗೆ ಸಂಬಂಧಿಸಿದಂತೆ ಮೇ ಮೊದಲ ವಾರದಲ್ಲಿ ವಿಶೇಷ ಸಭೆ Read More »

ವಸತಿ ಸಮುಚ್ಚಯ ಕಾರ್ಯಕ್ರಮ

ವಮೊಗ್ಗ : ಸುರಭಿ ಗೋಶಾಲೆ ಮತ್ತು ಶಿವಮೊಗ್ಗ ಜಿಲ್ಲಾ ಬ್ರಾಹ್ಮಣ ಮಹಾಸಭಾ (ರಿ) ಪ್ರಾಯೋಜಿತ ಮಂಡೇನಕೊಪ್ಪ ಎನ್ ಆರ್ ಪುರ ರಸ್ತೆಯಲ್ಲಿ ನಿರ್ಮಿಸಿರುವ ವಸತಿ ಸಮುಚ್ಚಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾಯಿತು. ಜಿಲ್ಲಾ ಬ್ರಾಹ್ಮಣ ಮಹಾಸಭೆಯು ಗೋ ಸಂರಕ್ಷಣೆಯ ಮಹತ್ಕಾರ್ಯದಲ್ಲಿ ತೊಡಗಿರುವುದು ಹಾಗೂ ಸುರಭಿ ಗೋಶಾಲೆಯೊಂದಿಗೆ ಕೈ ಜೋಡಿಸಿರುವುದು ಪ್ರಶಂಸನೀಯ. ಗೋವಿನ ಸಂರಕ್ಷಣೆ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ.ಇದರೊಂದಿಗೆ ಗೋ ಸಂರಕ್ಷಣೆ ಮಾಡುವಂತಹ ಗೋಶಾಲೆಗಳಿಗೆ ಸಹಕಾರ ನೀಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಕಾರ್ಯಕ್ರಮದಲ್ಲಿ ಹಿರಿಯರು ಪದ್ಮಶ್ರೀ …

ವಸತಿ ಸಮುಚ್ಚಯ ಕಾರ್ಯಕ್ರಮ Read More »

ಶ್ರೀ ಮಹಾಗಣಪತಿ ದೇವರ ರಥೋತ್ಸವ

ಸಾಗರ : ಪ್ರತಿ ಚಾಂದ್ರಮಾನ ಯುಗಾದಿಯಾದ ನಂತರ ಬರುವ ಚೈತ್ರ ಶುದ್ಧ ಚತುರ್ಥಿಯಂದು ಇತಿಹಾಸ ಪ್ರಸಿದ್ಧ ಸಾಗರದ ಗಣಪನ ಜಾತ್ರೆ ನಡೆಯುತ್ತದೆ. ಸುಮಾರು ನಾಲ್ಕು ಶತಮಾನದಷ್ಟು ದೊಡ್ಡ ಇತಿಹಾಸ ಇರುವ ಈ ಜಾತ್ರೆಯಲ್ಲಿ ರತ್ನ ಖಚಿತ ಸ್ವರ್ಣ ಕವಚ ಮಹಾಗಣಪತಿಯನ್ನು ರಥದ ಮೇಲೆ ಕುಳ್ಳಿರಿಸಿ ರಾಜ ಬೀದಿ ಉತ್ಸವ ಮಾಡಲಾಗುತ್ತದೆ. ಕೆಳದಿ ಸಾಗರದ ರಕ್ಷಣೆ ಮತ್ತು ಅಭಿವೃದ್ದಿಗಾಗಿ 1623 ರಲ್ಲಿ ಕೆಳದಿಯ ಅರಸ ಹಿರಿಯ ವೆಂಕಟಪ್ಪ ನಾಯಕರಿಂದ ದಶಭುಜ ಮಹಾಗಣಪತಿಯ ಪ್ರತಿಷ್ಠಾಪನೆಗೊಂಡ ಬಳಿಕ ಪ್ರತಿವರ್ಷವೂ ಜಾತ್ರೆ ನಡೆಯುತ್ತಿದೆ.

ಆನೆಗಳ ಉಪಟಳ ನಿಯಂತ್ರಣಕ್ಕೆ ಕ್ರಮ

ಶಿವಮೊಗ್ಗ, ಮಾರ್ಚ್ ,19 : ತೀರ್ಥಹಳ್ಳಿ ಸಮೀಪದ ಶಿಂಗನಬಿದರೆ, ತಳಲೆ, ಕೀಗಡಿ ಮತ್ತು ಮಂಡಗದ್ದೆ ಗ್ರಾಮಗಳ ಸುತ್ತಮುತ್ತಲಿನ ತೋಟಗಳಲ್ಲಿ ಆನೆಗಳ ಹಾವಳಿಯಿಂದಾಗಿ ರೈತರು ಬೆಳೆದ ಅಡಿಕೆ ಗಿಡಗಳು ಹಾನಿಗೊಳಗಾಗಿದ್ದು, ಅದರ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಆರಗಜ್ಞಾನೇಂದ್ರ ಅವರು ಹೇಳಿದರು. ಅವರು ಇಂದು ಆನೆಗಳಿಂದ ಹಾನಿಗೊಳಗಾದ ಕೀಗಡಿ ಗ್ರಾಮದ ರೈತರ ತೋಟಕ್ಕೆಅರಣ್ಯಾಧಿಕಾರಿಗಳೊಂದಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿದ ಅವರು, ಈಗಾಗಲೇ ಆನೆಗಳನ್ನು ಅರಣ್ಯಕ್ಕೆ ಹಿಂದಿರುಗಿಸಲು ಅರಣ್ಯಾಧಿಕಾರಿಗಳು ಕಳೆದ ೨ವಾರಗಳಿಂದ …

ಆನೆಗಳ ಉಪಟಳ ನಿಯಂತ್ರಣಕ್ಕೆ ಕ್ರಮ Read More »

Translate »
Scroll to Top