ಹಾಸನ

ದೇವರಾಜೇಗೌಡಗೆ ಮತ್ತಷ್ಟು ಸಂಕಷ್ಟ: ಹಳೇ ಕೇಸ್​ಗಳು ರೀ ಓಪನ್​

ಹಾಸನ: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಿಜೆಪಿ) ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಬಂಧಿಸಲಾಗಿದೆ. ವಕೀಲ ದೇವರಾಜೇಗೌಡ ವಿರುದ್ಧದ ಅತ್ಯಾಚಾರ ಪ್ರಕರಣ ಜೊತೆಗೆ ಹಲವು ಹಳೆ ಕೇಸ್ಗಳನ್ನು ವಿಶೇಷ ತನಿಖಾ ಅಧಿಕಾರಿಗಳು ರೀ ಓಪನ್ ಮಾಡಿದ್ದಾರೆ. ದೇವರಾಜೇಗೌಡ ವಿರುದ್ಧ ಚೀಟಿಂಗ್ ಕೇಸ್ ಸೇರಿದಂತೆ 5ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಅತ್ಯಾಚಾರ ಪ್ರಕರಣ ಜೊತೆಗೆ ಹಳೇ ಪ್ರಕರಣಗಳ ತನಿಖೆಯೂ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ದೇವರಾಜೇಗೌಡರನ್ನು ಎಸ್ಐಟಿ ಅಧಿಕಾರಿಗಳು ಸೋಮವಾರ (ಮೇ13) ಬಾಡಿ ವಾರಂಟ್ ಮೇಲೆ ವಶಕ್ಕೆ ಪಡೆಯುವ ಸಾಧ್ಯತೆ ಇದೆ.

‘ನಮ್ಮ ಕುಟುಂಬವನ್ನು ರಾಜಕೀಯವಾಗಿ ದುರ್ಬಲಗೊಳಿಸಲು ಷಡ್ಯಂತ್ರ’: ಸೂರಜ್ ರೇವಣ್ಣ

ಹಾಸನ: ತಮ್ಮ ಸಹೋದರ ಹಾಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ತಮ್ಮ ಕುಟುಂಬವನ್ನು ರಾಜಕೀಯವಾಗಿ ದರ್ಬೀಲಗೊಳಿಸುವ ಷಡ್ಯಂತ್ರವಾಗಿದೆ ಎಂದು ಜೆಡಿಎಸ್ ಎಂಎಲ್ ಸಿ ಸೂರಜ್ ರೇವಣ್ಣ ಗುರುವಾರ ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ವಿಡಿಯೋ ಡಿಕೆಶಿ ಕೈತಲುಪಿದ್ದು ಹೇಗೆ? ಟಿಕೆಟ್ ನೀಡದಂತೆ ಬಿಜೆಪಿ ವರಿಷ್ಠರಿಗೆ ಪತ್ರ ಬರೆದಿದ್ದರೇ?: ಮಾಹಿತಿ ಬಿಚ್ಚಿಟ್ಟ ದೇವರಾಜೇಗೌಡ

ಹಾಸನ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮಗ, ಲೋಕಸಭೆ ಚುನಾವಣೆಯ ಎನ್ ಡಿಎ ಮೈತ್ರಿಕೂಟ ಅಭ್ರ್ಥಿ್ ಹಾಸನ ಕ್ಷೇತ್ರದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಕೇಳಿಬರುತ್ತಿರುವ ಲೈಂಗಿಕ ದರ್ಜ ನ್ಯಗಳ ಪೆನ್ ಡ್ರೈವ್ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸದ್ದುಮಾಡುತ್ತಿದೆ.

ಹಾಸನ ಪ್ರಕರಣ: ಉಪ್ಪು ತಿಂದವರು ನೀರು ಕುಡಿಯುತ್ತಾರೆ ಎಂದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಹಾಸನ ಜಿಲ್ಲೆಯ ಪ್ರಕರಣದ ತನಿಖೆಗೆ ಮುಖ್ಯಮಂತ್ರಿಗಳು ವಿಶೇಷ ತನಿಖಾ ದಳ (ಎಸ್ಐಟಿ) ರಚನೆ ಮಾಡಿದ್ದಾರೆ. ಈ ನೆಲದ ಕಾನೂನಿನ ಪ್ರಕಾರ ಯಾರೇ ತಪ್ಪು ಮಾಡಿರಲಿ.. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರದ  ಅನ್ಯಾಯವನ್ನು ಸಮರ್ಥನೆ ಮಾಡಿಕೊಂಡು ಪಕ್ಷ ರಾಜಕಾರಣಕ್ಕಾಗಿ  ಬಿಜೆಪಿ ಕನ್ನಡಿಗರಿಗೆ ದ್ರೋಹ ಮಾಡುತ್ತಿದೆ: ಮುಖ್ಯಮಂತ್ರಿ  ಸಿದ್ದರಾಮಯ್ಯ

ಹಾಸನ : ಬಿಜೆಪಿಯವರು ಕೇಂದ್ರ ಸರ್ಕಾರದ ಅನ್ಯಾಯವನ್ನು ಸಮರ್ಥನೆ ಮಾಡಿಕೊಂಡು ಪಕ್ಷ ರಾಜಕಾರಣಕ್ಕಾಗಿ ಕನ್ನಡಿಗರಿಗೆ ದ್ರೋಹ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸುಳ್ಳಿನ ಕಾರ್ಖಾನೆ ಬಿಜೆಪಿಯವರಿಗೆ ಪ್ರತಿ ಕ್ಷೇತ್ರಗಳ ಅಭಿವೃದ್ಧಿ ಕಾರ್ಯಗಳ ಮೂಲಕವೇ ಉತ್ತರಿಸುತ್ತಿದ್ದೇವೆ: ಸಿ.ಎಂ.ಸಿದ್ದರಾಮಯ್ಯ

ಅರಸೀಕೆರೆ (ಬಾಣಾವಾರ): ರಾಜ್ಯಕ್ಕೆ ವಂಚಿಸಿದ ಬಿಜೆಪಿ, ರಾಜ್ಯಕ್ಕೆ ಆದ ಅನ್ಯಾಯವನ್ನು ಸಮರ್ಥಿಸಿ ಕೇಂದ್ರದ ಪರವಾಗಿ ಮಾತನಾಡುತ್ತಿರುವ ಬಿಜೆಪಿಯವರು ರಾಜ್ಯದ ಜನರ ಪರವಾಗಿ ನಿಲ್ಲುತ್ತಾರಾ ನೀವೇ ತೀರ್ಮಾನಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ರಾಜ್ಯ ಸರಕಾರದ ಆಯುಷ್ಯದ ಬಗ್ಗೆ ಹೆಚ್.ಡಿ.ಕುಮಾರಸ್ವಾಮಿ ಸ್ಫೋಟಕ ಮಾಹಿತಿ

ಹಾಸನ: ತಮ್ಮ ಅಕ್ರಮಗಳಿಂದ ಪಾರಾಗಲು ಬಿಜೆಪಿ ಕೇಂದ್ರ ನಾಯಕರ ಜತೆ ಚೌಕಾಸಿ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರದ ಪ್ರಭಾವೀ ಮಂತ್ರಿಯೊಬ್ಬರು ಐವತ್ತು-ಅರವತ್ತು ಶಾಸಕರನ್ನು ಕರೆದುಕೊಂಡು ಹೋಗಲು ಸಿದ್ಧವಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಡಿಕೆಶಿ ತಮ್ಮ ಲೆಟರ್‌ಹೆಡ್‌ಗಳನ್ನು ಸ್ವಂತಕ್ಕೆ ಬಳಸಿದ್ದಾರೆ ಎಂದು ಆರೋಪ

ಹಾಸನ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ದದ ಸಿಬಿಐ ತನಿಖೆ ವಾಪಸ್ ಪಡೆಯುವ ನಿರ್ಧಾರವನ್ನು ಸಂಪುಟದಲ್ಲಿ ತೆಗೆದುಕೊಳ್ಳುವ ಮೂಲಕ ಸಿದ್ದರಾಮಯ್ಯ ನೇತೃತ್ವದ ಸರಕಾರ ಡಿ.ಕೆ.ಶಿವಕುಮಾರ್ ಪಾದದಡಿಯಲ್ಲಿ ಬಿದ್ದಿದೆ ಎನ್ನುವುದು ಸಾಬೀರಾದಂತೆ ಆಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ಭಸ್ಮಾಸುರರಂತಾಗದೆ ರೈತರ ಹಿತವನ್ನು ಕಾಯುವಂತವರಾಗಿ: ಅಧಿಕಾರಿಗಳಿಗೆ ಕೃಷ್ಣ ಬೈರೇಗೌಡ ಕಿವಿಮಾತು

ಹಾಸನ: ಜಿಲ್ಲೆಯಲ್ಲಿ ಈಗಾಗಲೇ ಬೆಳೆ ಸಮೀಕ್ಷೆ ಮುಗಿದಿದೆ. ಆದರೆ, ರೈತರ ಒಟ್ಟು ಜಮೀನಿನ ವಿಸ್ತೀರ್ಣದ ಮಾಹಿತಿ ನಿಖರವಾಗಿ ನಮೂದಿಸಲಾಗಿಲ್ಲ. ಎರಡು ತಿಂಗಳ ಹಿಂದೆಯೇ ಈ ಬಗ್ಗೆ ಖಡಕ್ ಸೂಚನೆ ನೀಡಿದ್ದರೂ ಸರ್ಕಾರದ ಸೂಚನೆ ಪಾಲಿಸಲು ನಿಮಗೇನು ಕಷ್ಟ? ಎಂದು ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಕಿಡಿಕಾರಿದರು.

ವಿಪಕ್ಷ ಸ್ಥಾನದ ಕೆಲಸ ನಿಮ್ಮಿಂದ ಕಲಿಯಬೇಕಿಲ್ಲ ಎಂದು ಸಿಎಂಗೆ ಹೆಚ್ಡಿಕೆ ತಿರುಗೇಟು

ಹಾಸನ: ಕದ್ದ ಮಾಲು ಹ್ಯುಬ್ಲೋಟ್ ವಾಚ್ ಕಟ್ಟಿಕೊಂಡು ಶೋಕಿ ಮಾಡಿದ ನೀವು ನನ್ನ ಬಗ್ಗೆ ಮಾತನಾಡುತ್ತೀರಾ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

Translate »
Scroll to Top