ಹುಬ್ಬಳ್ಳಿ

ಚುನಾವಣೆ ವೇಳೆ ಮಾತ್ರ ಬಣ್ಣ ಬಣ್ಣದ ಕಥೆ ಕಟ್ಟುತ್ತದೆ ಕಾಂಗ್ರೆಸ್- ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪ

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷ ಚುನಾವಣೆ ವೇಳೆ ಮಾತ್ರ ಬಡವರ ಪರ, ಪರಿಶಿಷ್ಟರ ಪರ ಎನ್ನುತ್ತ ಬಣ್ಣ ಬಣ್ಣದ ಕತೆ ಕಟ್ಟುತ್ತದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಟೀಕಿಸಿದ್ದಾರೆ.

ಸಾಮಾಜಿಕ ಜಾಲತಾಣಗಳ ದುರ್ಬಳಕೆ ನಿಯಂತ್ರಿಸಿ: ಸರ್ಕಾರಕ್ಕೆ ಇಂದ್ರಜಿತ್ ಲಂಕೇಶ್ ಮನವಿ

ಹುಬ್ಬಳ್ಳಿ: ಸಾಮಾಜಿಕ ಜಾಲತಾಣಗಳ ಮೂಲಕ ಕೆಲವರು ದ್ವೇಷ ಹರಡುವ, ತೇಜೋವಧೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಈ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಬೇಕು. ಅಂತವರ ವಿರುದ್ದ ಸೈಬರ್ ಕ್ರೈಂ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನಟ, ನರ್ದೇರಶಕ ಇಂದ್ರಜೀತ್ ಲಂಕೇಶ್ ಅವರು ಒತ್ತಾಯಿಸಿದ್ದಾರೆ.

ಹೊಸ ಖಾತೆಗಳ ಅಧಿಕಾರ ಸ್ವೀಕರಿಸಿದ ಪ್ರಲ್ಹಾದ ಜೋಶಿ: ಶುಭ ಹಾರೈಸಿದ ಪತ್ನಿ ಜ್ಯೋತಿ ಜೋಶಿ

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ NDA ಸರ್ಕಾರದಲ್ಲಿ ಎರಡನೇ ಬಾರಿ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಇಂದು ಅಧಿಕಾರ ವಹಿಸಿಕೊಂಡರು.

ಪ್ರಮಾಣ ವಚನಕ್ಕು ಮುನ್ನ ಬಿಎಸ್ ವೈ ಆಶೀರ್ವಾದ ಪಡೆದ ಪ್ರಲ್ಹಾದ ಜೋಶಿ – ಸಿಹಿ ತಿನಿಸಿ ಜೋಶಿ ಬೆನ್ನು ತಟ್ಟಿ ಬೆಂಬಲಿಸಿದ ಯಡಿಯೂರಪ್ಪ

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಅವಧಿ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರಮಾಣ ವಚನಕ್ಕೂ ಮುನ್ನ ರಾಜ್ಯ ಬಿಜೆಪಿ ವರಿಷ್ಠ ಬಿ.ಎಸ್. ಯಡಿಯೂರಪ್ಪ ಅವರ ಆಶೀರ್ವಾದ ಪಡೆದರು.

ಅಂಜಲಿ ಹತ್ಯೆ: ಅಕ್ಕನ ಕೊಲೆ ಬಗ್ಗೆ ಸಿಐಡಿ ಮುಂದೆ ಸ್ಫೋಟಕ ವಿಚಾರ ಬಿಚ್ಚಿಟ್ಟ ಸಹೋದರಿ ಯಶೋಧಾ

ಹುಬ್ಬಳ್ಳಿ: ನಗರದಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಆರೋಪಿ ಗಿರೀಶ್ ವಿಚಾರಣೆಯನ್ನು ಸಿಐಡಿ (CID) ಟೀಂ ಮುಂದುವರಿಸಿದೆ. ಬೆಂಡಿಗೇರಿ ಪೊಲೀಸ್ ಠಾಣೆಯಿಂದ ಕರೆತಂದು ವಿಚಾರಣೆ ಮಾಡಿದ್ದಾರೆ. ಕೊಲೆಯಾದ ಯುವತಿ ಅಂಜಲಿ ಮನೆ ಬಳಿ ಕೆಲವರ ವಿಚಾರಣೆ ಮಾಡಿದ್ದಾರೆ. ಜೊತೆಗೆ ಅಂಜಲಿ ಅಂಬಿಗೇರ ಮನೆಗೆ ಮೂವರು ಸಿಐಡಿ ಅಧಿಕಾರಿಗಳು ಭೇಟಿ ನೀಡಿ ವಿಚಾರಣೆ ಮಾಡಿದ್ದಾರೆ.

ಹುಬ್ಬಳ್ಳಿ ಹತ್ಯೆಗಳ ಹಿಂದೆ ವ್ಯಾಪಕ ಡ್ರಗ್ಸ್ ಮಾರಾಟ ದಂಧೆ: ಬಸನಗೌಡ ಪಾಟೀಲ್ ಯತ್ನಾಳ್

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ ಮತ್ತು ವಿಪರೀತ ಮಾದಕ ದ್ರವ್ಯ ದಂಧೆಯೇ ನೇಹಾ ಹಿರೇಮಠ ಮತ್ತು ಅಂಜಲಿ ಹತ್ಯೆಗೆಕಾರಣ ಎಂದು ಬಿಜೆಪಿ ಹಿರಿಯ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.

Anjali Ambiger murder case: ಹುಬ್ಬಳ್ಳಿ-ಧಾರವಾಡ ಡಿಸಿಪಿ ರಾಜೀವ್ ಅಮಾನತು!

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಲೋಪ ಎಸಗಿದ ಆರೋಪದ ಮೇರೆಗೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ರಾಜೀವ್ ಅವರನ್ನು ಅಮಾನತು ಮಾಡಲಾಗಿದೆ.

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಸಹೋದರಿ ಆತ್ಮಹತ್ಯೆಗೆ ಯತ್ನ

ಹುಬ್ಬಳ್ಳಿ: ಕೊಲೆಯಾದ ಅಂಜಲಿ ಅಂಬಿಗೇರ ಸಹೋದರಿ ಯಶೋಧ ಅಕ್ಕನ ಸಾವಿನಿಂದ ಮನನೊಂದು ಪಿನಾಯಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೆ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಯಶೋಧ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಅಂಜಲಿ ಹತ್ಯೆ ಪ್ರಕರಣ: ನಿತ್ಯ ನಡೆಯುವ ಕೆಲಸಗಳು ನಮಗೆ ಗೊತ್ತಾಗುವುದಿಲ್ಲ-ಸಂತೋಷ ಲಾಡ್​

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, “ನಿತ್ಯ ನಡೆಯುವ ಕೆಲಸಗಳು ನಮಗೆ ಗೊತ್ತಾಗುವುದಿಲ್ಲ” ಎಂದು ಹೇಳುವ ಮೂಲಕ ಕರ್ಮಿತಕ ಸಚಿವ ಸಂತೋಷ ಲಾಡ್ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯ ವಿರಾಪುರ ಓಣಿಯಲ್ಲಿರುವ ಕೊಲೆಯಾದ ಅಂಜಲಿ ಅಂಬಿಗೇರ (೨೧) ಮನೆಗೆ ಸಚಿವ ಸಂತೋಷ ಲಾಡ್ ಮತ್ತು ಶಾಸಕ ಪ್ರಸಾದ್ ಅಬ್ಬಯ್ಯ ಇಂದು (ಮೇ ೧೮) ನೀಡಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ, ಸಚಿವ ಸಂತೋಷ್ ಲಾಡ್, ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಬೇಕು ಅಂತ ಮನವಿ ಮಾಡುತ್ತೇನೆ ಎಂದರು.

ಹುಬ್ಬಳ್ಳಿ murder case: 3 ತಿಂಗಳಿಂದಲೇ ಅಂಜಲಿ ಹತ್ಯೆಗೆ ಪ್ಲಾನ್; ವಕೀಲರ ಬಳಿಯೂ ಮಾಹಿತಿ ಸಂಗ್ರಹ!

ಹುಬ್ಬಳ್ಳಿ: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ಹುಬ್ಬಳ್ಳಿಯ ಅಂಜಲಿ ಹತ್ಯೆಯ ಆರೋಪಿಯನ್ನು ಗುರುವಾರ ತಡರಾತ್ರಿ ಬಂಧಿಸಲಾಗಿದೆ. ಕೊಲೆ ಆರೋಪಿ ಗಿರೀಶ್ ಸಾವಂತ್ ಅನ್ನು ದಾವಣಗೆರೆ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೈಲ್ವೇ ಪೊಲೀಸರ ಸಹಾಯದಿಂದ ಗಿರೀಶ್ನನ್ನು ಬಂಧಿಸಲಾಗಿದೆ.

Translate »
Scroll to Top