ಜಿಲ್ಲೆಗಳು

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ರೈತರ ಸಾಲ ಮನ್ನಾ – ರಕ್ಷಾ ರಾಮಯ್ಯ: ವ್ಯಾಪಕ ಪ್ರಚಾರ

ನೆಲಮಂಗಲ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ನೆಲಮಂಗಲ ವಿಧಾನಸಭಾ ಕ್ಷೇತ್ರದ ಸೋಂಪುರ, ಸೋಲೂರು ಹೋಬಳಿ ಭಾಗಗಳಲ್ಲಿ ತೀವ್ರ ಪ್ರಚಾರ ನಡೆಸಿದರು.

ಶಿವಮೊಗ್ಗ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ : ಮೆರವಣಿಗೆಯಲ್ಲಿ ಭಾಗಿ

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾದ ಗೀತಾ ಶಿವರಾಜ್ ಕುಮಾರ್ ಬೃಹತ್ ಮೆರವಣಿಗೆಯಲ್ಲಿ ಬಂದು ನಾಮಪತ್ರ ಸಲ್ಲಿಸುವ ಮೊದಲು ಒಂದು ಸೆಟ್ ನ ನಾಮಪತ್ರ ಸಲ್ಲಿಸಿದ್ದಾರೆ.
ನಂತರ ಮಾಧ್ಯಮಗಳಿಗೆ ಮಾತನಾಡಿದ ಅಭ್ಯರ್ಥಿ ಗೀತ ಈ ಬಾರಿ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ. ಗ್ಯಾರೆಂಟಿಯಿಂದಾಗಿ ಜನ ಕಾಂಗ್ರೆಸ್ ಗೆ ಮತಹಾಕಲಿದ್ದಾರೆ. ಹೋದಕಡೆಯಲ್ಲ ಮಹಿಳೆಯರು ಹೆಚ್ಚಿನ ಒಲವು ತೋರುತ್ತಿದ್ದಾರೆ ಎಂದರು.
ಡಿಸಿಎಂ ಡಿಕೆ ಶಿವಕುಮಾರ್ ಶಿವಮೊಗ್ಗಕ್ಕೆ ಬಂದ ಮೇಲೆ ಮತ್ತೊಂದು ಸೆಟ್ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದರು.

ಹೊಸಪೇಟೆಯ ಉತ್ತರಾಧಿ ಮಠಕ್ಕೆ ದಲಿತರ ಪ್ರವೇಶ : ಸ್ವಾಗತ ಮಾಡಿದ ಅರ್ಚಕರು

ಹೊಸಪೇಟೆ: ಅಂಬೇಡ್ಕರ್ ಜಯಂತಿ ನಿಮಿತ್ತ ಉತ್ತರಾಧಿ ಮಠಕ್ಕೆ ದಲಿತ ಹಕ್ಕುಗಳ ಹೋರಾಟ ಸಮಿತಿಯಿಂದ ಪ್ರವೇಶ
ಎಲ್ಲರಿಗೂ ಸಮಾನ ಅವಕಾಶ ನೀಡಲಿ, ಎಲ್ಲರೂ ಮಠಕ್ಕೆ ಹೋಗಲಿ .ಉತ್ತರಾಧಿ ಮಠಕ್ಕೆ ಪ್ರವೇಶ ಮಾಡಿದ ದಲಿತರನ್ನು ಅರ್ಚಕರು, ಮಠದವರು ಸ್ವಾಗತಿಸಿದರು.

ಕನ್ನಡಿಗರಿಗೆ ಇಷ್ಟೆಲ್ಲಾ ಅನ್ಯಾಯವಾದರೂ ಬಿಜೆಪಿಯ ಸಂಸದರು ಈ ವಿಚಾರಗಳ ಬಗ್ಗೆ ಪ್ರಸ್ತಾಪ ಮಾಡಿದ್ದಾರೆಯೇ?ಮಾತನಾಡದಿದ್ದರೆ  ಲೋಕಸಭೆಗೆ ಯಾಕೆ  ಹೋಗಬೇಕು: ?*ಮುಖ್ಯಮಂತ್ರಿ  ಸಿದ್ದರಾಮಯ್ಯ

ತುಮಕೂರು: ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದ ಅನ್ಯಾಯವಾದರೂ ಒಂದು ದಿನ ಬಿಜೆಪಿಯ ಸಂಸದರು ಈ ವಿಚಾರಗಳ ಬಗ್ಗೆ ಪ್ರಸ್ತಾಪ ಮಾಡಿದ್ದಾರೆಯೇ? ಮಾತನಾಡ ಡಿದ್ದರೆ ಇವರು ಲೋಕಸಭೆಗೆ ಯಾಕೆ ಹೋಗಬೇಕು? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ತುಮಕೂರು ಲೋಕಸಭಾ ಚುನಾವಣೆಯ ತಮ್ಮ ಪಕ್ಷದ ಅಭ್ಯರ್ಥಿಯಾದ ಮುದ್ಧುಹನುಮೇಗೌಡ ಅವರ ಪರ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ನಂತರ ತಮ್ಮ ಅಭ್ಯರ್ಥಿಯ ಪರ ಮತದಾರರಲ್ಲಿ ಮತಯಾಚನೆ ಮಾಡಿ ಮಾತನಾಡಿದರು.

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

ಬಳ್ಳಾರಿ,ಏ.14: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿಶೇಷ ಘಟಕ ಅಡಿಯಲ್ಲಿ ಸಂವಿಧಾನದ ಹರಿಕಾರ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133 ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು.

ಭರವಸೆಗಳನ್ನು ಬಿಜೆಪಿ ಯಾವತ್ತೂ ಈಡೇರಿಸಿಲ್ಲ, ಮುಂದೆಯೂ ಈಡೇರಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಡಿಕೇರಿ,ಏ-14: ಕರ್ನಾಟಕದಲ್ಲಿ 2018 ರಲ್ಲಿ 600 ಭರವಸೆಗಳನ್ನು ಕೊಟ್ಟ ಬಿಜೆಪಿ 60 ಭರವಸೆಗಳನ್ನೂ ಈಡೇರಿಸಿಲ್ಲ. ಭರವಸೆಗಳನ್ನು ಬಿಜೆಪಿ ಯಾವತ್ತೂ ಈಡೇರಿಸಿಲ್ಲ, ಮುಂದೆಯೂ ಈಡೇರಿಸುವುದಿಲ್ಲ ಎಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಗಾಲ್ಫ್ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು.

ಮೋದಿ ಹುಟ್ಟಿಸಿದ ಭ್ರಮೆಗಳೆಲ್ಲಾ ಬೆತ್ತಲಾಗಿವೆ. ನೀವಿನ್ನೂ ಮೋದಿ ಭ್ರಮೆಯಲ್ಲಿದ್ಸೀರಾ: ಸಿ.ಎಂ.ಸಿದ್ದರಾಮಯ್ಯ ಪ್ರಶ್ನೆ

ಹುಣಸೂರು ಏ 13 : ಮೋದಿ ಹುಟ್ಟಿಸಿದ ಭ್ರಮೆಗಳೆಲ್ಲಾ ಬೆತ್ತಲಾಗಿವೆ. ನೀವಿನ್ನೂ ಮೋದಿ ಭ್ರಮೆಯಲ್ಲಿದ್ದೀರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕವಾಗಿ ಪ್ರಶ್ನಿಸಿದರು.
ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಜನಧ್ವನಿ-2 ಬೃಹತ್ ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತ್ತಾ ದೇಶದ ಜನತೆ ಹೇಗೆ ಭ್ರಮೆಗೆ ಒಳಗಾಗಿ ಮೋಸಹೋದರು ಎನ್ನುವುದನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು.

ದಿ ರಾಮೇಶ್ವರಂ ಕೆಫೆ ಬಾಂಬ್ ಆರೋಪಿಗಳ ಬಂಧನ ಎನ್.ಐ.ಎ ಹಾಗೂ ಕರ್ನಾಟಕ ಪೊಲೀಸ್ ಕಾರ್ಯ ಶ್ಲಾಘನೀಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ರಾಮೇಶ್ವರ ಕಾಫೆ ಬಾಂಬ್ ಸ್ಫೋಟದ ಪ್ರಮುಖ ಆರೋಪಿಗಳನ್ನು ಬಂಧಿಸಿರುವ ಎನ್.ಐ. ಎ ತಂಡ ಮತ್ತು ಕರ್ನಾಟಕ ಪೊಲೀಸ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಘಿಸಿದ್ದಾರೆ.
ಅವರು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಆರೋಪಿಗಳನ್ನು ಕೋಲ್ಕತ್ತಾದಿಂದ ಬೆಂಗಳೂರಿಗೆ ಕರೆ ತಂದ ನಂತರ ವಿಚಾರಣೆ ಮಾಡಿ ಹೆಚ್ಚಿನ ವಿವರ ಪಡೆಯಲಾಗುವುದು ಎಂದರು.

ನರೇಂದ್ರ ಮೋದಿ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದು, ಪ್ರಜಾಪ್ರಭುತ್ವ ವಿರೋಧಿಯಾಗಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಚಾಮರಾಜನಗರ: ನರೇಂದ್ರ ಮೋದಿ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದು, ಪ್ರಜಾಪ್ರಭುತ್ವ ವಿರೋಧಿಯಾಗಿದ್ದಾರೆ. ನರೇಂದ್ರ ಮೋದಿಯವರ ಸರ್ಕಾರದಲ್ಲಿ ಸಂವಿಧಾನ ಸುರಕ್ಷಿತವಾಗಿಲ್ಲ. ನಾವು ಉಳಿಯಬೇಕಾದರೆ ಸಂವಿಧಾನ ಉಳಿಯಲೇಬೇಕು. ಸಂವಿಧಾನ ಉಳಿಯಬೇಕಾದರೆ ಕಾಂಗ್ರೆಸ್ ಗೆ ಮತ ಹಾಕಬೇಕು. ಮುಸಲೋನಿ, ಹಿಟ್ಲರ್ ಸಿದ್ಧಾಂತದಲ್ಲಿ ನಂಬಿಕೆ ಬಿಜೆಪಿ ಇಟ್ಟಿದ್ದಾರೆ. ಈ ದೇಶದಲ್ಲಿ ಸಂವಿಧಾನ ಜಾರಿಯಾದಾಗ ಅದನ್ನು ವಿರೋಧಿಸಿದ್ದು ಆರ್.ಎಸ್.ಎಸ್. ಪ್ರಜಾಪ್ರಭುತ್ವ ಉಳಿಯಬೇಕಾದರೆ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು.
ಅವರು ಇಂದು ಕೊಳ್ಳೇಗಾಲ ನಗರದಲ್ಲಿ ಲೋಕಸಭಾ ಚುನಾವಣೆಯ ಅಭಯರ್ತೀ ಸುನೀಲ್ ಬೋಸ್ ಅವರ ಪರ ಪ್ರಜಾಧ್ವನಿ -02 ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದರು.

ಹತ್ತು ವರ್ಷದಲ್ಲಿ ಮೋದಿ ಏನು ಅಭಿವೃದ್ದಿ ಮಾಡಿದ್ದಾರೆ ಹೇಳಲಿ – ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ.

ಕಲಬುರಗಿ: ಕಲಬುರಗಿಯಲ್ಲಿ ಏಮ್ಸ್ ಸ್ಥಾಪಿಸಿ ಎಂದು ಮೋದಿಗೆ ಮನವಿ ಮಾಡಿದೆ ಆದರೆ ತಿರಸ್ಕಾರ ಮಾಡಿದರು

ಮೋದಿ ಅವರು ಇಲ್ಲಿಗೆ ಬಂದು ಹೋಗಿದ್ದಾರೆ ತಮ್ಮ ಹತ್ತು ವರ್ಷಗಳ ಅವಧಿಯಲ್ಲಿ ಈ ಭಾಗಕ್ಕೆ ಏನು ಕೊಟ್ಟಿದ್ದಾರೆ ಹೇಳಬೇಕಿತ್ತು ಎಂದು ರಾಜ್ಯ ಸಭೆ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ನಾಮಪತ್ರ ಸಲ್ಲಿಸಿದ ನಂತರ ಎನ್ ವಿ ಕಾಲೇಜು ಮೈದಾನದಲ್ಲಿ ನಡೆದ ಸಾರ್ವಜನಿಕ ಸಮಾರಂಭ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

Translate »
Scroll to Top