ಜಿಲ್ಲೆಗಳು

ರಾಯಚೂರಿನಲ್ಲಿ ಸಂಭ್ರಮ, ಸಡಗರದಿಂದ ಸ್ವಾತಂತ್ರ್ಯ ದಿನಾಚರಣೆ

ರಾಯಚೂರು : 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆ.15ರ ಗುರುವಾರ ದಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ದಿ ಹಾಗೂ ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶವನ್ನು ನೀಡಿದರು.

ನಮ್ಮ ರಾಜ್ಯದ ಗ್ಯಾರಂಟಿ ಯೋಜನೆಗಳು ರಾಷ್ಟ್ರಕ್ಕೆ ಮಾದರಿ – ಯಾವುದೇ ಬದಲಾವಣೆ ಅಗತ್ಯವಿಲ್ಲ: ಸಚಿವ ಎನ್‌ ಎಸ್‌ ಭೋಸರಾಜು

ವಿರಾಜಪೇಟೆ: ಕರ್ನಾಟಕ ರಾಜ್ಯದ ಗ್ಯಾರೆಂಟಿ ಯೋಜನೆಗಳು ರಾಷ್ಟ್ರಕ್ಕೆ ಮಾದರಿಯಾಗಿವೆ, ಇವುಗಳಲ್ಲಿ ಯಾವುದೇ ಬದಲಾವಣೆಯ ಅವಶ್ಯಕತೆಯಿಲ್ಲ ಹಾಗೂ ಆ ಬಗ್ಗೆ ಯಾವುದೇ ಚರ್ಚೆಗಳಾಗಿಲ್ಲ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತವಾರಿ ಸಚಿವರಾದ ಎನ್ ಎಸ್ ಭೋಸರಾಜು ಪ್ರತಿಕ್ರಿಯಿಸಿದರು.

ಚನ್ನಪಟ್ಟಣ ಉಪ ಚುನಾವಣೆ : ಯಾರಿಗೆ ಸಿಗಲಿದೆ ಟಿಕೆಟ್‍

ಬೆಂಗಳೂರು : ಚನ್ನಪಟ್ಟಣ ಉಪ ಚುನಾವಣೆ ಟಿಕೆಟ್ ಯಾರಿಗೆ ಎಂಬ ಕುತೂಹಲ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಟಿಕೆಟ್ ಗಾಗಿ ಸಿಪಿ ಯೋಗೇಶ್ವರ್ ಹರ ಸಾಹಸ ಪಡುತ್ತಿದ್ದು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ನಡೆಯ ಮೇಲೆ ಯಾರಿಗೆ ಟಿಕೆಟ್ ಎಂಬುದು ಅಂತಿಮ ನಿರ್ಧಾರವಾಗಲಿದೆ.

ಹೊಸಪೇಟೆ ಬೈಪಾಸ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್|ಸಂಚಾರಿ ಪೊಲೀಸ್‌ರಿಲ್ಲದೆ ಸವಾರರ ಪರದಾಟ

ಬಳ್ಳಾರಿ : ಬಳ್ಳಾರಿ ನಗರದ ಹೊರವಲಯದ ಹೊಸಪೇಟೆ ಬೈಪಾಸ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿ ವಾಹನ ಸವಾರರು ಪರದಾಡುವ ಪರಿಸ್ಥಿತಿ ಏರ್ಪಟ್ಟಿದೆ. ವಾಹನ ದಟ್ಟಣೆ ನಿರ್ವಹಿಸಲು ಸಂಚಾರಿ ಪೊಲೀಸ್ರು ಕೂಡಾ ಇಲ್ಲದ ಕಾರಣ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಿ ಸಂಚಾರ ಅಸ್ತವ್ಯಸ್ತವಾಗಿತ್ತು.

ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯಲ್ಲಿ ಎರಡು ದಿನಗಳ ‘ಅಂತರ್‌ವಿಭಾಗೀಯ ಯುವಜನೋತ್ಸವ-2024’

ಬಳ್ಳಾರಿ : ಸಾಂಸ್ಕೃತಿಕ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರಲು, ಪಠ್ಯೇತರ ಚಟುವಟಿಕೆಗಳನ್ನು ಉತ್ತೇಜಿಸಲು ಪೂರಕವಾಗಿದ್ದು, ವಿಶ್ವವಿದ್ಯಾಲಯದ ಸಾಂಸ್ಕೃತಿಕ ವೇದಿಕೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಿಸಲು ಸೂಕ್ತವಾಗಿವೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಮಾಜಿ ಅಧ್ಯಕ್ಷರು ಹಾಗೂ ಸಾಹಿತಿಗಳಾದ ಸಿದ್ದರಾಮ ಕಲ್ಮಠ ಅವರು ಹೇಳಿದರು.

ಶಿಕ್ಷಕಿಗೆ ಅಶ್ಲೀಲ ಮೇಸೆಜ್ ಕಳಿಸಿ ಧರ್ಮದೇಟು ತಿಂದ ಪ್ರಭಾರ ಪ್ರಾಚಾರ್ಯ

ರಾಯಚೂರು: ತರಬೇತಿಗೆ ಬಂದಿದ್ದ ಶಿಕ್ಷಕಿಯ ಜೊತೆ ಅನುಚಿತವಾಗಿ ವರ್ತಿಸಿ ಅಶ್ಲೀಲ ಮೆಸೇಜ್ ಕಳುಹಿಸಿದ ಆರೋಪದ ಮೇಲೆ ಶಾಲೆಯ ಪ್ರಭಾರ ಪ್ರಾಚಾರ್ಯಗೆ ಜನರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಗರದ ಹೊರವಲಯದಲ್ಲಿರುವ ಯರಮರಸನ ಆದರ್ಶ ವಿದ್ಯಾಲಯದಲ್ಲಿ ನಡೆದಿದೆ

ಎಲಿಮೆಂಟ್ ಸ್ಟಾಫ್‌ಲಾಗ್ ಗೇಟ್ ತಯಾರಿಸಿ ಅಳವಡಿಸಲು ಕ್ರಮ: ಸಿಎಂ ಸಿದ್ಧರಾಮಯ್ಯ

ಕೊಪ್ಪಳ : ತುಂಗಭದ್ರಾ ಜಲಾಶಯದ 19ನೇ ಗೇಟ್ ಚೈನ್ ಲಿಂಕ್ ಕಟ್ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಆಗಸ್ಟ್ 13ರಂದು ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿ ತುಂಗಭದ್ರಾ ಆಣೆಕಟ್ಟು ಪರಿಶೀಲನೆ ಮತ್ತು ವೀಕ್ಷಣೆ ಮಾಡಿದರು.

ಜಲಾಶಯ ಗೇಟ್ ದುರಸ್ತಿ ಕಾರ್ಯ ತ್ವರಿತವಾಗಿ ಮುಗಿಸಲು ಸೂಚನೆ

ಹೊಸಪೇಟೆ : ತುಂಗಭದ್ರಾ ಜಲಾಶಯ ಗೇಟ್ ನ ದುರಸ್ತಿಯನ್ನು ತ್ವರಿತವಾಗಿ ಮುಗಿಸಲು ಸಂಬಂಧಪಟ್ಟವರಿಗೆ ಸೂಚಿಸಲಾಗಿದ್ದು, ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ತಪ್ಪು ಮಾಹಿತಿ ನೀಡಿದ ಅಧಿಕಾರಿಗಳು : ಗರಂ ಆದ ಸಚಿವ ಪರಮೇಶ್ವರ್

ತುಮಕೂರು : ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗೆ ಸಂಬಂಧಿಸಿದಂತೆ ಶೇ.59.51ರಷ್ಟು ಮಾತ್ರ ತೆರಿಗೆ ಸಂಗ್ರಹಿಸಲಾಗಿದ್ದು, ಬಾಕಿ ಇರುವ ಆಸ್ತಿ ತೆರಿಗೆ, ಅಂಗಡಿ ಮಳಿಗೆಗಳ ಬಾಡಿಕೆ ವಸೂಲಾತಿಯನ್ನು ಇನ್ನೆರಡು ತಿಂಗಳೊಳಗಾಗಿ ಮಾಡಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು.

ಓದುವ ಹವ್ಯಾಸ ಬೆಳೆಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ

ತುಮಕೂರು: ಉತ್ತಮ ಭವಿಷ್ಯಕ್ಕಾಗಿ ವಿದ್ಯಾರ್ಥಿಗಳು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕೆಂದು
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಕರೆ ನೀಡಿದರು.

Translate »
Scroll to Top